ಯಾರಿಗೆ ದುಡ್ಡು ಜಾಸ್ತಿ ಇರುತ್ತೋ ರಾಜ್ಯಸಭೆ ಆರಿಸಿ ಬರ್ತಾರೆ: ಬಸವರಾಜ್ ಹೊರಟ್ಟಿ

Public TV
1 Min Read

ಕಾರವಾರ: ಯಾರಿಗೆ ದುಡ್ಡು ಜಾಸ್ತಿ ಇರುತ್ತೊ ಅವರು ರಾಜ್ಯಸಭೆಯನ್ನು ಆರಿಸಿ ಬರ್ತಾರೆ ಎಂದು ಉತ್ತರಕನ್ನಡ ಜಿಲ್ಲೆಯ ಅಂಕೋಲದಲ್ಲಿ ಬಿಜೆಪಿ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಅಭ್ಯರ್ಥಿ ಬಸವರಾಜ್ ಹೊರಟ್ಟಿ ಹೇಳಿದರು.

ಬಿಜೆಪಿ ಪಕ್ಷಕ್ಕೆ ಬಂದ ವಿಷಯದ ಕುರಿತು ಪ್ರತಿಕ್ರಿಯಿಸಿದ ಅವರು, ಶಿಕ್ಷಕರ ಮಾತು ಕೇಳಿ ಬಿಜೆಪಿ ಪಕ್ಷಕ್ಕೆ ಬಂದೆ. ಆಕಸ್ಮಿಕವಾಗಿ ಆದ ಬದಲಾವಣೆಯಿಂದ ನಾನು ಇಲ್ಲಿಗೆ ಬರಬೇಕಾಯಿತು. ಪರಿಸ್ಥಿತಿ ಬದಲಾವಣೆಗೆ ಹೊಂದಿಕೊಳ್ಳಬೇಕು. ಹಾಗೆ ಆಯಿತು ಬಂದಿದ್ದೇನೆ ಎಂದರು. ಇದನ್ನೂ ಓದಿ: ಕಪಿಲೇಶ್ವರ ಮಂದಿರ ಕೆಡವಿ ಏನು ಕಟ್ಟಿದ್ದಾರೆ ಎಂಬ ಬಗ್ಗೆಯೂ ಸರ್ವೇ ಆಗಲಿ: ಲತೀಫ್‍ಖಾನ್ ಹೊಸ ಬಾಂಬ್ 

ಯಾರಿಗೆ ದುಡ್ಡು ಜಾಸ್ತಿ ಇರುತ್ತೋ ಅವರು ರಾಜ್ಯಸಭೆಯನ್ನು ಆರಿಸಿ ಬರ್ತಾರೆ. ಮಳೆಗಾಲದಲ್ಲಿ ಒಂದು ಹವಾ ಇರುತ್ತದೆ. ಬೇಸಿಗೆಯಲ್ಲಿ ಒಂದು ಹವಾ ಇರುತ್ತದೆ. ಹವಾ ಹೇಗಿರುತ್ತೋ ಹಾಗೆ ಹೊಂದಿಕೊಳ್ಳಬೇಕು. ನನಗೆ ಯಾವ ಆಕಾಂಕ್ಷೆ ಇಲ್ಲ, ನನ್ನ ಸೀನಿಯಾರಿಟಿ, ಯೋಗ್ಯತೆ ನೋಡಿ ಏನಾದ್ರು ಉಪಯೋಗ ಮಾಡಿಕೊಂಡ್ರೆ ಮಾಡಿಕೊಳ್ಳಲಿ. ಇಲ್ಲದಿದ್ರೆ ಪ್ರಾಮಾಣಿಕ ಶಾಸಕನಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

ಪಠ್ಯದಲ್ಲಿ ಗೊಂದಲ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಶಿಕ್ಷಣ ವಿಷಯದಲ್ಲಿ ಯಾವುದೇ ಸರ್ಕಾರ, ಯಾವುದೇ ಪಕ್ಷಗಳು ಹಸ್ತಕ್ಷೇಪ ಮಾಡಬಾರದು. ಅದು ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ ಎಂದು ಸಲಹೆ ಕೊಟ್ಟರು. ಇದನ್ನೂ ಓದಿ: ವಿದ್ಯಾಭ್ಯಾಸ ಕೊಡಿಸಲು ಆತ್ಮಹತ್ಯೆಗೆ ಶರಣಾಗಿದ್ದ ರೈತನ ಮಗಳು ಯುಪಿಎಸ್‍ಸಿಯಲ್ಲಿ ಟಾಪರ್

Share This Article
Leave a Comment

Leave a Reply

Your email address will not be published. Required fields are marked *