ಪಾಕ್‌ನಲ್ಲಿರುವ ಉಗ್ರರ ನೆಲೆಗಳಿಗೆ ಹೊಡೀತೀವಿ: ಅಮೆರಿಕಗೆ ಮೊದಲೇ ಹೇಳಿದ್ದ ಜೈಶಂಕರ್‌

Public TV
1 Min Read

ನವದೆಹಲಿ: ಪಾಕಿಸ್ತಾನದಲ್ಲಿರುವ ಭಯೋತ್ಪಾದಕರ ಮೇಲೆ ಭಾರತ ದಾಳಿ ಮಾಡಲಿದೆ ಎಂದು ಆಪರೇಷನ್‌ ಸಿಂಧೂರ ಕಾರ್ಯಾಚರಣೆಗೂ ಮುನ್ನವೇ ಅಮೆರಿಕಗೆ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್‌ ಸ್ಪಷ್ಟಪಡಿಸಿದ್ದರು.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಮೇ 1 ರಂದು ದೂರವಾಣಿ ಕರೆಯಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರಿಗೆ ಪಾಕಿಸ್ತಾನದಲ್ಲಿರುವ ಭಯೋತ್ಪಾದಕರ ಮೇಲೆ ಭಾರತ ದಾಳಿ ಮಾಡಲಿದೆ ಎಂದು ಹೇಳಿದ್ದರು.

ನಾವು ಪಾಕಿಸ್ತಾನದಲ್ಲಿರುವ ಭಯೋತ್ಪಾದಕರ ಮೇಲೆ ದಾಳಿ ಮಾಡುತ್ತೇವೆ. ಅದರ ಬಗ್ಗೆ ಯಾವುದೇ ಸಂದೇಹ ಬೇಡ” ಎಂದು ಜೈಶಂಕರ್, ರುಬಿಯೊಗೆ ತಿಳಿಸಿದ್ದರೆಂದು ಮೂಲಗಳು ಹೇಳಿವೆ.

ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಮೇ 7 ರಂದು ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿತ್ತು. ದಾಳಿಯಲ್ಲಿ 100 ಉಗ್ರರು ಹತರಾಗಿದ್ದಾರೆ.

Share This Article