– ರೇಬಿಸ್‌ಗೆ ಬಲಿಯಾದವರನ್ನ ಮರಳಿ ಕರೆತರುತ್ತಾರಾ? – ಪ್ರಾಣಿ ಸಂಘಟನೆಗಳಿಗೆ ಎಚ್ಚರಿಕೆ
ನವದೆಹಲಿ: ಇನ್ನು 8 ವಾರಗಳಲ್ಲಿ ಇಡೀ ದೆಹಲಿಯನ್ನು ಬೀದಿನಾಯಿಗಳಿಂದ ಮುಕ್ತಗೊಳಿಸುವಂತೆ ದೆಹಲಿ ಸರ್ಕಾರ, ದೆಹಲಿ ಮಹಾನಗರ ಪಾಲಿಕೆ (MCD) ಹಾಗೂ ನವದೆಹಲಿ ಮಹಾನಗರ ಪಾಲಿಕೆಗಳಿಗೆ (NDMC) ಸುಪ್ರೀಂ ಕೋರ್ಟ್ (Supreme Court) ಆದೇಶಿಸಿದೆ.
ದೆಹಲಿಯ ಎಲ್ಲಾ ಪ್ರದೇಶಗಳನ್ನು ಬೀದಿನಾಯಿ (Stray Dogs) ಮುಕ್ತ ಮಾಡಬೇಕು, ಈ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವಂತಿಲ್ಲ ಎಂದು ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠ ಹೇಳಿದೆ. ಇದನ್ನೂ ಓದಿ: ಸೇನೆ ಸೇರಲು ಸ್ವದೇಶಿ ನಿರ್ಮಿತ ಉದಯಗಿರಿ, ಹಿಮಗಿರಿ ಯುದ್ಧ ನೌಕೆಗಳು ಸಿದ್ಧ; ನೌಕಾಪಡೆಗೆ ಇನ್ನಷ್ಟು ಬಲ
8 ವಾರಗಳ ಒಳಗೆ ಎಲ್ಲಾ ಬೀದಿ ನಾಯಿಗಳನ್ನು ವಸತಿ ಪ್ರದೇಶಗಳಿಂದ ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಿಸಬೇಕು. ಇದಕ್ಕಾಗಿ ಒಂದು ಕಾರ್ಯಪಡೆ ರಚಿಸುವ ಅಗತ್ಯವಿದ್ದರೇ ಕೂಡಲೇ ಆ ಕೆಲಸ ಮಾಡಿ. ಈ ಪ್ರಕ್ರಿಯೆಯನ್ನು ತಡೆಯುವ ಯಾವುದೇ ಸಂಘಟನೆಯ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದೂ ಸಹ ವಾರ್ನಿಂಗ್ ಕೊಟ್ಟಿದೆ. ಇದನ್ನೂ ಓದಿ: ನಾಗ್ಪುರ | ಅಪಘಾತದಲ್ಲಿ ಮೃತಪಟ್ಟ ಪತ್ನಿಯ ಮೃತದೇಹವನ್ನ ಬೈಕ್‌ನಲ್ಲೇ ಸಾಗಿಸಿದ ಪತಿ
ರಾಷ್ಟ್ರ ರಾಜಧಾನಿ ಪ್ರದೇಶದ ಎಲ್ಲ ಸ್ಥಳಗಳಿಂದ ಬೀದಿ ನಾಯಿಗಳನ್ನ ತೆರವು ಮಾಡಬೇಕು. ಈ ಕಾರ್ಯಕ್ಕೆ ಅಡ್ಡಿಪಡಿಸುವ ಪ್ರಾಣಿ ದಯಾ ಹೋರಾಟಗಾರರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳಲಾಗುವುದು. ದೆಹಲಿ ಸರ್ಕಾರ, ಎಂಸಿಡಿ, ಎನ್‌ಡಿಎಂಸಿಗಳು 8 ವಾರಗಳಲ್ಲಿ ಶ್ವಾನ ಆಶ್ರಯ ಕೇಂದ್ರಗಳನ್ನು ರಚಿಸಬೇಕು. ಈ ಕೇಂದ್ರಗಳನ್ನು ಸಿಸಿಟಿವಿ ಮೂಲಕ ಮೇಲ್ವಿಚಾರಣೆ ಮಾಡಬೇಕು ಎಂದು ಕೋರ್ಟ್ ಹೇಳಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ 11ನೇ ದಿನಕ್ಕೆ ಕಾಲಿಟ್ಟ ಸೇನಾ ಕಾರ್ಯಾಚರಣೆ – ಉಗ್ರರ ಗುಹೆಗಳು ಉಡೀಸ್
ಅಲ್ಲದೇ ಸೆರೆಹಿಡಿಯಲಾದ ಬೀದಿ ನಾಯಿಗಳ ದೈನಂದಿನ ದಾಖಲೆಗಳನ್ನು ನಿರ್ವಹಿಸಬೇಕು. ಒಂದೇ ಒಂದು ಬೀದಿ ನಾಯಿಯನ್ನೂ ಬಿಡಬಾರದು. ನಾಯಿ ಕಡಿತ ಪ್ರಕರಣಗಳನ್ನು ವರದಿ ಮಾಡಲು ವಾರದೊಳಗೆ ಸಹಾಯವಾಣಿಗೆ ವ್ಯವಸ್ಥೆ ಮಾಡಬೇಕು. ರೇಬಿಸ್ ಲಸಿಕೆ ದೊರೆಯುವ ಸ್ಥಳಗಳ ಕುರಿತು ವರದಿ ಪ್ರಕಟಿಸಬೇಕು ಎಂದು ನ್ಯಾಯಾಲಯ ತಾಕೀತು ಸಹ ಮಾಡಿದೆ.
ರೇಬಿಸ್‌ಗೆ ಬಲಿಯಾದವರನ್ನ ಮರಳಿ ಕರೆತರುತ್ತಾರಾ?
ಇದೇ ವೇಳೆ ಬೀದಿ ನಾಯಿಗಳ ತೆರವಿಗೆ ಪ್ರಾಣಿಪ್ರಿಯ ಹೋರಾಟಗಾರರು ಅಡ್ಡಿಪಡಿಸುತ್ತಿರುವುದನ್ನು ಗಮನಿಸಿದ ಕೋರ್ಟ್, ಇಷ್ಟೆಲ್ಲಾ ಪ್ರಾಣಿ ದಯಾ ಹೋರಾಟಗಾರರಿಗೆ ರೇಬಿಸ್ ರೋಗಕ್ಕೆ ಬಲಿಯಾದವರನ್ನು ಮರಳಿ ಕರೆತರಲು ಸಾಧ್ಯವಿದೆಯೇ? ಸಾರ್ವಜನಿಕ ಹಿತಾಸಕ್ತಿಗಾಗಿ ಈ ಆದೇಶ ನೀಡಲಾಗುತ್ತಿದೆ. ನಾಯಿಗಳನ್ನು ದೂರದ ಸ್ಥಳಗಳಿಗೆ ಸ್ಥಳಾಂತರಿಸಬೇಕು ಎಂದು ಹೇಳಿದೆ. ಇದರಲ್ಲಿ ಯಾವುದೇ ರೀತಿಯ ಭಾವನೆಗಳಿಗೆ ಆಸ್ಪದವಿಲ್ಲ ಎಂದು ಕೋರ್ಟ್ ಹೇಳಿದೆ.