‘ತಾರಿಣಿ’ ಸಿನಿಮಾದ ಗರ್ಭಿಣಿಯ ಪಾತ್ರಕ್ಕಾಗಿ ನಟಿ ಮಮತ ಮಾಡಿದ್ದೇನು?

By
2 Min Read

ಮತ ರಾಹುತ್ (Mamata Rahut) ನಾಯಕಿಯಾಗಿ ನಟಿಸಿರುವ, ಸಿದ್ದು ಪೂರ್ಣಚಂದ್ರ (Siddu Poornchandra) ನಿರ್ದೇಶನದ ‘ತಾರಿಣಿ’ (Tarini)  ಚಿತ್ರ ಗರ್ಭಿಣಿಯ ಕುರಿತಾದ ಕಥಾಹಂದರ ಹೊಂದಿದೆ.  ಈ ಚಿತ್ರದ ಫಸ್ಟ್ ಲುಕ್ (First Look) ಇತ್ತೀಚೆಗೆ ಬಿಡುಗಡೆಯಾಯಿತು. ಸಾಹಿತಿ, ಹೋರಾಟಗಾರ್ತಿ ಬಿ.ಟಿ.ಲಲಿತಾ ನಾಯಕ್ ಸೇರಿದಂತೆ ಹಲವು ಗಣ್ಯರು ತಾರಿಣಿ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಹೆಚ್ಚಿನ ಮಾಹಿತಿ ನೀಡಿದರು.

ತಾರಿಣಿ ಗರ್ಭಿಣಿ ಹೆಣ್ಣಿನ ಕಥೆಯನ್ನು ಹೊಂದಿರುವ ಚಿತ್ರ ಎಂದು ಮಾತು ಆರಂಭಿಸಿದ ನಿರ್ದೇಶಕ ಸಿದ್ದು ಪೂರ್ಣಚಂದ್ರ, ಈ ಚಿತ್ರದ ವಿಶೇಷವೆಂದರೆ, ನಾಯಕಿ ಮಮತ ರಾಹುತ್ ಅವರು ಗರ್ಭಿಣಿ ಇರುವಾಗಲೇ ಈ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಗರ್ಭಿಣಿ ಕುರಿತಾದ ಚಿತ್ರದಲ್ಲಿ ನಿಜವಾದ ಗರ್ಭಿಣಿಯೇ ನಟಿಸಿದ್ದಾರೆ. ಮಗು ಆದ ನಂತರವೂ ಅಭಿನಯಿಸಿದ್ದಾರೆ. ಅವರಿಗೆ ಅನಂತ ಧನ್ಯವಾದ. ಹೆಣ್ಣು ಭ್ರೂಣ ಹತ್ಯೆ ಮಾಡಬೇಡಿ ಎಂಬ ಉತ್ತಮ ಸಂದೇಶವಿರುವ ಈ ಚಿತ್ರವನ್ನು ಮಮತ ರಾಹುತ್ ಅವರ ಪತಿ ಸುರೇಶ್ ಕೊಟ್ಯಾನ್ ಚಿತ್ರಾಪು ಅವರು ಶ್ರೀಗಜನಿ ಪ್ರೊಡಕ್ಷನ್ಸ್ ಲಾಂಛನದಲ್ಲಿ  ನಿರ್ಮಿಸಿದ್ದಾರೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ನೋಡಿ ಹಾರೈಸಿ ಎಂದರು.

ನಾನು ಏಳು ತಿಂಗಳ ಗರ್ಭಿಣಿ ಇದ್ದಾಗ ಈ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಂಡೆ. ಕೆಲವು ದಿನಗಳ ಚಿತ್ರೀಕರಣ ನಂತರ ನನಗೆ ಅವಧಿಗೂ ಕೆಲವು ದಿನಗಳ ಮುಂಚೆಯೇ ಹೆರಿಗೆ ಆಯಿತು. ಆನಂತರ ಕೂಡ ನಾನು ಚಿತ್ರೀಕರಣದಲ್ಲಿ ಭಾಗಿಯಾದೆ. ನನ್ನ ಮಗು ಕೂಡ ಈ ಚಿತ್ರದಲ್ಲಿ ಅಭಿನಯಿಸಿದೆ. ಇಂದು ನಾನು ನಿಮ್ಮೆಲ್ಲರಿಗೂ ನನ್ನ ಮಗುವನ್ನು ಪರಿಚಯಿಸುತ್ತಿದ್ದೇನೆ. ನಮ್ಮ ಮೊದಲ ನಿರ್ಮಾಣದ ಚಿತ್ರವಾಗಿರುವುದರಿಂದ ಹೆಚ್ಚಿನ ಜವಾಬ್ದಾರಿ ನನ್ನ ಮೇಲಿತ್ತು. ಚಿತ್ರ ಚೆನ್ನಾಗಿ ಬಂದಿದೆ. ಇಡೀ ತಂಡಕ್ಕೆ ಧನ್ಯವಾದ ಎಂದರು ನಾಯಕಿ ಮಮತ ರಾಹುತ್. ಇದನ್ನೂ ಓದಿ:ತಲಕಾವೇರಿಗೆ ವಿಶೇಷ ಪೂಜೆ ಸಲ್ಲಿಸಿದ ಅಭಿಷೇಕ್, ಅವಿವಾ ದಂಪತಿ

ನಮ್ಮ ಮೊದಲ ನಿರ್ಮಾಣದ ಚಿತ್ರವಿದು. ಒಳ್ಳೆಯ ಕಥೆ ನೀಡಿರುವ ನಿರ್ದೇಶಕರಿಗೆ,   ಆ ಕಥೆಗೆ ಜೀವ ತುಂಬಿರುವ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ನನ್ನ ಧನ್ಯವಾದ. ಸಮಾಜಕ್ಕೆ ಈ ಚಿತ್ರ ಉತ್ತಮ ಸಂದೇಶ ಕೊಡಲಿದೆ ಎಂದರು ನಿರ್ಮಾಪಕ ಸುರೇಶ್ ಕೊಟ್ಯಾನ್ ಚಿತ್ರಾಪು.  ಚಿತ್ರದ ನಾಯಕ ರೋಹಿತ್ ಸೇರಿದಂತೆ ಅನೇಕ ಕಲಾವಿದರು ಹಾಗೂ ತಂತ್ರಜ್ಞರು ತಾರಿಣಿ ಚಿತ್ರದ ಕುರಿತು ಮಾತನಾಡಿದರು.

ತಾರಿಣಿಯಾಗಿ ಮಮತ ರಾಹುತ್ ನಟಿಸಿದ್ದು, ನಾಯಕನಾಗಿ ರೋಹಿತ್ ಅಭಿನಯಿಸಿದ್ದಾರೆ. ಭವಾನಿ ಪ್ರಕಾಶ್, ಸುಧಾ ಪ್ರಸನ್ನ, ಸುರೇಶ್ ಚಿತ್ರಾಪು, ಪ್ರಮಿಳಾ ಸುಬ್ರಹ್ಮಣ್ಯಂ, ವಿಜಯಲಕ್ಷ್ಮಿ, ದೀಪಿಕಾಗೌಡ, ಸನ್ನಿ, ತೇಜಸ್ವಿನಿ, ಕವಿತ ಕಂಬಾರ್, ಬೇಬಿ ನಿಶಿತಾ, ಬೇಬಿ ರಿಧಿ, ಪ್ರಿನ್ಸ್ ಜಿತಿನ್  ಕೋಟ್ಯಾನ್, ಮಟಿಲ್ಡಾ ಡಿಸೋಜ, ಅರ್ಚನ ಗಾಯಕ್ವಾಡ್, ಶೀಬಾ ಮೂರ್ತಿ, ಶ್ವೇತಾ, ಚೈತ್ರ, ಮಂಜು ನಂಜನಗೂಡು, ರಘು ಸಮರ್ಥ್  ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್