ನ್ಯಾಯ ಸಿಗದಿದ್ರೆ ನಾವೂ ಟೆರರಿಸ್ಟ್‌ಗಳ ಜೊತೆ ಸೇರುತ್ತೇವೆ – ರಕ್ತದಲ್ಲಿ ಮೋದಿಗೆ ಪತ್ರ ಬರೆದ ನೊಂದ ಪಿಎಸ್‌ಐ ಅಭ್ಯರ್ಥಿಗಳು

Public TV
2 Min Read

ಬೆಂಗಳೂರು: PSI ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಂದ ಅಭ್ಯರ್ಥಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾನೆ.

ಕಲಬುರಗಿಯಿಂದ ಹುಟ್ಟಿಕೊಂಡ ಈ ಪ್ರಕರಣದ ನಂಟು ಇದೀಗ ಬೆಂಗಳೂರು, ಹಾಸನ, ಕೋಲಾರ ಸೇರಿ ರಾಜ್ಯಾದ್ಯಂತ ಹಬ್ಬುತ್ತಿದೆ. ಈ ಹೊತ್ತಿನಲ್ಲೇ, ನೊಂದ ಪಿಎಸ್‌ಐ ಅಭ್ಯರ್ಥಿಗಳು ರಕ್ತದಲ್ಲಿ ಬರೆದಿರುವ ಪತ್ರವೊಂದು ರಾಜ್ಯದ ಜನರ ಮನಕಲುಕುವಂತೆ ಮಾಡಿದೆ. ಇದನ್ನೂ ಓದಿ: ಬೆಳ್ಳಂ ಬೆಳಿಗ್ಗೆ ಗೃಹಿಣಿ ಬರ್ಬರ ಹತ್ಯೆ – ದೂರು ದಾಖಲಿಸಿದ್ದಕ್ಕೆ ಪ್ರಿಯತಮೆನ್ನೇ ಕೊಂದನಾ ಪ್ರಿಯಕರ?

modi (1)

ನೊಂದ ಅಭ್ಯರ್ಥಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ 2 ಪುಟಗಳ ಪತ್ರ ಬರೆದು ತಮಗೆ ನ್ಯಾಯ ಒದಗಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕಪಿಲ್ ಕ್ರಿಕೆಟ್ ಕ್ಲಬ್‍ನಿಂದ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರ – ವೃತ್ತಿಪರ ಕ್ರಿಕೆಟ್‍ಗೆ ಪೂರಕವಾಗಿ ಆಯೋಜನೆ

ಪತ್ರದಲ್ಲಿ ಏನಿದೆ?: ಪ್ರಧಾನಿ ಮೋದಿ ಅವರ ಬಗ್ಗೆ ನಮಗೆ ಅಪಾರ ಗೌರವವಿದೆ. ಕೆಲಸ ಮಾಡಿ ನ್ಯಾಯ ಕೊಡಿಸುತ್ತಾರೆ ಅನ್ನೋ ನಂಬಿಕೆಯಿದೆ. ಒಂದು ವೇಳೆ ನ್ಯಾಯ ಕೊಡಿಸದೇ ಹೊದರೆ ನಾವೂ ಮುಂದೆ ಟೆರರಿಸ್ಟ್‌ಗಳ ಜೊತೆ ಕೈಜೋಡಿಸುತ್ತೇವೆ.

ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳು ಹಣ ಇದ್ದವರಿಗೆ ಎನ್ನುವಂತಹ ವ್ಯವಸ್ಯೆ ಬಂದುಬಿಟ್ಟಿದೆ. ಸರ್ಕಾರದ ಈ ವ್ಯವಸ್ಥೆಯಿಂದ ನಾವು ಮಾನಸಿಕವಾಗಿ ಸತ್ತುಹೋಗಿದ್ದೇವೆ. ಆದ್ದರಿಂದ ಇನ್ನು ಮುಂದೆ ಸರ್ಕಾರಿ ಹುದ್ದೆಗೆ ಪರೀಕ್ಷೆಗಳನ್ನು ಬರೆಯುವುದಿಲ್ಲ. ಟೆರೆರಿಸ್ಟ್‌ಗಳು, ನಕ್ಸಲರ ಸಂಘಟನೆ ಸೇರಲು ಇಚ್ಛಿಸಿದ್ದೇವೆ. ಅವರ ಬಳಿ ಹಣ ಪಡೆದು ಬಡ ಕುಟುಂಬಕ್ಕೆ ನಾವು ಸಹಾಯ ಮಾಡುತ್ತೇವೆ. ನಾವು 8 ಮಂದಿ ಇದ್ದೇವೆ. ನಾವೆಲ್ಲರೂ ಈ ನಿರ್ಧಾರ ಮಾಡಿದ್ದೇವೆ. ಇದನ್ನೂ ಓದಿ: ಉದ್ದನೆ ಕೂದಲಿನ, ತುಟಿಗೆ ಬಣ್ಣ ಹಚ್ಚಿ ದೈತ ದಾಂಡಿಗನಾಗಿ ಗಮನಸೆಳೆದ ಸೈಮಂಡ್ಸ್ ಇನ್ನು ನೆನಪು ಮಾತ್ರ

psi scam

ಪಿಎಸ್‌ಐ ಪರೀಕ್ಷೆಯಲ್ಲಿ ಮೋಸ ಹೋದವರಿಗೆ ನ್ಯಾಯ ಸಿಗಬೇಕು. ಅನ್ಯಾಯ ಮಾಡಿದವರನ್ನು ಜೈಲಿಗೆ ಹಾಕಬೇಕು. ಬಳಿಕ 2021ರಲ್ಲಿ ನಡೆದ ಎಫ್‌ಡಿಎ ಪರೀಕ್ಷೆಯಲ್ಲೂ ಅಕ್ರಮ ನಡೆದಿದ್ದು, ಅದನ್ನು ಸಹ ತನಿಖೆ ಮಾಡಿ ನ್ಯಾಯ ಕೊಡಿಸಬೇಕು ಮೋದಿ ಜೀ ಎಂದು ಪತ್ರದ ಮೂಲಕ ನೊಂದ ಅಭ್ಯರ್ಥಿಗಳು ಕೋರಿದ್ದಾರೆ.

ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ಕುರಿತು ತನಿಖೆ ಆರಂಭಿಸಿರುವ ಸಿಐಡಿ ಪೊಲೀಸರು 55ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *