ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳ (Bhatkal) ನಗರವನ್ನು 24 ಗಂಟೆಯೊಳಗೆ ಸ್ಫೋಟಿಸುವುದಾಗಿ ಭಟ್ಕಳ ಶಹರ ಠಾಣೆಗೆ ಇಮೇಲ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಕಣ್ಣನ್ ಎಂಬಾತನನ್ನು ಭಟ್ಕಳ ಶಹರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತನಿಖೆ ವೇಳೆ, ಕಣ್ಣನ್ ಮೊಬೈಲ್‌ನಿಂದ ಮತ್ತೊಬ್ಬ ವ್ಯಕ್ತಿ ಈ ಕೃತ್ಯ ಮಾಡಿರುವುದು ಬಯಲಿಗೆ ಬಂದಿದೆ. ಮೋಬೈಲ್‌ನ್ನು ಹೇಗೆ ಆತ ತೆಗೆದುಕೊಂಡ ಎಂಬುವುದರ ಬಗ್ಗ ಮಾಹಿತಿ ಕಲೆ ಹಾಕಿರುವ ಪೊಲೀಸರು, ಕಣ್ಣನ್ ಮತ್ತು ಮೋಸ್ಟ್ ವಾಂಟೆಡ್ ವ್ಯಕ್ತಿಯ ನಡುವಿನ ಭೇಟಿಯ ಕುರಿತು ತನಿಖೆ ಬಳಿಕ ಮಾಹಿತಿ ನೀಡುವುದಾಗಿ ಉತ್ತರ ಕನ್ನಡ ಜಿಲ್ಲೆಯ ಎಸ್.ಪಿ ಎಂ.ನಾರಾಯಣ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದನ್ನೂ ಓದಿ: 24 ಗಂಟೆಯೊಳಗೆ ಭಟ್ಕಳ ಪಟ್ಟಣವನ್ನ ಸ್ಫೋಟಿಸುತ್ತೇವೆ – ಪೊಲೀಸ್ ಠಾಣೆಗೆ ಬೆದರಿಕೆ ಸಂದೇಶ
ಕಣ್ಣನ್ ಮೊಬೈಲ್ ಮೂಲಕ ಪೋಸ್ಟ್ ಮಾಡಿದ ಮೋಸ್ಟ್ ವಾಂಟೆಡ್ ವ್ಯಕ್ತಿ ಮೈಸೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಹಿಂದೆ ಮೈಸೂರು, ಬಳ್ಳಾರಿ, ಕೇರಳ ಸೇರಿದಂತೆ ಬೇರೆ ಕಡೆಗೂ ಬಾಂಬ್ ಸ್ಫೋಟಿಸುವ ಬೇದರಿಕೆ ಹಾಕಿದ್ದ ಈ ಮೋಸ್ಟ್ ವಾಂಟೆಡ್ ವ್ಯಕ್ತಿಯನ್ನು ಕರ್ನಾಟಕ ಮತ್ತು ಕೇರಳ ಪೊಲೀಸರ ಕಾರ್ಯಾಚರಣೆಯಿಂದ ಪತ್ತೆ ಮಾಡಲಾಗಿದೆ. ಆತನನ್ನು ಪೊಲೀಸರು ಮೈಸೂರಿನಿಂದ ಸೋಮವಾರ ಕಾರವಾರಕ್ಕೆ ಕರೆತಂದು ವಿಚಾರಣೆ ನಡೆಸಲಿದ್ದಾರೆ. ಇದನ್ನೂ ಓದಿ: Uttara Kannada | ದಟ್ಟ ಅರಣ್ಯದ ಗುಹೆಯಲ್ಲಿ ಚಿಕ್ಕ ಮಕ್ಕಳೊಂದಿಗೆ ವಾಸ – ರಷ್ಯಾ ಮೂಲದ ಮಹಿಳೆಯ ರಕ್ಷಣೆ