ಕೋಟ್ಯಂತರ ರೂಪಾಯಿ ಮೌಲ್ಯದ ತಿಮಿಂಗಿಲ ವಾಂತಿ ವಶ – ಇಬ್ಬರು ಅರೆಸ್ಟ್‌

Public TV
1 Min Read

ಚಾಮರಾಜನಗರ: ಸುಮಾರು 3 ಕೆಜಿಯಷ್ಟು ತಿಮಿಂಗಿಲ ವಾಂತಿ (Ambergris) ವಶಪಡಿಸಿಕೊಂಡು ಇಬ್ಬರನ್ನ ಬಂಧಿಸಿರುವ ಘಟನೆ ಚಾಮರಾಜನಗರದಲ್ಲಿ (Chamarajanagar) ನಡೆದಿದೆ‌.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದ ಆನಂದ ದೇವಾಡಿಗ ಹಾಗೂ ಅಪ್ಪಣ್ಣ ನಾಯಕ ಬಂಧಿತ ಆರೋಪಿಗಳು. ಕೋಟ್ಯಂತರ ರೂಪಾಯಿ ಬೆಲೆ ಬಾಳುವ ತಿಮಿಂಗಿಲ ವಾಂತಿಯನ್ನು ತಮಿಳುನಾಡಿನ (TamilNadu) ಕೊಯಮತ್ತೂರಿಗೆ ಸಾಗಿಸುತ್ತಿದ್ದ ವೇಳೆ ಕೊಳ್ಳೇಗಾಲ ತಾಲೂಕಿನ ಟಗರಪುರ ರಸ್ತೆಯಲ್ಲಿ ಅರಣ್ಯ ಸಂಚಾರ ದಳದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ನಾರಾಯಣಪುರದ ಬಸವಸಾಗರ ಜಲಾಶಯ ಬಹುತೇಕ ಭರ್ತಿ – ರೈತರ ಮೊಗದಲ್ಲಿ ಮಂದಹಾಸ

ಆರೋಪಿಗಳಿಂದ 3 ಕೆಜಿ ತಿಮಿಂಗಿಲ ವಾಂತಿ, ಒಂದು ಅಲ್ಟೋ ಕಾರು, ಎರಡು ಮೊಬೈಲ್, 7 ಸಾವಿರ ನಗದು ವಶಪಡಿಸಿಕೊಳ್ಳಲಾಗಿದೆ. ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ಸಂರಕ್ಷಣಾ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಸಿನಿಮೀಯ ಸ್ಟೈಲ್‌ನಲ್ಲಿ ದೇವಸ್ಥಾನದಲ್ಲಿ ಜೆಡಿಎಸ್‌ ಮುಖಂಡನ ಹತ್ಯೆಗೆ ಯತ್ನ – ಕೊಲೆಗೆ ಸ್ನೇಹಿತನಿಂದಲೇ ಸ್ಕೆಚ್‌

ತಿಮಿಂಗಲ ವಾಂತಿಗೆ ಯಾಕಿಷ್ಟು ಬೇಡಿಕೆ?
ಅಂಬರ್ ಗ್ರೀಸ್ ಎಂಬ ವಸ್ತುವು ಮೇಣದಂಥ ವಸ್ತುವಾಗಿದ್ದು, ಇದನ್ನ ಸುಗಂಧ ದ್ರವ್ಯಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಕಚ್ಚಾವಸ್ತುವಾಗಿದ್ದಾಗಲೂ ಅಂಬರ್ ಗ್ರೀಸ್ ಕೊಂಚ ಸುವಾಸನೆ ಬೀರುವಂಥದ್ದಾಗಿರುತ್ತದೆ. ಕೆಲವು ದೇಶಗಳಲ್ಲಿ ಕಾಮೋತ್ತೇಜಕ ವಸ್ತುಗಳ ತಯಾರಿಕೆಯಲ್ಲೂ ಇದನ್ನ ಬಳಸಲಾಗುತ್ತದೆ.

ತಿಮಿಂಗಿಲ ವಾಂತಿ ಸಿಗುವುದು ಬಹಳ ಅಪರೂಪ. ಏಕೆಂದರೆ, ತಿಮಿಂಗಿಲಗಳು ಸಮುದ್ರದಲ್ಲಿ ವಾಂತಿ ಮಾಡಿಕೊಳ್ಳುವುದು ಅಪರೂಪ ಹಾಗೂ ಅವು ಜನಸಾಮಾನ್ಯರಿಗೆ ಸಿಗುವುದು ತುಂಬಾ ವಿರಳ. ಹಾಗಾಗಿ ಈ ವಸ್ತುವಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯಿದೆ. ಆದರೆ ಕಳ್ಳಸಾಗಣೆದಾರರು ಅಂಬರ್ ಗ್ರೀಸ್ ಗಾಗಿ ಸಮುದ್ರಗಳಿಗೆ ದಾಂಗುಡಿ ಇಡುವುದನ್ನು ತಪ್ಪಿಸಲು ಬಹುತೇಕ ದೇಶಗಳು ಇದರ ಮಾರಾಟ ನಿಷೇಧಿಸಿವೆ. ಹಾಗಾಗಿ ಇದು ಕಳ್ಳಸಾಗಣೆಯಾಗುತ್ತಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್