ರಾಯಚೂರು: ಜಿಲ್ಲೆಯ ಗುರ್ಜಾಪುರ ಬ್ಯಾರೇಜ್ ಬಳಿ ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನು ಪತ್ನಿ ನದಿಗೆ ತಳ್ಳಿದ ಆರೋಪ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಅಪ್ರಾಪ್ತೆಯನ್ನು ವಿವಾಹವಾಗಿದ್ದ ಹಿನ್ನೆಲೆ ಬಾಲ್ಯವಿವಾಹ ನಿಷೇಧ ಕಾಯಿದೆ ಅಡಿ ಪ್ರಕರಣದಲ್ಲಿ ಸಿಲುಕಿದ್ದ ಪತಿ ತಾತಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ 10 ಮಂದಿ ವಿರುದ್ಧ ಪೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲಾಗಿದೆ.
ರಾಯಚೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಈಗ ಹೆಚ್ಚುವರಿಯಾಗಿ ಬಿಎನ್‌ಎಸ್, ಪೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತೆಗೆ ಮದುವೆ ಮಾಡಿಸಿ, ಮೊದಲ ರಾತ್ರಿಗೆ ಬಾಲಕಿಯನ್ನು ಕಳುಹಿಸಿರುವ ಆರೋಪದ ಹಿನ್ನೆಲೆ ಹೆಚ್ಚುವರಿ ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಫೋಟೊ ತೆಗೆಯುವ ನೆಪದಲ್ಲಿ ಪತಿಯನ್ನು ನದಿಗೆ ತಳ್ಳಿದ ಕೇಸ್‌ಗೆ ಟ್ವಿಸ್ಟ್ – 16ರ ಬಾಲಕಿ ಮದುವೆಯಾಗಿದ್ದ ತಾತಪ್ಪ
ಜು.21 ರಂದು ರಾಯಚೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ತಾತಪ್ಪ , ಆತನ ತಾಯಿ ಹಾಗೂ ಅಪ್ರಾಪ್ತೆಯ ತಾಯಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಈಗ ಮದುವೆ ಮಾಡಿಸಿದ ಸಂಬಂಧಿಕರು ಸೇರಿ 10 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸ್ ಅಧಿಕಾರಿಗಳು ತ್ವರಿತಗತಿಯಲ್ಲಿ ಅಪ್ರಾಪ್ತೆಗೆ ನ್ಯಾಯ ಕೊಡಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಪತಿಯನ್ನ ಪತ್ನಿ ನದಿಗೆ ತಳ್ಳಿದ್ದ ಆರೋಪ ಪ್ರಕರಣಕ್ಕೆ ಟ್ವಿಸ್ಟ್ – ಪತಿ ವಿರುದ್ಧ ಮಹಿಳಾ ಠಾಣೆಯಲ್ಲಿ ಕೇಸ್ ದಾಖಲು