ಕಾಂಗ್ರೆಸ್ ಅವಧಿಯಲ್ಲಿ ನಡೆದ ಭಯೋತ್ಪಾದನೆ ತಿಳಿಯಲು ‘ದಿ ಕಾಶ್ಮೀರ್ ಫೈಲ್ಸ್’ ನೋಡಿ: ಅಮಿತ್ ಶಾ

Public TV
1 Min Read

ಗಾಂಧೀನಗರ: ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಕಾಶ್ಮೀರ ಕಣಿವೆಯಲ್ಲಿ ದೌರ್ಜನ್ಯ ಮತ್ತು ಭಯೋತ್ಪಾದನೆ ಹೇಗೆ ನಡೆದಿದೆ ಎಂಬುವುದನ್ನು ತಿಳಿಯಲು ಜನರು ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ನೋಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್‍ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತ ನಡೆಸುತ್ತಿದ್ದ ವೇಳೆ ಕಾಶ್ಮೀರದಲ್ಲಿ ಹೇಗೆ ದೌರ್ಜನ್ಯ ಮತ್ತು ಭಯೋತ್ಪಾದನೆ ನಡೆದಿದೆ ಎಂದು ತಿಳಿದುಕೊಳ್ಳಲು ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ನೋಡದೇ ಇರುವವರು ನೋಡಬೇಕು ಎಂದಿದ್ದಾರೆ. ಇದನ್ನೂ ಓದಿ: ನಿಶ್ಚಿತಾರ್ಥ ಮಾಡಿಕೊಂಡ ಸಂಜನಾ ಸಹೋದರಿ ನಿಕ್ಕಿ ಗಲ್ರಾನಿ

ನೀವು ನರೇಂದ್ರ ಮೋದಿ ಅವರನ್ನು ಎರಡನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡಿದಾಗ, ಅವರು 2019ರ ಆಗಸ್ಟ್ 5 ರಂದು 370ನೇ ವಿಧಿಯನ್ನು ತೆಗೆದುಹಾಕಿದರು. ನರೇಂದ್ರ ಮೋದಿಯಂತಹ ಬಲವಾದ ಇಚ್ಛಾಶಕ್ತಿಯುಳ್ಳ ನಾಯಕರಿದ್ದರೆ, ದೇಶವನ್ನು ಮುನ್ನಡೆಸುತ್ತಾರೆ, ಇವರಂತೆ ಬೇರೆ ಯಾರಿಗೂ ಇದು ಸಾಧ್ಯವಾಗುವುದಿಲ್ಲ ಎಂದು ದೇಶದ ಜನತೆ ಅರಿತುಕೊಂಡಿದ್ದಾರೆ.

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ನೈಜಘಟನೆ ಆಧಾರಿತ ಸಿನಿಮಾ ದಿ ಕಾಶ್ಮೀರ್ ಫೈಲ್ಸ್. 1990ರ ದಶಕದ ಆರಂಭದಲ್ಲಿ ಕಾಶ್ಮೀರದಲ್ಲಿ ಪಂಡಿತರು ಅನುಭವಿಸುವ ತೊಂದರೆ, ದೌರ್ಜನ್ಯದ ಕುರಿತು ಈ ಚಿತ್ರವನ್ನು ತೋರಿಸಲಾಗಿದೆ. ಈ ಸಿನಿಮಾಕ್ಕೆ ಬಿಜೆಪಿ ಸರ್ಕಾರವು ಹಲವು ರಾಜ್ಯಗಳಲ್ಲಿ ತೆರಿಗೆ ವಿನಾಯಿತಿ ನೀಡಿದೆ. ಇದನ್ನೂ ಓದಿ: ಫ್ಯಾನ್ಸ್ ಜೊತೆ ‘ಜೇಮ್ಸ್’ ವೀಕ್ಷಿಸಿದ ಶಿವಣ್ಣ ದಂಪತಿ – ಏನ್ ಹೇಳಲಿ ನನ್ನ ತಮ್ಮನ ಆ್ಯಕ್ಟಿಂಗ್ ಬಗ್ಗೆ

Share This Article
Leave a Comment

Leave a Reply

Your email address will not be published. Required fields are marked *