ಆತುರದ ನಿರ್ಧಾರದಿಂದ ತಪ್ಪು ಮಾಡಿದ್ದೇವೆ, ತಡವಾಗಿ ವಿಜಯೋತ್ಸವ ಆಚರಣೆ ಮಾಡ್ಬೋದಿತ್ತು: ಇಕ್ಬಾಲ್ ಹುಸೇನ್

Public TV
1 Min Read

ರಾಮನಗರ: ಎಲ್ಲರೂ ಇಷ್ಟಪಡುವ ಆರ್‌ಸಿಬಿ (RCB) ತಂಡ ಕಪ್ ಗೆದ್ದಿತ್ತು, ಆದರೆ ಅದರ ಸಂಭ್ರಮ ಮಾಡಲು ಹೋಗಿ ಸಾವು-ನೋವು ಸಂಭವಿಸಿದೆ. ತಡವಾಗಿ ಆಲೋಚನೆ ಮಾಡಿ ವಿಜಯೋತ್ಸವ ಆಚರಣೆ ಮಾಡಬಹುದಿತ್ತು ಎಂದು ಶಾಸಕ ಇಕ್ಬಾಲ್ ಹುಸೇನ್ (Iqbal Hussain) ಹೇಳಿದ್ದಾರೆ.

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ (Chinnaswamy Stampede) ಪ್ರಕರಣ ಸಂಬಂಧ ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು ತ್ಯಾಗ ಬಲಿದಾನದ ಪ್ರತೀಕವಾಗಿ ಬಕ್ರೀದ್ ಆಚರಣೆ ಮಾಡುತ್ತಿದ್ದೇವೆ. ಕಾಲ್ತುಳಿತದಲ್ಲಿ ಮೃತಪಟ್ಟ 11 ಜನರ ಆತ್ಮಕ್ಕೆ ಶಾಂತಿ ಕೋರಿ ಇಂದು ಪ್ರಾರ್ಥನೆ ಮಾಡಿದ್ದೇವೆ. ಎಲ್ಲಾ ಮಸೀದಿಗಳಲ್ಲೂ ಪ್ರಾರ್ಥನೆ ಸಲ್ಲಿಸಿದ್ದೇವೆ. ಈ ದುರ್ಘಟನೆ ನಡೆಯಬಾತದಿತ್ತು, ನಡೆದು ಹೋಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್ – ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ಬಾಂಬ್‌

ಸಿದ್ಧತೆ, ಭದ್ರತೆ ಮಾಡಿಕೊಂಡು ಕಾರ್ಯಕ್ರಮ ಮಾಡಬೇಕಿತ್ತು. ಆದರೆ ಆತುರದಿಂದ ಕಾರ್ಯಕ್ರಮ ಮಾಡಿ ತಪ್ಪು ಮಾಡಿದ್ದೇವೆ. ನಾವೂ ತಪ್ಪು ಮಾಡಿದ್ದೇವೆ, ಅಧಿಕಾರಿ ವರ್ಗದವರು ತಪ್ಪು ಮಾಡಿದ್ದಾರೆ. ಈ ಕಾರ್ಯಕ್ರಮಕ್ಕೆ ಅನುಮತಿ ಕೊಡಲೇ ಬಾರದಿತ್ತು. ಘಟನೆ ನಮಗೆ ಹೆಚ್ಚು ದುಖಃವನ್ನ ತಂದಿದೆ. ಘಟನೆಯನ್ನ ನಾವು ಖಂಡಿಸುತ್ತೇವೆ ಎಂದರು. ಇದನ್ನೂ ಓದಿ: ಬೆಂಗಳೂರು | ಕಾಲ್ತುಳಿತದಲ್ಲಿ 11 ಜನ ಸಾವು ಪ್ರಕರಣ – ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು

Share This Article