ವಿರಾಜಪೇಟೆ | ಹಲವರನ್ನು ಬಲಿ ಪಡೆದಿದ್ದ ನರಹಂತಕ ಕಾಡಾನೆ ಸೆರೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

1 Min Read

ಮಡಿಕೇರಿ: ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಹಲವರನ್ನು ಬಲಿ ಪಡೆದಿದ್ದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆಹಿಡಿದಿದ್ದಾರೆ.

35 ವರ್ಷ ಪ್ರಾಯದ ಕಾಡಾನೆ ಕಾಫಿ ತೋಟಗಳಲ್ಲಿ ಬೀಡು ಬಿಟ್ಟು ಉಪಟಳ ನೀಡುತ್ತಿತ್ತು. ಸಿದ್ದಾಪುರ ಸಮೀಪ ಕಾಫಿ ಬೆಳೆಗಾರರೊಬ್ಬರನ್ನು ಇತ್ತೀಚೆಗೆ ಬಲಿ ತೆಗೆದುಕೊಂಡಿತ್ತು. ಗ್ರಾಮಸ್ಥರು ಕಾಡಾನೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಇದನ್ನೂ ಓದಿ: ಸೊಂಡಿಲಿನಿಂದ ಅರ್ಚಕನನ್ನು ಎತ್ತಿ ಎಸೆದ ಉತ್ಸವದ ಆನೆ – ವೀಡಿಯೋ ವೈರಲ್

ಬೆಳಗ್ಗೆಯಿಂದಲೇ 6 ಸಾಕಾನೆಗಳೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದರು. ಸಿದ್ದಾಪುರ, ಪಾಲಿಬೆಟ್ಟ, ಅಮ್ಮತ್ತಿ ಸುತ್ತಮುತ್ತಲ ಕಾಫಿ ತೋಟಗಳಲ್ಲಿ ಹುಡುಕಾಟ ನಡೆಸಿದ್ದರು. ಚೆನ್ನೈನಕೋಟೆ ಬಾಡಗ ಬಾಣಂಗಾಲ ಸಮೀಪದ ಕಾಫಿ ತೋಟದಲ್ಲಿ ಒಂಟಿ ಸಲಗ ಪತ್ತೆಯಾಗಿತ್ತು.

ಅರವಳಿಕೆ ನೀಡಿ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಕಾಡಾನೆ ಸೆರೆಯಿಂದ ಗ್ರಾಮಸ್ಥರು ನೆಟ್ಟುಸಿರು ಬಿಟ್ಟಿದ್ದಾರೆ. ಇದನ್ನೂ ಓದಿ: ಇಬ್ಬರನ್ನು ಬಲಿ ಪಡೆದಿದ್ದ ಕಾಡಾನೆ ಸೆರೆ – ಹೈರಾಣಾದ ಸಾಕಾನೆಗಳು!

Share This Article