ನವದೆಹಲಿ: ಇರಾನ್ (Iran) ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ(Ayatollah Ali Khamenei) ಹತ್ಯೆ ಮಾಡಿದ್ದಕ್ಕೆ ಇಸ್ರೇಲ್, ಅಮೆರಿಕವನ್ನು ಭಾರತ (India) ಯಾಕೆ ಇನ್ನೂ ಖಂಡಿಸಿಲ್ಲ ಎಂಬ ಪ್ರಶ್ನೆ ಈಗ ದೊಡ್ಡ ಚರ್ಚೆಯ ವಿಚಾರ.
ಹಾಗೆ ನೋಡಿದರೆ ಭಾರತ ಮತ್ತು ಇರಾನ್ ಸಂಬಂಧ ಚೆನ್ನಾಗಿಯೇ ಇದೆ. ಈ ಹಿಂದೆ ಅಮೆರಿಕ ಇರಾನ್ ಮೇಲೆ ಹಲವು ಆರ್ಥಿಕ ನಿರ್ಬಂಧ ಹೇರಿದ್ದರೂ ಭಾರತ ಇರಾನ್‌ನಿಂದ ಕಚ್ಚಾ ತೈಲವನ್ನು ಖರೀದಿಸುತ್ತಿತ್ತು.
ಇರಾನಿನ ಚಾಬಹಾರ್ ಬಂದರನ್ನು 10 ವರ್ಷ ನಿರ್ವಹಣೆ ಮಾಡುವ ಕುರಿತು ಮಹತ್ವದ ಒಪ್ಪಂದಕ್ಕೆ ಭಾರತ ಸಹಿ ಹಾಕಿದೆ. 2016 ಮೋದಿ ಟೆಹ್ರಾನ್‌ಗೆ ಭೇಟಿ ನೀಡಿ ಖಮೇನಿ ಜೊತೆ ಮಾತುಕತೆ ನಡೆಸಿ ಒಪ್ಪಂದಕ್ಕೆ ಸಹಿ ಹಾಕಿದ್ದರು. ವಿದೇಶದಲ್ಲಿರುವ ಬಂದರಿನ ನಿರ್ವಹಣೆಗೆ ಭಾರತ ಮುಂದಾದ ಮೊದಲ ಪ್ರಕರಣ ಇದು. ಪಾಕಿಸ್ತಾನವನ್ನು ಸಂಪರ್ಕಿಸದೆಯೇ ಭಾರತ-ಇರಾನ್- ಆಫ್ಘಾನಿಸ್ತಾನ ನಡುವಣ ವ್ಯಾಪಾರ ವಹಿವಾಟಿಗೆ ಹೊಸ ಮಾರ್ಗವನ್ನೂ ತೆರೆಯಲಿದೆ.
ಅರಬ್ಬಿ ಸಮುದ್ರ ಮತ್ತು ಪರ್ಷಿಯನ್ ಕೊಲ್ಲಿಯ ಹಲವು ಬಂದರುಗಳನ್ನು ಚೀನಾ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆ ಮೂಲಕ ತನ್ನ ಪ್ರಾಬಲ್ಯ ಹೆಚ್ಚಿಸಿಕೊಂಡಿದೆ. ಈ ಕಾರಣಕ್ಕೆ ಚಾಬಹಾರ್ ಬಂದರು ನಿಯಂತ್ರಣಕ್ಕೆ ಬಂದರೆ ಈ ಪ್ರದೇಶದಲ್ಲಿ ಚೀನಾ ಪ್ರಾಬಲ್ಯಕ್ಕೆ ತಡೆ ಒಡ್ಡಿದಂತೆ ಆಗುತ್ತದೆ ಎಂಬ ದೂರದೃಷ್ಟಿಯನ್ನು ಇಟ್ಟುಕೊಂಡು ಚಾಬಹಾರ್ ಬಂದರು ನಿರ್ವಹಣೆಗೆ ಮುಂದಾಗಿತ್ತು.
ಭಾರತವು ಒಂದು ಕಾಲದಲ್ಲಿ ಇರಾನ್‌ನ ಎರಡನೇ ಅತಿದೊಡ್ಡ ತೈಲ ಖರೀದಿದಾರ ರಾಷ್ಟ್ರವಾಗಿತ್ತು. ಹೀಗಿದ್ದರೂ 2018 ರಲ್ಲಿ ಅಮೆರಿಕ ಪರಮಾಣು ಒಪ್ಪಂದದಿಂದ ಹಿಂದೆ ಸರಿದ ನಂತರ ಮತ್ತು ಹಲವು ನಿರ್ಬಂಧ ವಿಧಿಸಿದ ಬಳಿಕ ಭಾರತ 2019 ರ ಮಧ್ಯಭಾಗದ ನಂತರ ತೈಲ ಆಮದು ಮಾಡುವುದನ್ನು ನಿಲ್ಲಿಸಿತ್ತು. ಇದನ್ನೂ ಓದಿ: ಇರಾನ್ ಯುದ್ಧಕ್ಕೆ ಭಾರತದ ವ್ಯಕ್ತಿ ಬಲಿ – ತೈಲ ಟ್ಯಾಂಕರ್‌ನಲ್ಲಿದ್ದ ನಾವಿಕ ಸಾವು
ಕಚ್ಚಾ ತೈಲ ಖರೀದಿಗೆ ನಿರ್ಬಂಧ ಇರುವ ಕಾರಣ ಇರಾನ್‌ನಿಂದ ಭಾರತ ಸೇಬು, ಪಿಸ್ತಾ, ಬಾದಾಮಿ, ವಾಲ್ನಟ್, ಖರ್ಜೂರ, ರಾಸಾಯನಿಕ, ಖನಿಜಗಳು, ಪೆಟ್ರೋಲಿಯಂ ಬಿಟುಮೆನ್, ತಾಮ್ರ, ಸತುವನ್ನು ಆಮದು ಮಾಡಿಕೊಳ್ಳುತ್ತಿದೆ.
The hearts of Muslims all over the world are grieving over the massacre of Muslims in India. The govt of India should confront extremist Hindus & their parties & stop the massacre of Muslims in order to prevent India’s isolation from the world of Islam.#IndianMuslimslnDanger
— Khamenei.ir (@khamenei_ir) March 5, 2020
ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ
ಎರಡು ದೇಶಗಳ ಮಧ್ಯೆ ವ್ಯಾಪಾರ ವಹಿವಾಟು ನಡೆಯುತ್ತಿದ್ದರೂ 2017 ರಿಂದ 2024 ರವರೆಗೆ ಖಮೇನಿ ನಾಲ್ಕು ಬಾರಿ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡಿದ್ದರು. ಹಸ್ತಕ್ಷೇಪಕ್ಕೆ ಭಾರತ ಆಕ್ಷೇಪ ವ್ಯಕ್ತಪಡಿಸಿ ಪ್ರತಿ ಬಾರಿಯೂ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇರಾನಿನ ರಾಯಭಾರಿಗೆ ಸಮನ್ಸ್ ಜಾರಿ ಮಾಡಿತ್ತು. ಇದನ್ನೂ ಓದಿ: ಇರಾನ್ ಮೇಲೆ ದಾಳಿ ನಡೆಸಿ – ಟ್ರಂಪ್‌ಗೆ ಹಲವು ಬಾರಿ ಫೋನ್ ಮಾಡಿ ಒತ್ತಡ ಹೇರಿದ್ದ ಸೌದಿ
We’re concerned about Muslims’ situation in #Kashmir. We have good relations with India, but we expect the Indian government to adopt a just policy towards the noble people of Kashmir and prevent the oppression & bullying of Muslims in this region.
— Khamenei.ir (@khamenei_ir) August 21, 2019
2020 ರ ದೆಹಲಿ ಗಲಭೆಯ ಸಮಯದಲ್ಲಿ, ಅವರು ಉಗ್ರಗಾಮಿ ಹಿಂದೂಗಳಿಂದ ಮುಸ್ಲಿಮರ ಹತ್ಯಾಕಾಂಡ ಟ್ವೀಟ್ ಮಾಡಿದ್ದು ಅಲ್ಲದೇ #IndianMuslimsInDanger ಎಂದು ಹ್ಯಾಶ್ ಟ್ಯಾಗ್ ಬಳಸಿದ್ದರು.
ಇರಾನಿನ ಸಂಸತ್ತು ಪೌರತ್ವ ತಿದ್ದುಪಡಿ ಕಾಯ್ದೆ ಮುಸ್ಲಿಮ್ ವಿರೋಧಿ ಎಂದು ಟೀಕಿಸಿತ್ತು. 2024ರ ಸೆಪ್ಟೆಂಬರ್‌ನಲ್ಲಿ ಮ್ಯಾನ್ಮಾರ್, ಗಾಜಾ, ಭಾರತ ಅಥವಾ ಇನ್ನಾವುದೇ ಸ್ಥಳದಲ್ಲಿ ಮುಸ್ಲಿಂ ಅನುಭವಿಸುತ್ತಿರುವ ನೋವುಗಳನ್ನು ನಾವು ಅರಿಯದಿದ್ದರೆ ನಾವು ನಮ್ಮನ್ನು ಮುಸ್ಲಿಮರೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು.
The enemies of Islam have always tried to make us indifferent with regard to our shared identity as an Islamic Ummah. We cannot consider ourselves to be Muslims if we are oblivious to the suffering that a Muslim is enduring in #Myanmar, #Gaza, #India, or any other place.
— Khamenei.ir (@khamenei_ir) September 16, 2024
ಭಾರತ ಹೇಳಿದ್ದೇನು?
ಪಶ್ಚಿಮ ಏಷ್ಯಾದ ಪರಿಸ್ಥಿತಿ ತೀವ್ರ ಕಳವಳಕಾರಿ ವಿಷಯ ಎಂದು ಪ್ರಧಾನಿ ಮೋದಿ ಇಂದು ಹೇಳಿದ್ದಾರೆ. ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಭಾರತ ಶಾಂತಿ ಮತ್ತು ಸ್ಥಿರತೆಗಾಗಿ ನಿಲ್ಲುತ್ತದೆ. ತಹ ವಿವಾದಗಳಿಗೆ ಮಾತುಕತೆಯ ಮೂಲಕ ಶಾಂತಿಯುತ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಹೇಳಿದರು. ಇದನ್ನೂ ಓದಿ: ಇರಾನ್ ವಿರುದ್ಧ ಹೋರಾಟದಲ್ಲಿ ಮುಸ್ಲಿಮ್ ದೇಶಗಳು ಅಮೆರಿಕದೊಂದಿಗೆ ಕೈ ಜೋಡಿಸಿದ್ದು ಯಾಕೆ?
Discussed the evolving situation in West Asia with Crown Prince and PM of Saudi Arabia, HRH Prince Mohammed bin Salman. India condemns the recent attacks on Saudi Arabia in violation of its sovereignty and territorial integrity. We agreed that earliest restoration of regional…
— Narendra Modi (@narendramodi) March 2, 2026
ಇರಾನ್ ದಾಳಿಯ ನಂತರ ಪ್ರಧಾನಿ ನರೇಂದ್ರ ಮೋದಿ ಯುಇಎ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ನೆಹ್ಯಾನ್, ಬಹರೇನ್ ದೊರೆ ಹಮೀದ್ ಬಿನ್ ಅಸಾ ಅಲ್ ಖಲೀಫಾ, ಸೌದಿಯ ರಾಜ ಮೊಹಮ್ಮದ್ ಬಿನ್ ಸಲ್ಮಾನ್ ಜೊತೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ಅಷ್ಟೇ ಅಲ್ಲದೇ ಈ ದೇಶಗಳ ಮೇಲಿನ ದಾಳಿಯನ್ನು ಖಂಡಿಸಿದ್ದಾರೆ.
Spoke with President of the UAE, my brother Sheikh Mohamed bin Zayed Al Nahyan. Strongly condemned the attacks on the UAE and condoled the loss of lives in these attacks. India stands in solidarity with the UAE in these difficult times.
Thanked him for taking care of the Indian…
— Narendra Modi (@narendramodi) March 1, 2026
ಇರಾನ್ ಜೊತೆಗಿನ ವ್ಯಾಪಾರಕ್ಕಿಂತಲೂ ಭಾರತ ಸೌದಿ ಅರೇಬಿಯಾ, ಯುಎಇ, ಕತಾರ್, ಕುವೈತ್ ಜೊತೆ ವ್ಯಾಪಾರ ಜಾಸ್ತಿಯಿದೆ. ಇನ್ನು ಅಮೆರಿಕ ನಮ್ಮ ದೊಡ್ಡ ವ್ಯಾಪಾರ ಪಾಲುದಾರ ದೇಶ, ಇಸ್ರೇಲ್ ನಮ್ಮ ರಕ್ಷಣಾ ಪಾಲುದಾರ ದೇಶವಾಗಿದೆ.


