ಈ ಬಾರಿ SSLC, PUC ಪರೀಕ್ಷೆ ವೇಳೆ ಹಿಜಬ್‍ಗೆ ಇರುತ್ತಾ ಅವಕಾಶ?

Public TV
1 Min Read

ಬೆಂಗಳೂರು: ಎಸ್‍ಎಸ್‍ಎಲ್‍ಸಿ (SSLC) ಹಾಗೂ ದ್ವಿತೀಯ ಪಿಯುಸಿ (PUC) ಎಕ್ಸಾಂಗೆ ಇನ್ನೊಂದು ತಿಂಗಳು ಬಾಕಿ ಇದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ. ಈ ವರ್ಷ ಪಬ್ಲಿಕ್ ಪರೀಕ್ಷೆ ವೇಳೆ ಹಿಜಬ್‍ಗೆ ಅವಕಾಶ ಇರುತ್ತಾ..? ಇಲ್ವಾ ಅನ್ನೋ ಪ್ರಶ್ನೆ ಮೂಡಿದೆ.

ಕಳೆದ ಡಿಸೆಂಬರ್ 22 ರಂದು ಮೈಸೂರಿನಲ್ಲಿ ಹಿಜಬ್ ನಿಷೇಧ ವಾಪಸ್ ತೆಗೆಯೋದಾಗಿ ಸಿಎಂ ಘೋಷಣೆ ಮಾಡಿದ್ದರು. ವಿವಾದದ ಕಿಡಿ ಹೊತ್ತಿಕೊಳ್ಳುತ್ತಿದ್ದಂತೆಯೇ ತಮ್ಮ ಹೇಳಿಕೆ ಬಗ್ಗೆ ಸಿದ್ದರಾಮಯ್ಯ (Siddaramaiah) ಯೂಟರ್ನ್ ಹೊಡೆದಿದ್ದರು. ಸದ್ಯ ಸಿಎಂ ಈ ಹೇಳಿಕೆಯಿಂದ ಶಿಕ್ಷಣ ಇಲಾಖೆ ಗೊಂದಲದಲ್ಲಿದೆ. ಪರೀಕ್ಷೆ ಹತ್ತಿರ ಬರುತ್ತಿರುವುದರಿಂದ ಹಿಜಬ್ ಕುರಿತು ಚರ್ಚೆ ನಡೆಯುತ್ತಿದೆ. ಇದನ್ನೂ ಓದಿ: SSLC, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬಿಜೆಪಿ ಸರ್ಕಾರದಲ್ಲಿ ಶಾಲಾ-ಕಾಲೇಜುಗಳಲ್ಲಿ ಹಿಜಬ್ (Hijab) ನಿಷೇಧ ಮಾಡಲಾಗಿತ್ತು. ತರಗತಿಗಳ ಜೊತೆಗೆ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ಎಕ್ಸಾಂಗೆ ಹಿಜಬ್ ನಿಷೇಧ ಮಾಡಲಾಗಿತ್ತು. ಹೈಕೋರ್ಟ್‍ನಲ್ಲಿ ಸರ್ಕಾರದ ಆದೇಶಕ್ಕೆ ಜಯ ಕೂಡ ಸಿಕ್ಕಿತ್ತು. ಇದಾದ ಬಳಿಕ ಹೈಕೋರ್ಟ್ (Highcourt) ಆದೇಶದ ವಿರುದ್ಧ ಸುಪ್ರೀಂಕೋರ್ಟ್‍ನಲ್ಲಿ (Supreme Court) ಮೇಲ್ಮನವಿ ಸಲ್ಲಿಕೆ ಮಾಡಲಾಗಿತ್ತು. ಸದ್ಯ ಸುಪ್ರೀಂಕೋರ್ಟ್ ಅಂಗಳದಲ್ಲಿ ಹಿಜಬ್ ನಿಷೇಧ ಆದೇಶ ಇದೆ. ಇದನ್ನೂ ಓದಿ: ರಾಜ್ಯದಲ್ಲಿ ಹಿಜಬ್‌ ನಿಷೇಧ ವಾಪಸ್‌: ಸಿಎಂ ಸಿದ್ದರಾಮಯ್ಯ ಘೋಷಣೆ

Share This Article