110 ಅಡಿ ದಾಟಿದ KRS ಡ್ಯಾಂ ನೀರಿನ ಮಟ್ಟ

By
1 Min Read

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯಕ್ಕೆ (KRS Dam) 36,674 ಕ್ಯುಸೆ‌ಕ್‌ ಒಳಹರಿವು ಇದ್ದು ನೀರಿನ ಮಟ್ಟ 110.60 ಅಡಿಗೆ ಏರಿಕೆಯಾಗಿದೆ.

ಕಳೆದ ನಾಲ್ಕು‌ ದಿನಗಳಿಂದ ಕಾವೇರಿ ಜಲಾನಯನ (Cauvery Basin) ಪ್ರದೇಶದಲ್ಲಿ ಮಳೆಯ (Rain) ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಕೆಆರ್‌ಎಸ್‌ನಲ್ಲಿ 3 ಅಡಿ ನೀರು ಹೆಚ್ಚಳವಾಗಿದೆ. ಮಂಗಳವಾರ 107.60 ಅಡಿ ಇದ್ದ ಕೆಆರ್‌ಎಸ್ ನೀರಿನ ಮಟ್ಟ ಇಂದು 110.60 ಅಡಿಗೆ ಏರಿಕೆಯಾಗಿದೆ.  ಇದನ್ನೂ ಓದಿ: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ: ಮಸೂದೆಯಲ್ಲಿ ಏನಿದೆ? ಕನ್ನಡಿಗರಿಗೆ ಅರ್ಹತೆ ಹೇಗೆ? ಯಾವ ಹುದ್ದೆಯಲ್ಲಿ ಎಷ್ಟು?

 

ಕಳೆದ 24 ಗಂಟೆಯಲ್ಲಿ ಕೆಆರ್‌ಎಸ್‌ಗೆ 3 ಟಿಎಂಸಿ ನೀರು ಹರಿದು ಬಂದಿದೆ. ನಿನ್ನೆ ಕೆಆರ್‌ಎಸ್‌ನಲ್ಲಿ 29.378 ಟಿಎಂಸಿ ನೀರು ಸಂಗ್ರವಾಗಿತ್ತು. ಇಂದು 32.330 ಟಿಎಂಸಿ ನೀರು ಸಂಗ್ರಹವಾಗಿದೆ.

ಹಾರಂಗಿ ಮತ್ತು ಕಬಿನಿಯಿಂದ ಭಾರೀ ಪ್ರಮಾಣದಲ್ಲಿ ನೀರನ್ನು ಹೊರ ಬಿಡುತ್ತಿರುವ ಕಾರಣ ಕೆಆರ್‌ಎಸ್‌ ಜಲಾಶಯದ ಒಳ ಹರಿವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ

ಜಲಾಶಯ ನೀರಿನ ಮಟ್ಟ
ಗರಿಷ್ಠ ಮಟ್ಟ – 124.80 ಅಡಿ
ಇಂದಿನ ಮಟ್ಟ – 110.60 ಅಡಿ
ಗರಿಷ್ಠ ಸಾಮರ್ಥ್ಯ – 49.452 ಟಿಎಂಸಿ
ಇಂದಿನ ಸಾಮರ್ಥ್ಯ – 32.330 ಟಿಎಂಸಿ
ಒಳ ಹರಿವು – 36,674 ಕ್ಯೂಸೆಕ್
ಹೊರ ಹರಿವು – 2,361 ಕ್ಯೂಸೆಕ್

Share This Article