ಧರ್ಮಸ್ಥಳ ಕೇಸ್ | ಅಣ್ಣಾಮಲೈ ವಿಚಾರಣೆ ಯಾಕಿಲ್ಲ? – ಸಸಿಕಾಂತ್ ಸೆಂಥಿಲ್

By
1 Min Read

ಬೆಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸಸಿಕಾಂತ್ ಸೆಂಥಿಲ್ (Sasikanth Senthil) ಸ್ಫೋಟಕ ತಿರುವು ಕೊಟ್ಟಿದ್ದಾರೆ. ಈ ಪ್ರಕರಣದಲ್ಲಿ ತಮಿಳುನಾಡಿನ ಬಿಜೆಪಿ ನಾಯಕ ಅಣ್ಣಾಮಲೈ (Annamalai) ವಿಚಾರಣೆ ಯಾಕೆ ಮಾಡುತ್ತಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಅವರು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಧರ್ಮಸ್ಥಳ ಕೇಸ್‍ಗೆ ತಮಿಳುನಾಡಿನ ಲಿಂಕ್ ಇದೆ ಎಂಬ ಆರೋಪ ಕೇಳಿಬರುತ್ತಿದೆ. ಹಾಗಾದರೆ ಇಲ್ಲಿ ಹಲವು ಮಂದಿ ತಮಿಳುನಾಡಿನ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ಅದೇ ರೀತಿ ಅಣ್ಣಾಮಲೈ ಅವರು ಸಹ ಐಪಿಎಸ್ ಅಧಿಕಾರಿಯಾಗಿದ್ದವರು.  ಅಣ್ಣಾಮಲೈ ಅವರಿಗೆ ತಲೆ ಬುರುಡೆ ಬಗ್ಗೆ ಯಾಕೆ ವಿಚಾರಣೆ ಮಾಡಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಬುರುಡೆ ಕೇಸಲ್ಲಿ ಸೆಂಥಿಲ್ ಹೆಸರು – ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲು

ನಮ್ಮ ವಿರುದ್ಧ ಯಾಕೆ ಆರೋಪ ಮಾಡ್ತಾ ಇದ್ದಾರೆ?  ಅಣ್ಣಾಮಲೈ ವಿರುದ್ಧ ಯಾಕೆ ವಿಚಾರಣೆ ಮಾಡ್ತಿಲ್ಲ? ಅವರ ವಿಚಾರಣೆಯನ್ನೂ ಮಾಡ್ಬೇಕಲ್ವಾ ಎಂದಿದ್ದಾರೆ.

ಧರ್ಮಸ್ಥಳ `ಬುರುಡೆ’ ಪ್ರಕರಣದಲ್ಲಿ ತಮ್ಮ ಹೆಸರು ಪ್ರಸ್ತಾಪಿಸಿ ಆರೋಪ ಮಾಡಿದ್ದಕ್ಕಾಗಿ ಸೆಂಥಿಲ್ ಅವರು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (Janardhana Reddy) ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ (Criminal Defamation Case) ಹೂಡಿದ್ದಾರೆ. 42 ಎಸಿಎಂಎಂ ನ್ಯಾಯಾಲಯದಲ್ಲಿ ಪಿಸಿಆರ್ ಫೈಲ್ ಮಾಡಿದ್ದು, ಸೆ.11ಕ್ಕೆ ಈ ಅರ್ಜಿ ವಿಚಾರಣೆ ನಡೆಯಲಿದೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್;‌ ಕೇರಳ ಕಮ್ಯುನಿಸ್ಟ್‌ ಪಕ್ಷದ ಸಂಸದನ ಮುಂದೆ ಬುರುಡೆ ಇಟ್ಟಿದ್ದ ಗ್ಯಾಂಗ್‌

Share This Article