ಬೆಂಗಳೂರಿಗರೇ ಹುಷಾರಾಗಿರಿ, ಮಾತನಾಡಿಕೊಂಡು ಹೋಗ್ತಿದ್ದಾಗಲೇ ಮೊಬೈಲ್‌ ಕಳ್ಳತನ – ರಸ್ತೆಗೆ ಬಿದ್ದ ಡೆಲಿವರಿ ಬಾಯ್‌

Public TV
1 Min Read

ಬೆಂಗಳೂರು: ಬೈಕ್‌ನಲ್ಲಿ ಹೋಗುವಾಗ ಫೋನ್‌ (Phone) ಹಿಡಿದು ಮಾತನಾಡುವ ಮುನ್ನ ಎಚ್ಚರವಾಗಿರಿ. ಬೆಂಗಳೂರಿನಲ್ಲಿ (Bengaluru) ಹಿಂಬದಿಯಿಂದ ಬಂದು ಫೋನನ್ನು ಕದಿಯುವ ಕಳ್ಳರ ಹಾವಳಿ ಆರಂಭವಾಗಿದೆ.

ಹೆಎಚ್‌ಎಸ್‌ಆರ್‌ ಲೇಔಟ್‌ನಲ್ಲಿ ಫೋನ್ ಹಿಡಿದು ಮಾತಾಡುತ್ತಾ ಡೆಲಿವರಿ ಬಾಯ್ (Delivery Boy) ಬೈಕಿನಲ್ಲಿ ಹೊರಟಿದ್ದರು. ಈ ವೇಳೆ ಹಿಂದಿನಿಂದ ಬೈಕ್‌ನಲ್ಲಿ ಬಂದ ಇಬ್ಬರು ಕಳ್ಳರು ಮೊಬೈಲ್ ಕದ್ದು ಪರಾರಿಯಾಗಿದ್ದಾರೆ. ಇದನ್ನೂ ಓದಿ: ಇಂದಿನಿಂದ ಸಿಎಂ ವಿರುದ್ಧ ಮುಡಾ ತನಿಖೆ ಆರಂಭ

 

ಮೊಬೈಲ್ ಕಿತ್ತ ರಭಸಕ್ಕೆ ಡೆಲಿವರಿ ಬಾಯ್ ಆಯತಪ್ಪಿ ರಸ್ತೆಯಲ್ಲೇ ಬಿದ್ದಿದ್ದಾರೆ. ಹಿಂದೆ ಬರುತ್ತಿದ್ದ ಕಾರಿನ ಮಧ್ಯೆ ಸ್ವಲ್ಪ ಅಂತರ ಇದ್ದ ಕಾರಣ ಡೆಲಿವರಿ ಬಾಯ್‌ ಅವರಿಗೆ ಯಾವುದೇ ಸಮಸ್ಯೆಯಾಗಿಲ್ಲ.

ಡೆಲಿವರಿ ಬಾಯ್‌ ಹಿಂದಿನಿಂದ ಬರುತ್ತಿದ್ದ ಕಾರಿನ ಡ್ಯಾಶ್‌ ಕ್ಯಾಮೆರಾದಲ್ಲಿ ಈ ದೃಶ್ಯಗಳು ಸೆರೆಯಾಗಿದೆ. ಸೆ.27 ರ ರಾತ್ರಿ ಒಂದು ಗಂಟೆ ಸುಮಾರಿಗೆ ಹೆಚ್ ಎಸ್ ಆರ್ ಲೇಔಟ್ 29ನೇ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

 

Share This Article