ಮೈಸೂರು: ಪ್ರತಿ ತಿಂಗಳು ಹಣ ಕೊಡೋದಕ್ಕೆ ಕೆಲವು ತೊಡಕುಗಳಿವೆ. ಸದ್ಯ 3 ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ ಕೊಡ್ತಿದ್ದೇವೆ ಗ್ಯಾರಂಟಿ ಯೋಜನೆ ಅಧ್ಯಕ್ಷ ಹೆಚ್.ಎಂ ರೇವಣ್ಣ (H M Revanna) ಹೇಳಿದ್ದಾರೆ.
ಮೈಸೂರಿನಲ್ಲಿ (Mysuru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮಿ (Gruhalakshmi) ಹಣ ಕೊಡುತ್ತಿದ್ದೇವೆ. ಜಿಎಸ್‌ಟಿ ವಿಚಾರದಲ್ಲಿ 1 ಲಕ್ಷ 20 ಸಾವಿರ ಜನರಿಗೆ ಹಣ ಹೋಗಿರಲಿಲ್ಲ. ಅದರಲ್ಲಿ ಈಗ 58 ಸಾವಿರ ಜನರ ಸಮಸ್ಯೆಯನ್ನ ಬಗೆಹರಿಸಿದ್ದೇವೆ. ಉಳಿದ ಜನರ ಸಮಸ್ಯೆ ಬಗೆ ಹರಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಉಗ್ರರಿಗೆ ನೆರವು ನೀಡಿದ್ದ ಕೇಸ್ – ಎಎಸ್‌ಐ ಚಾಂದ್ ಪಾಷಾ ವಿರುದ್ಧ ಇಲಾಖೆ ಹಂತದ ತನಿಖೆಗೆ ಆದೇಶ
ನಾವು ಅಧಿಕಾರಕ್ಕೆ ಬಂದಾಗಿನಿಂದ ಗೃಹಲಕ್ಷ್ಮಿ ಹಣ ನಿಲ್ಲಿಸಿಲ್ಲ. ಪ್ರತಿ ತಿಂಗಳು ಹಣ ಕೊಡೋದಕ್ಕೆ ಕೆಲವು ತೊಡಕುಗಳಿವೆ. ಹೀಗಾಗಿ ಕೊಡಲು ಆಗುತ್ತಿಲ್ಲ ಎನ್ನುವ ಮೂಲಕ ಪ್ರತಿ ತಿಂಗಳ ಗೃಹಲಕ್ಷ್ಮಿ ಹಣ ಕೊಡಲು ಆಗಲ್ಲ ಎಂದು ಪರೋಕ್ಷವಾಗಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಅನಾಮಧೇಯ ಭಕ್ತನಿಂದ ಶಿರಡಿ ಸನ್ನಿಧಿಗೆ 59 ಲಕ್ಷದ ಚಿನ್ನದ ಕಿರೀಟ ಸೇರಿ 65 ಲಕ್ಷ ಮೌಲ್ಯದ ಆಭರಣ ದಾನ
ಸಿಎಂ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಿಎಂ ಬದಲಾವಣೆ ವಿಚಾರ ಹೈಕಮಾಂಡ್ ಮಟ್ಟದಲ್ಲಿ ಈ ಚರ್ಚೆ ನಡೆದಿಲ್ಲ. ಕೆಲವೊಂದಿಷ್ಟು ಗೊಂದಲಗಳು ಇತ್ತು. ಗೊಂದಲಗಳನ್ನು ಹೈಕಮಾಂಡ್ ಬಗೆಹರಿಸಿದೆ. ಸಿಎಂ ಕುರ್ಚಿಯ ವಿಚಾರದಲ್ಲಿ ನಾವು ಮಾಧ್ಯಮಗಳ ಮುಂದೆ ಮಾತನಾಡದಂತೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ಶಾಲಾ ಮಕ್ಕಳಿಗೆ ಬಸ್ ಫ್ರೀ – ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ
ಡಿಕೆಶಿ, ಸಿದ್ದರಾಮಯ್ಯ ಪಕ್ಷದ ಜೋಡೆತ್ತುಗಳು
ಸಭೆಗಳಲ್ಲಿ ಒಂದಿಬ್ಬರು ಶಾಸಕರ ಹೇಳಿಕೆಯ ಬಗ್ಗೆ ಚರ್ಚೆಯಾಗಿದೆ. ಯಾವ ಶಾಸಕರ ಬೆಂಬಲ ಯಾರಿಗೆ ಇದೆ ಎಂಬ ಪ್ರಶ್ನೆ ಈಗ ಯಾಕೆ ಬಂತು ಗೊತ್ತಿಲ್ಲ. ಡಿ.ಕೆ.ಶಿವಕುಮಾರ್ (D K Shivakumar), ಸಿದ್ದರಾಮಯ್ಯ (Siddaramaiah) ಅವರು ಜೋಡೆತ್ತಿನ ರೀತಿ ಪಕ್ಷ ಕಟ್ಟಿ ಪಕ್ಷವನ್ನ ಅಧಿಕಾರಕ್ಕೆ ತಂದಿದ್ದಾರೆ. ರಾಜಕಾರಣದಲ್ಲಿ ಎಲ್ಲರಿಗೂ ಆಸೆ ಇರುತ್ತದೆ. ಅಂತಿಮ ತೀರ್ಮಾನಗಳು ಹೈಕಮಾಂಡ್‌ಗೆ ಬಿಟ್ಟದ್ದು ಎಂದಿದ್ದಾರೆ.