ರಾಯಚೂರು: ಪತಿಯನ್ನು ಪತ್ನಿಯೇ ನದಿಗೆ ತಳ್ಳಿದ ಆರೋಪ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಬಾಲ್ಯವಿವಾಹ ಪ್ರಕರಣದಲ್ಲಿ ಈಗ ಪತಿಯೇ ಬಂಧನ ಆಗಿದ್ದಾನೆ.
ರಾಯಚೂರಿನ ಗುರ್ಜಾಪುರ ಬ್ಯಾರೇಜ್ ಬಳಿ ಪತ್ನಿಯೇ ಪತಿಯನ್ನು ಕೃಷ್ಣಾ ನದಿಗೆ ತಳ್ಳಿದ ಆರೋಪ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಕ್ಕು ಬಳಿಕ ಪತಿ ತಾತಪ್ಪ ಮೇಲೆ ಪೋಕ್ಸೊ ಹಾಗೂ ಬಾಲ್ಯ ವಿವಾಹ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಆರೋಪಿ ತಾತಪ್ಪನನ್ನು ರಾಯಚೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ನಾಪತ್ತೆಯಾಗಿದ್ದ ತಾತಪ್ಪನನ್ನು ಪತ್ತೆ ಹಚ್ಚುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಪತಿಯನ್ನು ಪತ್ನಿ ನದಿಗೆ ತಳ್ಳಿದ್ದ ಆರೋಪ ಪ್ರಕರಣ – ಪತಿ ತಾತಪ್ಪ ಸೇರಿ 10 ಜನರ ವಿರುದ್ಧ ಪೋಕ್ಸೋ ಕೇಸ್
ಜು.21 ರಂದು ರಾಯಚೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ತಾತಪ್ಪನನ್ನು ರಿಮ್ಸ್ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಒಳಪಡಿಸಿರುವ ಪೊಲೀಸರು ವಿಚಾರಣೆ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಿದ್ದಾರೆ.
ಆರೋಪಿಯನ್ನ ಬಂಧಿಸುವಲ್ಲಿ ವಿಳಂಬ ಮಾಡಿದ್ದಕ್ಕೆ ರಾಯಚೂರು ಪೊಲೀಸರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ರಾಜ್ಯ ಮಕ್ಕಳ ರಕ್ಷಣಾ ಆಯೋಗ ಸದಸ್ಯ ಶಶಿಧರ್ ಕೋಸಂಬೆ ಬಳ್ಳಾರಿ ಐಜಿಪಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಅಪ್ರಾಪ್ತೆಯ ಶಿಕ್ಷಣಕ್ಕೆ ಅನುಕೂಲವಾಗುವ ರೀತಿಯಲ್ಲಿ ಸರ್ಕಾರಿ ಯೋಜನೆಗಳ ಅಡಿ ಕೂಡಲೇ ಕ್ರಮಕೈಗೊಳ್ಳಬೇಕು, ಆ ಬಗ್ಗೆ ಆಯೋಗಕ್ಕೆ ವರದಿ ಕೊಡಬೇಕು ಅಂತ ರಾಯಚೂರು ಹಾಗೂ ಯಾದಗಿರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಅಧಿಕಾರಿಗಳಿಗೆ ರಾಜ್ಯ ಮಕ್ಕಳ ರಕ್ಷಣಾ ಆಯೋಗ ಸದಸ್ಯ ಶಶಿಧರ್ ಕೋಸಂಬೆ ಸೂಚಿಸಿದ್ದಾರೆ. ಇದನ್ನೂ ಓದಿ: ಫೋಟೊ ತೆಗೆಯುವ ನೆಪದಲ್ಲಿ ಪತಿಯನ್ನು ನದಿಗೆ ತಳ್ಳಿದ ಕೇಸ್‌ಗೆ ಟ್ವಿಸ್ಟ್ – 16ರ ಬಾಲಕಿ ಮದುವೆಯಾಗಿದ್ದ ತಾತಪ್ಪ