ಮೋದಿ ಮಾರ್ಗದರ್ಶನದಲ್ಲಿ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ವಿಶ್ವಾಸವಿದೆ: ಚೌಹಾಣ್‌

Public TV
1 Min Read

ಭೋಪಾಲ್:‌ ಮಧ್ಯಪ್ರದೇಶದ ನೂತನ ಸಿಎಂ ಮೋಹನ್ ಯಾದವ್ (Mohan Yadav) ಅವರಿಗೆ ನಿರ್ಗಮಿತ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ರಾಜ್ಯವನ್ನು ಅಭಿವೃದ್ಧಿಯ ಕಡೆ ಕೊಂಡೊಯ್ಯುವ ವಿಶ್ವಾಸವಿದೆ ಎಂದಿದ್ದಾರೆ.

ಇಂದು ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ಬಳಿಕ ಚೌಹಾಣ್‌ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಮೋಹನ್ ಯಾದವ್ ಅವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ. ಇದನ್ನೂ ಓದಿ: ಮಧ್ಯಪ್ರದೇಶ ಸಿಎಂ ಹುದ್ದೆಗೆ ಮೋಹನ್ ಯಾದವ್ ಅಚ್ಚರಿ ಆಯ್ಕೆ – ಇಬ್ಬರಿಗೆ ಡಿಸಿಎಂ ಸ್ಥಾನ

ಎಕ್ಸ್‌ನಲ್ಲಿ ಏನಿದೆ..?: ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ನಾಮನಿರ್ದೇಶನಗೊಂಡಿರುವ ಮೋಹನ್ ಯಾದವ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ (Narendra Modi) ಮಾರ್ಗದರ್ಶನದಲ್ಲಿ ಮಧ್ಯಪ್ರದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತೀರಿ. ಜೊತೆಗೆ ಸಾರ್ವಜನಿಕ ಕಲ್ಯಾಣ ಕ್ಷೇತ್ರದಲ್ಲಿ ಹೊಸ ದಾಖಲೆಗಳನ್ನು ರಚಿಸುತ್ತೀರಿ ಎಂದು ನನಗೆ ವಿಶ್ವಾಸವಿದೆ. ಈ ಹೊಸ ಜವಾಬ್ದಾರಿಗಾಗಿ ನಿಮಗೆ ಮತ್ತೊಮ್ಮೆ ಅಭಿನಂದನೆಗಳು ಎಂದಿದ್ದಾರೆ. ಇದನ್ನೂ ಓದಿ: ಉ.ಕನ್ನಡ ಜಿಲ್ಲೆಯ ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಘೋಷಣೆ ಆಗಿದೆ: ಕಾಗೇರಿ

ಚೌಹಾಣ್ ನೇತೃತ್ವದ ಮಧ್ಯಪ್ರದೇಶದ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದ ಮೋಹನ್ ಯಾದವ್ ಅವರನ್ನು ಇಂದು ಭೋಪಾಲ್‌ನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಲಾಯಿತು. ಇವರ ಜೊತೆಗೆ ಜಗದೀಶ್ ದೇವಾಡ, ರಾಜೇಶ್ ಶುಕ್ಲಾ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದ್ದು, ವಿಧಾನಸಭೆಯ ಸ್ಪೀಕರ್‌ (Assembly Speaker) ಸ್ಥಾನಕ್ಕೆ ನರೇಂದ್ರ ತೋಮರ್‌ ಅವರನ್ನು ಆಯ್ಕೆ ಮಾಡಲಾಗಿದೆ.

Share This Article