ಎರಡು ದಿನ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ

Public TV
1 Min Read

ಬೆಂಗಳೂರು: ರಾಜ್ಯದಲ್ಲಿ ಇನ್ನು ಎರಡು ದಿನಗಳ ಕಾಲ ಮಳೆಯಾಗುವ (Rain) ಸಾಧ್ಯತೆಯಿದೆ.

ಇಂದು ಬೆಂಗಳೂರು ನಗರದ (Bengaluru CIty) ಹಲವೆಡೆ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.


ಕರಾವಳಿಯ ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಚಿತ್ರದುರ್ಗ, ಕೋಲಾರ, ಮೈಸೂರು, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.  ಇದನ್ನೂ ಓದಿ: ಗ್ಯಾರಂಟಿ ಜಾರಿ ಯಾವಾಗ? – ಗೊಂದಲದಲ್ಲಿ ಮತದಾರ, ಬಿಲ್‌ ಕಟ್ಟಿ ಎನ್ನುತ್ತಿದೆ ಬೆಸ್ಕಾಂ

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗಬಹುದು ಎಂದು ಇಲಾಖೆ ಮಾಹಿತಿ ನೀಡಿದೆ.

Share This Article