ಇನ್ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಗೀತಾ ಶಿವರಾಜ್‌ಕುಮಾರ್ ಘೋಷಣೆ

Public TV
1 Min Read

ಶಿವಮೊಗ್ಗ: ಇನ್ನುಮುಂದೆ ನಾನು ಚುನಾವಣೆಗೆ (Election) ಸ್ಪರ್ಧಿಸುವುದಿಲ್ಲ ಎಂದು ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ (Geetha Shivarajkumar) ಮಹತ್ವದ ಘೋಷಣೆ ಹೊರಡಿಸಿದ್ದಾರೆ.

ಮಹಿಳಾ ಕಾಂಗ್ರೆಸ್ (Congress) ಸಮಾರಂಭದಲ್ಲಿ ಮಾತನಾಡಿದ ಅವರು, ಚುನಾವಣೆಗೆ ಈ ಹಿಂದೆ ಸ್ಪರ್ಧಿಸಿದ್ದರೂ ಕೂಡ ಪಕ್ಷ ಸಂಘಟನೆಯಲ್ಲಿ ಜೊತೆಗೆ ಇರುತ್ತೇನೆ. ನಿಮ್ಮೊಂದಿಗೆ ಕೆಲಸ ಮಾಡುತ್ತೇನೆ, ಯಾವಾಗ ಕರೆದರೂ ನಾನು ಬರುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಆಯುಧ ಪೂಜೆ ಹಬ್ಬಕ್ಕೂ ಸಾರಿಗೆ ಇಲಾಖೆಯಲ್ಲಿ ದುಡ್ಡಿಲ್ವಾ?- ಒಂದು ಬಸ್‌ಗೆ ಕೇವಲ 150 ರೂ. ಬಿಡುಗಡೆ

ನೂತನ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶ್ವೇತಾ ಬಂಡಿಯವರನ್ನು ಅಭಿನಂದಿಸಿದ ಅವರು, ಶ್ವೇತಾ ಬಂಡಿಯವರು ತಮ್ಮ ಚುನಾವಣೆಯ ಪ್ರಚಾರದಲ್ಲಿ ಶ್ರಮಿಸಿದ್ದಾರೆ. ಇಂದಿನ ಸಮಾವೇಶ ಖುಷಿ ತಂದಿದೆ. ಮಹಿಳೆಯರು ಅಬಲೆಯರಲ್ಲ. ಅವರಿಗೆ ಎಲ್ಲಾ ಶಕ್ತಿಯಿದೆ ಅವರು ಎಲ್ಲರನ್ನ ಜೊತೆಗೂಡಿಸಿಕೊಂಡು ಅವರು ಪಕ್ಷ ಸಂಘಟಿಸಲಿ ಎಂದು ಸಲಹೆ ನೀಡಿದರು. ನಾನು ಇನ್ಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಆದರೆ ಪಕ್ಷದ ಎಲ್ಲರ ಜೊತೆಗೂ ದೃಢವಾಗಿ ಇರುತ್ತೇನೆ ಎಂದು ಪುನರುಚ್ಚರಿಸಿದರು. ಇದನ್ನೂ ಓದಿ: ಮೂರು ಅಂತಸ್ತಿಗೆ ಅನುಮತಿ.. ಕಟ್ಟಿದ್ದು ಐದು ಅಂತಸ್ತು – ವಾಲಿದ ಬಿಲ್ಡಿಂಗ್‌ ತೆರವು ಕಾರ್ಯಾಚರಣೆ

ಗೀತಾ ಶಿವರಾಜ್‌ಕುಮಾರ್ ಚುನಾವಣೆಯಿಂದ ದೂರ ಸರಿದಿದ್ದಾರೆ. 2024ರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಗೀತಾ ಶಿವರಾಜ್ ಕುಮಾರ್, ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಇದೀಗ ಶಿವಮೊಗ್ಗದಲ್ಲೇ ತಮ್ಮ ಚುನಾವಣಾ ನಿವೃತ್ತಿ ಬಗ್ಗೆ ಘೋಷಿಸಿದ್ದಾರೆ. ಇನ್ಮುಂದೆ ನಾನು ಯಾವುದೇ ಚುನಾವಣೆಗೆ ನಿಲ್ಲೋದಿಲ್ಲ ಅಂತ ಗೀತಾ ಶಿವರಾಜ್‌ಕುಮಾರ್ ಘೋಷಿಸಿದ್ದಾರೆ. ಇದನ್ನೂ ಓದಿ: ನಿಮ್ಮ ಮಾಹಿತಿ ಸುರಕ್ಷಿತವಾಗಿರಲ್ಲ: ಜಾತಿಗಣತಿ ಬಹಿಷ್ಕಾರಕ್ಕೆ ತೇಜಸ್ವಿ ಸೂರ್ಯ ಕರೆ

Share This Article