– ಜಡ್ಡು ಆಲ್‌ರೌಂಡ್ ಆಟ; ಶುಭಮನ್ ಗಿಲ್ ನಾಯಕತ್ವದಲ್ಲಿ ತವರಿನಲ್ಲಿ ಮೊದಲ ಜಯ
ಅಹಮದಾಬಾದ್: ಭಾರತೀಯ ಸ್ಪಿನ್ನರ್‌ಗಳ ಮೋಡಿ, ರವೀಂದ್ರ ಜಡೇಜಾ ಅವರ ಆಲ್‌ರೌಂಡ್ ಪ್ರದರ್ಶನಕ್ಕೆ ಪತರುಗುಟ್ಟಿದ ವೆಸ್ಟ್ ಇಂಡೀಸ್ (West Indies) ತಂಡ 2ನೇ ಇನ್ನಿಂಗ್ಸ್‌ನಲ್ಲಿ ಕೇವಲ 146 ರನ್‌ಗಳಿಗೆ ಆಲೌಟ್ ಆಗಿದೆ. ಪರಿಣಾಮ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Modi Stadium) ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಇನ್ನೂ ಒಂದು ಇನ್ನಿಂಗ್ಸ್ ಬಾಕಿ ಇರುವಂತೆ 140 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.
A COMPREHENSIVE WIN FOR INDIA. pic.twitter.com/2eSegVTuaa
— Mufaddal Vohra (@mufaddal_vohra) October 4, 2025
ಮೊದಲ ಇನ್ನಿಂಗ್ಸ್‌ನಲ್ಲಿ 2ನೇ ದಿನದ ಅಂತ್ಯಕ್ಕೆ 448 ರನ್ ಗಳಿಸಿದ್ದ ಭಾರತ 286 ರನ್‌ಗಳ ಮುನ್ನಡೆ ಕಾಯ್ದುಕೊಂಡಿತ್ತು. 3ನೇ ದಿನ ಡಿಕ್ಲೇರ್ ಘೋಷಿಸುತ್ತಿದ್ದಂತೆ ಕಣಕ್ಕಿಳಿದ ವಿಂಡೀಸ್ 2ನೇ ಇನ್ನಿಂಗ್ಸ್‌ನಲ್ಲೂ ಭಾರತದ ಸ್ಪಿನ್ನರ್‌ಗಳ ದಾಳಿಗೆ ಪತರುಗುಟ್ಟಿತು. ಅಲಿಕ್ ಅಥನಾಜೆ 38 ರನ್, ಜಸ್ಟಿನ್ ಗ್ರೀವ್ಸ್ 25 ರನ್ ಗಳಿಸಿದ್ದು ಬಿಟ್ಟರೆ ಉಳಿದ ಆಟಗಾರರು ಅಲ್ಪಮೊತ್ತಕ್ಕೆ ನೆಲ ಕಚ್ಚಿದರು. ಹೀಗಾಗಿ ಮೂರನೇ ದಿನವೇ ಭಾರತ ಗೆಲುವು ಸಾಧಿಸಿತು. ಇದನ್ನೂ ಓದಿ: ಆಸೀಸ್ ವಿರುದ್ಧ ಸರಣಿಗೆ ಭಾರತ ತಂಡ ಪ್ರಕಟ – ಏಕದಿನ ಕ್ರಿಕೆಟ್‌ಗೆ ಗಿಲ್ ಕ್ಯಾಪ್ಟನ್; ರೋಹಿತ್, ಕೊಹ್ಲಿ ನಿವೃತ್ತಿ ಬಯಸಿದ್ಯಾ ಬಿಸಿಸಿಐ?
2ನೇ ಇನ್ನಿಂಗ್ಸ್‌ನಲ್ಲಿ ಭಾರತದ ಪರ ರವೀಂದ್ರ ಜಡೇಜಾ 4 ವಿಕೆಟ್ ಕಿತ್ತರೆ, ಸಿರಾಜ್ 3 ವಿಕೆಟ್, ಕುಲ್‌ದೀಪ್ ಯಾದವ್ 2 ವಿಕೆಟ್, ವಾಷಿಂಗ್ಟನ್ ಸುಂದರ್ 1 ವಿಕೆಟ್ ಪಡೆದು ಮಿಂಚಿದರು. ಇದನ್ನೂ ಓದಿ: ಆರ್‌ಸಿಬಿ ಸೇಲ್ – ಪುಣೆಯ ಶತಕೋಟ್ಯಧಿಪತಿ ಪೂನಾವಾಲಾ ತೆಕ್ಕೆಗೆ ಹೋಗುತ್ತಾ ಬೆಂಗಳೂರು?
ಇದಕ್ಕೂ ಮುನ್ನ ಮೊದಲ ದಿನ 2 ವಿಕೆಟ್ ನಷ್ಟಕ್ಕೆ 121 ರನ್ ಗಳಿಸಿದ್ದ ಭಾರತ 2ನೇ ದಿನ 327 ರನ್ ಕಲೆ ಹಾಕಿತ್ತು. 2ನೇ ದಿನದ ಅಂತ್ಯಕ್ಕೆ 128 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 448 ರನ್ ಗಳಿಸಿತ್ತು. ಮೊದಲ ದಿನ 18 ರನ್‌ಗಳಿಸಿದ್ದ ನಾಯಕ ಶುಭಮನ್ ಗಿಲ್ 2ನೇ ದಿನ 50 ರನ್ ಹೊಡೆದರೆ ಕೆಎಲ್ ರಾಹುಲ್ 197 ಎಸೆತಗಳಲ್ಲಿ 12 ಬೌಂಡರಿಗಳ ನೆರವಿನಿಂದ ಶತಕ ಸಿಡಿಸಿ ಔಟಾದರು. ಧ್ರುವ್ ಜುರೆಲ್ 210 ಎಸೆತಗಳಲ್ಲಿ 15 ಬೌಂಡರಿ, 3 ಸಿಕ್ಸರ್ ಸಿಡಿಸಿ 125 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಧ್ರುವ್ ಜುರೆಲ್ ಮತ್ತು ಜಡೇಜಾ 5ನೇ ವಿಕೆಟಿಗೆ 331 ಎಸೆತಗಳಲ್ಲಿ 206 ರನ್ ಜೊತೆಯಾಟವಾಡಿದ್ದರಿಂದ ಭಾರತ ಬೃಹತ್ ಮುನ್ನಡೆ ಸಾಧಿಸಿತು.
ರವೀಂದ್ರ ಜಡೇಜಾ ಔಟಾಗದೇ 104 ರನ್ (176 ಎಸೆತ, 6 ಬೌಂಡರಿ, 5 ಸಿಕ್ಸ್) ಸಿಡಿಸಿದರೆ ವಾಷಿಂಗ್ಟನ್ ಸುಂದರ್ 9 ರನ್‌ಗಳಿಸಿ ಅಜೇಯರಾಗಿ ಉಳಿದಿದ್ದರು. ಇದನ್ನೂ ಓದಿ: ಯುದ್ಧವನ್ನ ಕ್ರೀಡೆಗೆ ಎಳೆದು ತರೋದು ಹತಾಶೆಯನ್ನ ತೋರಿಸುತ್ತೆ – ಮೋದಿ ಟ್ವೀಟ್‌ಗೆ ನಖ್ವಿ ರಿಯಾಕ್ಷನ್
ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದ ಬಳಿಕ ಭಾರತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ 3ನೇ ಸ್ಥಾನ ಕಾಯ್ದುಕೊಂಡಿದೆ. 40 ಅಂಕಗಳು, 55.56 ಪಿಸಿಟಿಯೊಂದಿಗೆ (Percentage Of Points Earned) 3ನೇ ಸ್ಥಾನದಲ್ಲಿದ್ದರೆ, 36 ಅಂಕ 100 ಪಿಟಿಸಿ ಗಳಿಸಿರುವ ಆಸ್ಟ್ರೇಲಿಯಾ ಅಗ್ರಸ್ಥಾನದಲ್ಲಿದೆ. 66.67 ಪಿಸಿಟಿಯೊಂದಿಗೆ ಶ್ರೀಲಂಕಾ 2ನೇ ಸ್ಥಾನದಲ್ಲಿದೆ.