ಬಿಎಸ್‍ವೈ ಟಿಪ್ಪು ಜಯಂತಿ ಆಚರಣೆಯಲ್ಲಿ ಪಾಲ್ಗೊಂಡಿದ್ದಕ್ಕೆ ಸೋತರು: ಈಶ್ವರಪ್ಪ

Public TV
2 Min Read

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಕೆಜೆಪಿ ಪಕ್ಷದಲ್ಲಿ ಇದ್ದ ವೇಳೆ ಟಿಪ್ಪು ಜಯಂತಿಯಲ್ಲಿ ಭಾಗವಹಿಸಿದ್ದರು. ಅದಕ್ಕಾಗಿಯೇ ಬಿಎಸ್‍ವೈ ಸೋತರು ಎಂದು ಶಾಸಕ, ಬಿಜೆಪಿ ಮುಖಂಡ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಈಶ್ವರಪ್ಪ ಅವರು, ಟಿಪ್ಪು ಜಯಂತಿಯಲ್ಲಿ ಪಾಲ್ಗೊಂಡಿದ್ದ ಕಾರಣ ಸಿದ್ದರಾಮಯ್ಯ ಸಿಎಂ ಸ್ಥಾನ ಕಳೆದುಕೊಂಡರು. ಅಲ್ಲದೇ ಕೆಜೆಪಿ ಪಕ್ಷದಲ್ಲಿದ್ದಾಗ ಯಡಿಯೂರಪ್ಪ ಸಹ ಟಿಪ್ಪು ಜಯಂತಿ ಆಚರಣೆಯಲ್ಲಿ ಪಾಲ್ಗೊಂಡಿದ್ದಕ್ಕೆ ಸೋತರು ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಹುಚ್ಚ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈಶ್ವರಪ್ಪ ಅವರ ವಿರುದ್ಧ ನೀಡಿದ್ದ ಹೇಳಿಕೆಗೆ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ ಈಶ್ವರಪ್ಪ ಅವರು, ಮೆದುಳು ಕೆಟ್ಟಿರುವವರು ಹುಚ್ಚರು. ಸಿಎಂ ಪದವಿ ಕಳೆದುಕೊಂಡ ಬಳಿಕ ಸಿದ್ದರಾಮಯ್ಯ ಅವರು ಹುಚ್ಚರಾಗಿದ್ದಾರೆ. ಒಮ್ಮೆ ನಾನು ಚುನಾವಣೆಗೆ ನಿಲ್ಲೋದಿಲ್ಲ ಎಂದು ಹೇಳುತ್ತಾರೆ. ಮತ್ತೊಮ್ಮೆ ನಾನೇ ಸಿಎಂ ಎನ್ನುತ್ತಾರೆ. ಇಂತಹ ಹೇಳಿಕೆ ನೀಡುವವರನ್ನು ಹುಚ್ಚರೆಂದು ಕರೆಯುತ್ತಾರೆ ಅಲ್ಲವೇ ನೀವೆ ಹೇಳಿ ಎಂದು ಪ್ರಶ್ನೆ ಮಾಡಿದರು. ಅಲ್ಲದೇ ಹಿಂದುಳಿದ ಜನಾಂಗದ ನಾಯಕರು ಎಂದು ಹೇಳುವ ಅವರು ಏನು ಮಾಡಿದ್ದಾರೆ ಎಂದು ಪಟ್ಟಿ ನೀಡಲಿ ಎಂದು ಹೇಳಿದರು.

ಇದೇ ವೇಳೆ ಕಾಂಗ್ರೆಸ್ ಪಕ್ಷದ ಪರ ವಿರುದ್ಧ ವಾಗ್ದಾಳಿ ನಡೆಸಿದ ಈಶ್ವರಪ್ಪ ಅವರು, ಮಹದಾಯಿ ತೀರ್ಪಿನಂತೆ ನೀರಿನ ಬಳಕೆಗೆ ಸರ್ಕಾರದ ಯಾವುದೇ ಸಿದ್ಧತೆ ನಡೆಸುತ್ತಿಲ್ಲ. ಇದು ರೈತರಿಗೆ ಸರ್ಕಾರ ಮಾಡುತ್ತಿರುವ ಅನ್ಯಾಯವಾಗಿದ್ದು, ಮಹಾದಾಯಿ ವಿಚಾರಕ್ಕೆ ಕೇಂದ್ರ ಸರ್ಕಾರ ವಿರುದ್ಧ ಆರೋಪಿಸುತ್ತಿದ್ದ ಕಾಂಗ್ರೆಸ್ ನಾಯಕರು ಈಗ ಮೌನವಾಗಿದ್ದಾರೆ. ಸಮ್ಮಿಶ್ರ ಸರ್ಕಾರ ರೈತರ ಸಾಲ ಮನ್ನಾ ಮಾಡದಿದ್ದಲ್ಲಿ ಹಣಕಾಸಿನ ಸ್ಥಿತಿಗತಿ ಜನತೆಗೆ ತಿಳಿಸಲಿ ಎಂದು ಸವಾಲು ಎಸೆದರು.

ಕಾಂಗ್ರೆಸ್ ನಾಯಕರು ಪ್ರಧಾನಿ ಹುದ್ದೆಗೆ ಏರುವ ಕನಸು ನನಸಾಗುವುದಿಲ್ಲ. ಬಳ್ಳಾರಿ ಲೋಕಸಭಾ ಫಲಿತಾಂಶ ಮುಂದಿನ ಚುನಾವಣೆಯ ದಿಕ್ಸೂಚಿಯಲ್ಲ. ಕಾಂಗ್ರೆಸ್ ಅವರದ್ದು ಅನಗತ್ಯ ಹಾಗೂ ಅಬ್ಬರದ ಪ್ರಚಾರವಷ್ಟೇ ಅದು ನಿಜವಾಗುವುದಿಲ್ಲ. ಮಾಜಿ ಸಚಿವ ಜಯಚಂದ್ರ ಅವರು ಮೋದಿ ಬಗ್ಗೆ ಹಗುರವಾಗಿ ಮಾತನಾಡಿದ್ದು ಸಲ್ಲದು, ಈ ಹಿಂದೆ ಕಾನೂನು ಸಚಿವರಾಗಿದ್ದ ಅವರು ಪ್ರಧಾನಿ ಬಗ್ಗೆ ಹಗುರವಾಗಿ ಹೇಳಿಕೆ ನೀಡಬಾರದು ಎಂದರು.

ನ.15 ರಂದು ಕೋರ್ ಕಮಿಟಿ ಸಭೆ ನಡೆಯಲಿದ್ದು, ಮುಂದಿನ ಲೋಕಸಭಾ ಚುಣಾವಣೆಯಲ್ಲಿ ಪಕ್ಷದ ಹೋರಾಟದ ಬಗ್ಗೆ ನಿರ್ಧಾರ ಮಾಡಲಾಗುತ್ತದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 24 ಸ್ಥಾನಗಳಲ್ಲಿ ಗೆಲ್ಲಲ್ಲಿದೆ ಎಂದು ವಿಶ್ವಾಶ ವ್ಯಕ್ತಪಡಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Share This Article
Leave a Comment

Leave a Reply

Your email address will not be published. Required fields are marked *