ಭಾರತದೊಂದಿಗಿನ ಸಮಸ್ಯೆಗಳನ್ನು ಮಾತುಕತೆ ಮೂಲಕ ಪರಿಹರಿಸಲು ಪಾಕ್‌ ಬಯಸುತ್ತೆ: ಪ್ರಧಾನಿ ಶೆಹಬಾಜ್

Public TV
2 Min Read

ನವದೆಹಲಿ: ಕಾಶ್ಮೀರ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನು ಭಾರತದೊಂದಿಗೆ ಮಾತುಕತೆಯ ಮೂಲಕ ಪರಿಹರಿಸಲು ಪಾಕಿಸ್ತಾನ ಬಯಸುತ್ತದೆ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ (Shehbaz Sharif) ಹೇಳಿದ್ದಾರೆ.

ಕಾಶ್ಮೀರಿಗಳಿಗೆ ಬೆಂಬಲ ತೋರಿಸುವ ವಾರ್ಷಿಕ ಪಾಕಿಸ್ತಾನಿ ಕಾರ್ಯಕ್ರಮವಾದ ಕಾಶ್ಮೀರ ಒಗ್ಗಟ್ಟಿನ ದಿನದಂದು ಮುಜಫರಾಬಾದ್‌ನಲ್ಲಿ ನಡೆದ ಪಾಕ್ ಆಕ್ರಮಿತ ಕಾಶ್ಮೀರ (POK) ಅಸೆಂಬ್ಲಿಯ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಷರೀಫ್ ಅವರು ಶಾಂತಿ ಮಾತುಕತೆಯ ಪ್ರಸ್ತಾಪ ಮುಂದಿಟ್ಟರು. ಇದನ್ನೂ ಓದಿ: ಮಹಿಳಾ ಕ್ರೀಡೆಗಳಲ್ಲಿ ತೃತೀಯ ಲಿಂಗಿಗಳಿಗೆ ನಿಷೇಧ – ಆದೇಶಕ್ಕೆ ಟ್ರಂಪ್‌ ಸಹಿ

ಕಾಶ್ಮೀರ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನು ಮಾತುಕತೆಯ ಮೂಲಕ ಪರಿಹರಿಸಬೇಕೆಂದು ನಾವು ಬಯಸುತ್ತೇವೆ ಎಂದು ಅವರು ಹೇಳಿದರು. ಭಾರತವು 2019, ಆ.5ರ ಚಿಂತನೆಯಿಂದ ಹೊರಬಂದು ವಿಶ್ವಸಂಸ್ಥೆಗೆ ನೀಡಿದ ಭರವಸೆಗಳನ್ನು ಈಡೇರಿಸಬೇಕು. ಸಂವಾದವನ್ನು ಪ್ರಾರಂಭಿಸಬೇಕು ಎಂದು ಷರೀಫ್ ಹೇಳಿದರು.

ಭಾರತ ಮತ್ತು ಪಾಕಿಸ್ತಾನ ನಡುವಿನ ಹಳಸಿದ ಸಂಬಂಧಗಳನ್ನು ಸರಿಪಡಿಸಲು ಏಕೈಕ ಮಾರ್ಗವೆಂದರೆ ಅದು ಮಾತುಕತೆ. 1999 ರ ಲಾಹೋರ್ ಘೋಷಣೆಯಲ್ಲಿ ಉಲ್ಲೇಖಿಸಿದಂತೆ, ಆಗಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಪಾಕಿಸ್ತಾನಕ್ಕೆ ಭೇಟಿ ನೀಡಿದಾಗ ಸಹಿ ಹಾಕಲಾದ ಭಯೋತ್ಪಾದನೆ, ಹಗೆತನ ಮತ್ತು ಹಿಂಸಾಚಾರ ಮುಕ್ತ ವಾತಾವರಣದಲ್ಲಿ ಪಾಕಿಸ್ತಾನದೊಂದಿಗೆ ಸಾಮಾನ್ಯ ನೆರೆಯ ಸಂಬಂಧವನ್ನು ಬಯಸುವುದಾಗಿ ಭಾರತ ಸ್ಪಷ್ಟಪಡಿಸಿದೆ. ಇದನ್ನು ಅನುಷ್ಠಾನಕ್ಕೆ ತರಬೇಕಿದೆ ಎಂದರು. ಇದನ್ನೂ ಓದಿ: ಬಾಂಗ್ಲಾದಲ್ಲಿ ಹಿಂಸಾಚಾರದ ಕಿಡಿ ಹೊತ್ತಿಸಿದ ಭಾಷಣ – ಉದ್ರಿಕ್ತರಿಂದ ಶೇಖ್ ಹಸೀನಾ ತಂದೆ ನಿವಾಸ ಧ್ವಂಸ

ಭಾರತವು ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸುತ್ತಿದೆ ಎಂದು ಪ್ರಧಾನಿ ಷರೀಫ್ ಆರೋಪಿಸಿದರು. ಇದು ಈ ಪ್ರದೇಶದಲ್ಲಿ ಶಾಂತಿಯನ್ನು ತರುವುದಿಲ್ಲ ಎಂದು ಪ್ರತಿಪಾದಿಸಿದರು. ಭಾರತವು ಬುದ್ಧಿವಂತರಾಗಿರಬೇಕು. ಮುಂದುವರಿಯಲು ಏಕೈಕ ಮಾರ್ಗವೆಂದರೆ ಶಾಂತಿ ಎಂದು ಅವರು ಹೇಳಿದರು. ಕಾಶ್ಮೀರ ಸಮಸ್ಯೆಗೆ ಏಕೈಕ ಪರಿಹಾರವೆಂದರೆ ವಿಶ್ವಸಂಸ್ಥೆಯ ನಿರ್ಣಯದ ಅಡಿಯಲ್ಲಿ ಸ್ವಯಂ ನಿರ್ಣಯದ ಹಕ್ಕು ಎಂದು ಅವರು ಪ್ರತಿಪಾದಿಸಿದರು.

ಪಾಕಿಸ್ತಾನವು ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಷಯವನ್ನು ಪದೇ ಪದೇ ಪ್ರಸ್ತಾಪಿಸಿದೆ. ಆದರೆ ಭಾರತ ಮತ್ತು ಪಾಕಿಸ್ತಾನದ ನಡುವಿನ ದ್ವಿಪಕ್ಷೀಯ ವಿಷಯವೆಂದು ಪರಿಗಣಿಸುವ ವ್ಯಾಪಕ ವಿಶ್ವಸಂಸ್ಥೆಯ ಸದಸ್ಯತ್ವವನ್ನು ಪಡೆಯುವಲ್ಲಿ ವಿಫಲವಾಗಿದೆ. ಇದನ್ನೂ ಓದಿ: ನೆತನ್ಯಾಹು ಭೇಟಿ ಬೆನ್ನಲ್ಲೇ ಗಾಜಾದ ಮೇಲೆ ಕಣ್ಣಿಟ್ಟ ಅಮೆರಿಕ – ಟ್ರಂಪ್‌ ಕೊಟ್ಟ ಆಫರ್‌ ಏನು?

Share This Article