ಪತ್ನಿ ಮನೆಗೆ ಬರಲ್ಲ ಎಂದಿದ್ದಕ್ಕೆ ಆಕೆಯ ಅಪ್ಪ-ಅಮ್ಮನನ್ನೇ ಕೊಂದ ದುರುಳ

Public TV
1 Min Read

ಲಕ್ನೋ: ಮನೆಗೆ ಬರಲ್ಲ ಎಂದ ಹೆಂಡತಿಯ ಅಪ್ಪ-ಅಮ್ಮನನ್ನು ಆಕೆಯ ಪತಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ.

ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ವಿಜಯ್ ಖೇಡಾದಲ್ಲಿ ಈ ಘಟನೆ ನಡೆದಿದೆ. ಪತ್ನಿ ಮನೆಗೆ ಬರಲು ನಿರಾಕರಿಸಿದ್ದಕ್ಕೆ ಕೋಪಗೊಂಡು ಆಕೆಯ ಪೋಷಕರನ್ನು ಹರಿತವಾದ ಆಯುಧದಿಂದ ಇರಿದು ಕೊಲೆ ಮಾಡಿದ್ದಾನೆ. ಇದನ್ನೂ ಓದಿ: UP | ರಾಂಗ್ ರೂಟ್‌ಲ್ಲಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಟ್ರಕ್ – ತಂದೆ, 4 ಮಕ್ಕಳು ಸೇರಿ ಐವರು ದುರ್ಮರಣ

ಜಗದೀಪ್ ಸಿಂಗ್ ಕೊಲೆ ಮಾಡಿದ ಆರೋಪಿ. ಆತನ ಪತ್ನಿ ಪೂನಂ ಆತನೊಂದಿಗೆ ಹೋಗಲು ನಿರಾಕರಿಸಿದ್ದಾಳೆ. ಪರಿಣಾಮವಾಗಿ ಆರೋಪಿಯು ತನ್ನ ಮಾವ ಅನಂತರಾಮ್ (80) ಮತ್ತು ಅತ್ತೆ (75) ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.

ಅವರ ಕಿರುಚಾಟ ಕೇಳಿ ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರು ಎಂದು ಉಪ ಪೊಲೀಸ್ ಆಯುಕ್ತ ಆಶಿಶ್ ಶ್ರೀವಾಸ್ತವ ತಿಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅಷ್ಟರಲ್ಲಿ ಉಸಿರುಚೆಲ್ಲಿದ್ದಾರೆ. ಇದನ್ನೂ ಓದಿ: ನಿವೃತ್ತ ಡಿಜಿ ಓಂಪ್ರಕಾಶ್ ಪುತ್ರಿಯಿಂದ ದಾಂಧಲೆ – ನಂದಿನಿ ಪಾರ್ಲರ್‌ಗೆ ನುಗ್ಗಿ ವಸ್ತುಗಳು ಪೀಸ್ ಪೀಸ್

Share This Article