ನಾನು ವರ್ಗಾವಣೆ ದಂಧೆ ನಡೆಸಿದ್ದೇನೆ ಅಂತ ಒಂದು ಪ್ರಕರಣ ತೋರಿಸಿದ್ರೆ ರಾಜಕೀಯ ನಿವೃತ್ತಿ: ಹೆಚ್‌ಡಿಕೆ

Public TV
2 Min Read

ಬೆಂಗಳೂರು: ನಾನು ವರ್ಗಾವಣೆ ದಂಧೆ ನಡೆಸಿದ್ದೇನೆ ಅಂತ ಒಂದು ಪ್ರಕರಣ ತೋರಿಸಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ (H.D.Kumaraswamy) ಸವಾಲು ಹಾಕಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಸರ್ಕಾರ ದಿನದ 24 ಗಂಟೆಯೂ ವರ್ಗಾವಣೆ ದಂಧೆಯನ್ನೇ ನಡೆಸುತ್ತಿದೆ. ಅಭಿವೃದ್ಧಿ ಬದಲು ನಗದು ಅಭಿವೃದ್ಧಿಯಲ್ಲಿ ತೊಡಗಿದೆ. ಇದನ್ನು ಹೇಳಿದರೆ ನಮ್ಮ ಮೇಲೆಯೇ ಕೆಸರು ಎರಚುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಯತೀಂದ್ರ ನಮ್ಮ ಮನೆಯಲ್ಲಿದ್ದಾರೆ ಅಂತ ಆರೋಪ ಮಾಡೋದು ಸರಿಯಲ್ಲ – HDK ವಿರುದ್ಧ ಸಿಎಂ ವಾಗ್ದಾಳಿ

ಈ ಸರ್ಕಾರ ನಡೆಸುತ್ತಿರುವ ವರ್ಗಾವಣೆ ದಂಧೆಗಳಿಗೆ ಸಂಬಂಧಿಸಿ ನನ್ನಲ್ಲಿ ದಾಖಲೆಗಳಿವೆ. ಅದರಲ್ಲಿ ಯಾರಿಗೂ ಅನುಮಾನ ಬೇಡ. ಅದನ್ನು ಬಿಡುಗಡೆ ಮಾಡಬೇಕಾದ ಸಂದರ್ಭದಲ್ಲಿ ಮಾಡುತ್ತೇನೆ. ಯಾವಾಗ, ಎಲ್ಲಿ ಬಿಡುಗಡೆ ಮಾಡುತ್ತೇನೆ ಎಂಬುದು ನನಗೆ ಗೊತ್ತಿದೆ. ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿ ಹಲವಾರು ವರ್ಷಗಳು ಕೆಲಸ ಮಾಡಿದ್ದಾರೆ. ಅವರು ಎಂದಾದರೂ ದಾಖಲೆ ಬಿಡುಗಡೆ ಮಾಡಿದ್ದರಾ ಎಂದು ಖಾರವಾಗಿ ಪ್ರಶ್ನೆ ಮಾಡಿದರು.

ಅವರು ದಾಖಲೆ ಇಟ್ಟು ಮಾತನಾಡಿದ್ದನ್ನು ನಾನು ನೋಡಲೇ ಇಲ್ಲ. ಇದ್ದರೆ ತೋರಿಸಲಿ. ಬಹುಮತದ ಸರ್ಕಾರ ತಂದುಕೊಂಡು ಈ ದಂಧೆಯಲ್ಲಿ ತೊಡಗಿದ್ದಾರೆ ಎಂದು ಟೀಕಾಪ್ರಹಾರ ನಡೆಸಿದರು. ಇದನ್ನೂ ಓದಿ: ನನ್ನ ಕನ್ನಡ ಹೆಚ್ಚು ಕಡಿಮೆ ಇರ್ಬೋದು, ಆದ್ರೆ ಪ್ರೀತಿಯ ಭಾಷೆ: ಖಾದರ್

ಮೈಸೂರಿನಲ್ಲಿ ವರ್ಗಾವಣೆ ಬಗ್ಗೆ ಚರ್ಚೆ ಆಗುತ್ತಿದೆ. ಮನೆಯಲ್ಲಿ ಸಿಎಂ ಪುತ್ರ ಮಲಗಿರುವ ಸಂದರ್ಭದಲ್ಲಿ ಇಷ್ಟಾಗಿದೆ. ಇನ್ನೂ ಹೊರಗೆ ಬಂದರೆ ಏನಾಗಬಹುದು ಎಂದು ಜನ ಕೇಳುತ್ತಿದ್ದಾರೆ. ನಾನು ದ್ವೇಷದ ರಾಜಕೀಯ ಮಾಡ್ತಿಲ್ಲ. ವಿರೋಧ ಪಕ್ಷದ ಸದಸ್ಯನಾಗಿ ನನ್ನ ಕೆಲಸ ಮಾಡುತ್ತಿದ್ದೇನೆ. ಸತ್ಯ ಹೇಳುವುದೇ ತಪ್ಪಾ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.

ನಾನು ಓಡಿ ಹೋಗಲ್ಲ, ದಾಖಲೆ ಬಿಟ್ಟೇ ಬಿಡುತ್ತೇನೆ
ಪೆನ್‌ಡ್ರೈವ್ ಬಿಡುಗಡೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಹೆಚ್‌ಡಿಕೆ, ನಾನು ಹೆದರಿ ಓಡಿ ಹೋಗುವ ವ್ಯಕ್ತಿ ಅಲ್ಲ. ಹಿಟ್ ಆ್ಯಂಡ್ ರನ್ ಮಾಡಲ್ಲ. ಕಾಂಗ್ರೆಸ್ ನಾಯಕರು ಏನು ಮಾತಾಡ್ತಾರೆಂದು ನೋಡೋಣ. ನನ್ನ ಬಳಿ ಇರುವ ಪೆನ್‌ಡ್ರೈವ್ ಅಸಲಿ, ಹೈದ್ರಾಬಾದ್‌ನಲ್ಲಿ ಮಾಡಿಸಿದ್ದಲ್ಲ. ಪ್ರಕರಣದಲ್ಲಿ ಭಾಗಿಯಾದವರ ಮೇಲೆ ಕ್ರಮ ಏನು ಅಂತ ಅವರು ಹೇಳಲಿ. ಆಮೇಲೆ ದಾಖಲೆ ಹೊರ ಬಿಡುತ್ತೇನೆ ಎಂದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್