ಟಿಕೆಟ್ ಸಿಗದೆ ಪಕ್ಷ ಬಿಟ್ಟು ಕಾಂಗ್ರೆಸ್‌ಗೆ ಹೋಗೋರ ಬಗ್ಗೆ ನಾವು ತಲೆಕೆಡಿಸಿಕೊಳ್ಳಲ್ಲ: ಬೊಮ್ಮಾಯಿ

Public TV
1 Min Read

ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ತನ್ನ ವರ್ಚಸ್ಸು ಕಳೆದುಕೊಂಡಿದೆ. ಹೀಗಾಗಿ ಮತ್ತೆ ಆಪರೇಶನ್‌ಗೆ ಕಾಂಗ್ರೆಸ್ ಮುಂದಾಗಿದೆ. ಇದು ಕಾಂಗ್ರೆಸ್‌ನ ವೀಕ್‌ನೆಸ್ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

ಮಾಜಿ ಬಿಜೆಪಿ (BJP) ಶಾಸಕರಿಗೆ ಕಾಂಗ್ರೆಸ್ ಗಾಳ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕೆಲವರು ಟಿಕೆಟ್ ಸಿಗದೇ ಇದ್ದವರು ಕಾಂಗ್ರೆಸ್‌ಗೆ ಹೋಗುತ್ತಾರೆ. ಅದರಿಂದ ಕಾಂಗ್ರೆಸ್‌ಗೆ ಯಾವುದೇ ಲಾಭವಿಲ್ಲ. ಟಿಕೆಟ್ ಸಿಗದೇ ಇದ್ದವರು ಹೋಗೋದು ಸಹಜ. ಅದರ ಬಗ್ಗೆ ನಾವೇನು ಹೆಚ್ಚು ತಲೆ ಕೆಡಿಸಿಕೊಳ್ಳಲ್ಲ. ಕಾಂಗ್ರೆಸ್‌ನ ಈ ಆಪರೇಶನ್‌ನಿಂದ ರಾಜಕೀಯವಾಗಿ ಯಾವುದೇ ಲಾಭವಾಗುವುದಿಲ್ಲ ಎಂದರು. ಇದನ್ನೂ ಓದಿ: ರಜನಿಕಾಂತ್ ವಿರುದ್ಧ ಮತ್ತೆ ಗುಡುಗಿದ ವಾಟಾಳ್ ನಾಗರಾಜ್

ಉತ್ತರ ಕರ್ನಾಟಕ ಭಾಗದಲ್ಲಿ ಸಾಕಷ್ಟು ಬರಗಾಲ ಇದೆ. ಈಗಾಗಲೇ ಮುಂಗಾರು ಮುಗಿದಿದೆ. ಮುಂಗಾರು ಬೆಳೆ ನಾಶವಾಗಿರೋ ರೈತರು ಕಂಗಾಲಾಗಿದ್ದಾರೆ. ಆದರೆ ಬೆಳೆ ಪರಿಹಾರಕ್ಕೆ ಸರ್ಕಾರ ಮುಂದಾಗಿಲ್ಲ. ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಈ ಹಿಂದೆ ಪ್ರವಾಹ ಬಂದಾಗ ರೈತರಿಗೆ ಎರಡು ಪಟ್ಟು ಪರಿಹಾರ ನೀಡಿದ್ದೇವೆ. ಬಹುತೇಕ ಸಂದರ್ಭಗಳಲ್ಲಿ ರಾಜ್ಯದ ರೈತರಿಗೆ ನಾವು ಪರಿಹಾರ ಒದಗಿಸಿದ್ದೇವೆ. ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ತಮಿಳರ ಮೇಲೆ ಹಲ್ಲೆ ಎಂದು ಫೇಕ್ ವೀಡಿಯೋ ಹಂಚಿಕೆ – ಇಬ್ಬರ ವಿರುದ್ಧ ಎಫ್‍ಐಆರ್

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್