Bigg Boss Kannada: ಕಿಚ್ಚನ ಪಂಚಾಯತಿಯಲ್ಲಿ ಸುದೀಪ್ ರುಬ್ಬಿದ್ದು ಯಾರಿಗೆ?

Public TV
2 Min Read

ಬಿಗ್ ಬಾಸ್ ಕನ್ನಡ 10 (Bigg Boss Kannada)ರ ಕಿಚ್ಚನ ಮೊದಲ ‘ವಾರದ ಕಥೆ ಕಿಚ್ಚನ ಜೊತೆ’ ಕಾರ್ಯಕ್ರಮ ನಡೆಯಲಿದೆ. ಈಗಾಗಲೇ ವಾಹಿನಿಯು ಪ್ರೋಮೋವನ್ನು ರಿಲೀಸ್ ಮಾಡಿದ್ದು, ಕಿಚ್ಚ ಆಡಿದ ಮಾತುಗಳು ಸಖತ್ ಕುತೂಹಲ ಮೂಡಿಸಿವೆ. ‘ದೇವರ ಮುಂದೆ ನಿಯತ್ತಾಗಿ ಬೇಡಿಕೊಂಡರೆ, ದೇವರೇ ಕ್ಷಮಿಸಿ ಒಂದು ವರ ಕೊಡ್ತಾನೆ’ ಎಂದು ಹೇಳಲಾದ ಮಾತು ವೈರಲ್ ಆಗಿದೆ. ಆ ಮಾತುಗಳನ್ನು ಅವರು ಯಾರಿಗೆ ಹೇಳಿದ್ದಾರೆ ಎನ್ನುವುದು ಪ್ರೊಮೋದಲ್ಲಿ ಬಳಸಲಾದ ದೃಶ್ಯಗಳೇ ಹೇಳುತ್ತವೆ.

ಇಂದು ಬಿಗ್ ಬಾಸ್ ಮನೆಯಲ್ಲಿ ಕಿಚ್ಚನ ಮೊದಲ ಪಂಚಾಯತಿ. ವೀಕೆಂಡ್ ನಲ್ಲಿ ಸುದೀಪ್ (Sudeep) ಜೊತೆ ಮಾತನಾಡೋಕೆ ಬಿಗ್ ಬಾಸ್ ಸ್ಪರ್ಧಿಗಳು ತುದಿಗಾಲಲ್ಲಿ ಕಾಯುತ್ತಾರೆ. ವೀಕೆಂಡ್ ಪಂಚಾಯತಿಯಲ್ಲಿ (Kichana Panchayati) ಭಾಗಿಯಾಗಲೆಂದೇ ಹೊಸ ಹೊಸ ವಿನ್ಯಾಸದ ಕಾಸ್ಟ್ಯೂಮ್ ಅನ್ನೂ ರೆಡಿ ಮಾಡಿಕೊಂಡಿರುತ್ತಾರೆ. ಹಾಗಂತ ಕಿಚ್ಚನ ಪಂಚಾಯತಿ, ಯಾವ ವೇಳೆಯಲ್ಲೇ ಹೇಗೆ ಟರ್ನ್ ಆಗತ್ತೋ ಗೊತ್ತಿಲ್ಲ. ನಗುತ್ತಲೇ ಅಳಿಸುತ್ತಾರೆ, ಅಳಿಸುತ್ತಲೇ ನಗಿಸುತ್ತಾರೆ, ಕೋಪ ಬಂದರೆ ಮುಖಾಮೋತಿ ನೋಡದೇ ಉಗಿದು ಬಿಡುತ್ತಾರೆ ಸುದೀಪ್. ಹಾಗಾಗಿ ಕಿಚ್ಚನ ಪಂಚಾಯತಿಗಾಗಿ ಕಿರುತೆರೆ ಪ್ರೇಕ್ಷಕ ಕೂಡ ಕಾದಿರುತ್ತಾನೆ.

ಬಿಗ್ ಬಾಸ್ ಸೀಸನ್ 10ರ ಮೊದಲ ಕಿಚ್ಚನ ಪಂಚಾಯತಿ ಅಂದರೆ, ‘ವಾರದ ಕಥೆ ಕಿಚ್ಚನ ಜೊತೆ’ ಇಂದು ಆರಂಭವಾಗಿದೆ. ಈಗಾಗಲೇ ಶೂಟಿಂಗ್ ಕೂಡ ನಡೆದಿದ್ದು, ಮನೆಯಲ್ಲಿದ್ದವರ ಮೇಲೆ ಕಿಚ್ಚ ಗರಂ ಆಗಿದ್ದಾರೆ ಎನ್ನುವ ಮಾಹಿತಿ ಇದೆ. ಬಿಗ್ ಬಾಸ್ ಮನೆಯೊಳಗೆ ಕಂಟೆಸ್ಟೆಂಟ್ ಬಂದು ಕೇವಲ ಒಂದು ವಾರವಾಗಿದೆಯಷ್ಟೆ. ಒಬ್ಬರಿಗೊಬ್ಬರನ್ನು ಅರ್ಥ ಮಾಡಿಕೊಳ್ಳಲು ಇದು ಅತ್ಯಂತ ಕಡಿಮೆ ಸಮಯ. ಆದರೂ, ಡ್ರೋನ್ ಪ್ರತಾಪ್ ಮೇಲೆ ಮನೆಮುಂದಿಯಲ್ಲ ಮುರಿದು ಬಿದ್ದಿದ್ದಾರೆ. ಡ್ರೋನ್‍್ ಪ್ರತಾಪ್ ಬಗ್ಗೆ ಸಲ್ಲದ ಮಾತುಗಳನ್ನು ಆಡುತ್ತಿದ್ದಾರೆ. ಅವಮಾನಿಸುವಂತಹ ಸನ್ನಿವೇಶಗಳೂ ಸೃಷ್ಟಿಯಾಗಿವೆ. ಇವೆಲ್ಲ ಕಿಚ್ಚನ ಕೋಪಕ್ಕೆ ಕಾರಣವಾಗಿವೆ.

ಡ್ರೋನ್ ‍ಪ್ರತಾಪ್ ತಮ್ಮ ನಿಜ ಜೀವನದಲ್ಲಿ ಏನೇ ಇರಲಿ. ಆದರೆ, ಮನೆಗೆ ಬಂದಾಗ ಇತರರಂತೆ ಅವರೂ ಕೂಡ ಸ್ಪರ್ಧಿ. ಸಮಾಜದಲ್ಲಿ ಅವರಿಗೂ ಅವರದ್ದೇ ಆದ ಸ್ಥಾನವಿದೆ. ಅವರ ಖಾಸಗಿ ಬದುಕನ್ನು ಸಾಕಷ್ಟು ರೀತಿಯಲ್ಲಿ ಕೆದಕಿ ಬಿಗ್ ಬಾಸ್ ಮನೆಯಲ್ಲಿ ಅಪಮಾನ ಮಾಡಲಾಗುತ್ತಿದೆ. ಯಾರೆಲ್ಲ ಡ್ರೋನ್ ಪ್ರತಾಪ್‍ ರನ್ನು ಅವಮಾನಿಸಿದ್ದಾರೋ ಅವರಿಗೆಲ್ಲ ಮುಟ್ಟಿ ನೋಡಿಕೊಳ್ಳುವಂತಹ ಮಾತುಗಳನ್ನು ಆಡಿದ್ದಾರಂತೆ ಸುದೀಪ್. ಅಲ್ಲದೇ, ಡ್ರೋನ್ ಅವರಿಗೂ ಕಿಚ್ಚ ಕೆಲವು ಕಿವಿ ಮಾತುಗಳನ್ನು ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ.

ಹಾಗಂತ ಇಡೀ ಎಪಿಸೋಡ್ ಕೇವಲ ಡ್ರೋನ್ ಸುತ್ತಲೇ ಸುತ್ತಿಲ್ಲ. ಕೆಲವು ಆಟಗಳನ್ನೂ ಸುದೀಪ್ ಆಡಿಸಿದ್ದಾರೆ. ಒಂದು ವಾರಗಳ ಕಾಲ, ಯಾರು ಹೇಗಿದ್ದರು ಎನ್ನುವುದನ್ನು ತಿಳಿಸಿದ್ದಾರೆ. ಸರಿ ತಪ್ಪುಗಳ ಬಗ್ಗೆ ವಿಶ್ಲೇಷಿಸಿದ್ದಾರೆ. ಕೆಲವರನ್ನು ಮೆಚ್ಚಿದ್ದಾರೆ, ಇನ್ನೂ ಕೆಲವರಿಗೆ ಮೆಚ್ಚುವಂತೆ ಇರಿ ಎಂದು ಕಿವಿ ಮಾತೂ ಹೇಳಿದ್ದಾರೆ. ಕಿಚ್ಚನ ಮೊದಲ ಪಂಚಾಯತಿ ಮಿಕ್ಸ್ ಮಸಲಾ ರೀತಿಯಲ್ಲಿ ಇದೆ ಎಂದು ಹೇಳಲಾಗುತ್ತಿದೆ. ತಮಾಷೆ ಮಾಡುತ್ತಾ, ಕಾಲೆಳೆಯುತ್ತಾ, ಮಾತಿನಲ್ಲೇ ತಿವಿಯುತ್ತಾ ವೀಕೆಂಡ್ ಎಪಿಸೋಡ್ ಅನ್ನು ಶೂಟಿಂಗ್ ಮಾಡಿದ್ದಾರಂತೆ ಸುದೀಪ್. ಆದರೆ ಈ ವಾರ, ಬಿಗ್ ಬಾಸ್ ಮನೆಯಿಂದ ಯಾರು ಆಚೆ ಬಂದಿದ್ದಾರೆ ಎನ್ನುವುದು ಮಾತ್ರ ಸದ್ಯಕ್ಕೆ ಸಸ್ಪೆನ್ಸ್.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್