ಜೆಡಿಎಸ್ ಸರ್ಕಾರ ಇದ್ದಾಗಲೆಲ್ಲಾ ಭ್ರಷ್ಟಾಚಾರ ಇತ್ತು: ಡಾ.ಶರಣ ಪ್ರಕಾಶ್ ಪಾಟೀಲ್

Public TV
2 Min Read

ರಾಯಚೂರು: ಜೆಡಿಎಸ್ (JDS) ಸರ್ಕಾರ ಇದ್ದಾಗಲೆಲ್ಲಾ ಭ್ರಷ್ಟಾಚಾರ (Corruption) ಇತ್ತು. ಅದು ಭ್ರಷ್ಟ ಸರ್ಕಾರ. ಹೆಚ್‌ಡಿ ಕುಮಾರಸ್ವಾಮಿ (H.D.Kumaraswamy) ಸರ್ಕಾರ ಇದ್ದಾಗ, ಈ ಹಿಂದೆ ಯಾವ ರೀತಿ ಆಡಳಿತ ನಡೆದಿದೆ ಎನ್ನುವುದು ಗೊತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ (Dr. Sharan Prakash Patil) ಆರೋಪಿಸಿದ್ದಾರೆ.

ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಭ್ರಷ್ಟಾಚಾರ ಆರೋಪ ವಿಚಾರದ ಕುರಿತು ರಾಯಚೂರಿನ (Raichur) ಸಿಂಧನೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿಯವರು ಅಸಂಬದ್ಧ ಹೇಳಿಕೆ ನೀಡುತ್ತಾರೆ. ಅವರ ಸರ್ಕಾರ ಇದ್ದಾಗ, ಈ ಹಿಂದೆ ಯಾವ ರೀತಿ ಆಡಳಿತ ನಡೆದಿದೆ ಎನ್ನುವುದು ಗೊತ್ತಿದೆ. ಜೆಡಿಎಸ್ ಸರ್ಕಾರ ಇದ್ದಾಗಲೆಲ್ಲಾ ಅದು ಭ್ರಷ್ಟಾಚಾರವಿತ್ತು. ನಾನು ಸ್ಪಷ್ಟವಾಗಿ ಹೇಳಬೇಕಾದ ಅವಶ್ಯಕತೆ ಇಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಡಿಕೆಶಿ ಭಂಡ, ದ್ರೋಹಿ- ನವರಂಗಿ ನಾರಾಯಣ ಹೇಳಿಕೆಗೆ ಅಶ್ವಥ್ ನಾರಾಯಣ್ ತಿರುಗೇಟು

ನಮ್ಮ ಜೊತೆ ಸಮ್ಮಿಶ್ರ ಸರ್ಕಾರದಲ್ಲಿ ಹೆಚ್‌ಡಿ ಕುಮಾರಸ್ವಾಮಿ ಇದ್ದರು. ಕಾಂಗ್ರೆಸ್‌ನಿಂದಲೇ ಮುಖ್ಯಮಂತ್ರಿ ಆಗಿದ್ದರು. ಸರ್ಕಾರ ಉಳಿಸಿಕೊಳ್ಳಲು ಆಗಲಿಲ್ಲ. ಸರ್ಕಾರ ಹೋಯಿತು ಎನ್ನುವ ಹತಾಶೆಯಲ್ಲಿ ಈ ರೀತಿಯಾಗಿ ಹೇಳುತ್ತಿದ್ದಾರೆ. ಅವರ ನಿರೀಕ್ಷೆಗೆ ತಕ್ಕ ಫಲಿತಾಂಶ ಬರಲಿಲ್ಲ. ನಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ ಎಂದರು. ಇದನ್ನೂ ಓದಿ: ರಾಜ್ಯದ ಇಬ್ಬರು IPS ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ – 18 ಮಂದಿಗೆ ವಿಶಿಷ್ಟ ಸೇವಾ ಪದಕ ಪ್ರದಾನ

ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿ.ಟಿ ರವಿ (CT Ravi) ಕಮಿಷನ್ ದಂಧೆ ಆರೋಪದ ಕುರಿತು ಮಾತನಾಡಿದ ಅವರು, ಪಾಪ ಅವರ ಸಂಘ ದೋಷ ಅದು. ಹಿಂದೆ ಎಂಎಲ್‌ಎ ಇದ್ರಲ್ವಾ ಅವರು ಬಿಜೆಪಿ (BJP) ಎಂಎಲ್‌ಎಗಳ ಸಂಘ ದೋಷದಿಂದ ಹೀಗೆ ಮಾತನಾಡುತ್ತಾರೆ. 40% ಲಂಚ ತೆಗೆದುಕೊಂಡವರ ಜೊತೆಗಿದ್ದು ಅವರಿಗೆ ಹೀಗಾಗಿದೆ. ಕಾಮಾಲೆ ಇರುವವರಿಗೆ ಕಾಣೋದೆಲ್ಲಾ ಹಳದಿ ಎನ್ನುವ ರೀತಿ ಆಗಿದೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಅಶ್ವಥ್ ನಾರಾಯಣ ಅಲ್ಲ, ನವರಂಗಿ ನಾರಾಯಣ: ಡಿಕೆಶಿ ಕಿಡಿ

ಕಾಂಗ್ರೆಸ್ ಸರ್ಕಾರ ಶೀಘ್ರವೇ ಬೀಳುತ್ತದೆ ಎನ್ನುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೇಳಿಕೆಗೆ ಟಾಂಗ್ ಕೊಟ್ಟ ಅವರು, ಇದಕ್ಕೆ ಏನು ಹೇಳಬೇಕೋ ನನಗೆ ಅರ್ಥ ಆಗುತ್ತಿಲ್ಲ. ಹಗಲುಗನಸು ಎಂದು ಇರುತ್ತದೆ ಗೊತ್ತಾ? ಅದರ ಬಗ್ಗೆ ಕೇಳಿದ್ದೀರಾ? ಅದೇ ಹಗಲುಗನಸನ್ನು ಅವರು ಕಾಣುತ್ತಿದ್ದಾರೆ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ಸ್ವಾತಂತ್ರ್ಯೋತ್ಸವ ಸಂಭ್ರಮಕ್ಕೆ ಶಾಸಕ ಇಕ್ಬಾಲ್‌ ಹುಸೇನ್‌ರಿಂದ 2.70 ಲಕ್ಷ ಲಡ್ಡು ವಿತರಣೆ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್