– ಕಚೇರಿ ಸಮಯದಲ್ಲಿ ಅನಧಿಕೃತವಾಗಿ ಹೊರ ಹೋಗೋರನ್ನ ನಿಯಂತ್ರಿಸಲು ಸೂಚನೆ
ಬೆಂಗಳೂರು: ಸರ್ಕಾರಿ ನೌಕರರು (Govt Employees) ಸಭ್ಯ ಉಡುಪು ಧರಿಸುವಂತೆ ಸರ್ಕಾರ ಆದೇಶ ಮಾಡಿದೆ. ಸಭ್ಯ ಉಡುಪು ಧರಿಸದ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ ಸರ್ಕಾರ ಖಡನ್ ಸೂಚನೆ ಮಾಡಿದೆ.
ಕಚೇರಿ ಸಮಯದಲ್ಲಿ ಅನಧಿಕೃತವಾಗಿ ಹೊರ ಹೋಗುವವರನ್ನು ಮೇಲಾಧಿಕಾರಿಗಳು ನಿಯಂತ್ರಿಸಲು ಸೂಚಿಸಲಾಗಿದೆ. ಅನಿವಾರ್ಯ ಸಂದರ್ಭದಲ್ಲಿ ಕಡ್ಡಾಯವಾಗಿ ಸಕಾರಣ ನೀಡಿ ಹೊರಗೆ ಹೋಗುವಂತೆ ತಿಳಿಸಿದೆ. ಇದನ್ನೂ ಓದಿ: ಕೋಳಿ ಅಂಕ ನಿಲ್ಲಬಾರದು – ಅರೆಸ್ಟ್ ಮಾಡೋದಾದ್ರೆ ಮೊದಲು ನನ್ನನ್ನೇ ಬಂಧಿಸಿ: ಅಶೋಕ್ ರೈ
ಇತ್ತ ರಾಜ್ಯ ಸರ್ಕಾರದ ಮೇಲೆ ಗುತ್ತಿಗೆ ಕಂಪನಿಯೊಂದು 3 ಸಾವಿರ ಕೋಟಿ ಪರಿಹಾರಕ್ಕೆ ಒತ್ತಾಯಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಧಾರವಾಡ ಪೀಠ ತಳ್ಳಿ ಹಾಕಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಆನೆಗೊಂದಿಯ ತಳವಾರ ಘಟ್ಟ ಬಳಿ ನಿರ್ಮಾಣ ಹಂತದ ಸೇತುವೆ ಕುಸಿದಿತ್ತು.. 2009ರಲ್ಲಿ ಸೇತುವೆ ಕುಸಿದ ಪರಿಣಾಮ ಸಾವು-ನೋವು ಸಂಭವಿಸಿತ್ತು. ಸೇತುವೆ ಗುತ್ತಿಗೆ ಪಡೆದ ಕಂಪನಿ ನಮಗೆ ನಷ್ಟವಾಗಿದೆ ಎಂದು ನ್ಯಾಯಾಲಯದ ಮೊರೆ ಹೋಗಿತ್ತು. ಗುತ್ತಿಗೆ ಪಡೆದ ಬಿವಿ ರಡ್ಡಿ ಕಂಪನಿಗೆ ಮೂರು ಸಾವಿರ ಕೋಟಿ ಕೊಡಬೇಕು ಎಂದು ಆದೇಶವಾಗಿತ್ತು. ಎಚ್ಚೆತ್ತ ಲೋಕೋಪಯೋಗಿ ಇಲಾಖೆ ಹೈಕೋರ್ಟ್ ಮೊರೆ ಹೋಗಿತ್ತು. ಇದನ್ನೂ ಓದಿ: ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ: ಡಿಕೆಶಿ

