ಹಿಜಬ್ ಕುರಿತು ಶೀಘ್ರದಲ್ಲಿ ವಿಚಾರಣೆ – ಸಿಜೆಐ

Public TV
1 Min Read

ನವದೆಹಲಿ: ಶಾಲಾ-ಕಾಲೇಜುಗಳ ತರಗತಿಗಳಲ್ಲಿ ಹಿಜಬ್ (Hijab) ನಿಷೇಧಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ತ್ರಿ ಸದಸ್ಯ ಪೀಠ ರಚಿಸಿ ಶೀಘ್ರದಲ್ಲೇ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ (DY Chandrachud) ಭರವಸೆ ನೀಡಿದ್ದಾರೆ.

Court

ಪ್ರಕರಣ ವಿಚಾರಣೆ ನಡೆಸುವಂತೆ ಶುಕ್ರವಾರ ಷರಿಯತ್ ಸಮಿತಿ ಪರವಾಗಿ ವಕೀಲರು ಮನವಿ ಮಾಡಿದರು. ಪರೀಕ್ಷೆಗೆ ಐದು ದಿನಗಳಷ್ಟೆ ಬಾಕಿಯಿದೆ. ವಿದ್ಯಾರ್ಥಿನಿಯರು (Muslim Students) ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಬೇಕು. ಅದಕ್ಕಾಗಿ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು ಶೀಘ್ರದಲ್ಲೇ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಕೇಂದ್ರ ಸರ್ಕಾರದ ಅಧಿಕಾರ ಕಿತ್ತುಕೊಂಡ ಸುಪ್ರೀಂ- ಚುನಾವಣಾ ಆಯುಕ್ತರ ನೇಮಕಕ್ಕೆ ಸಮಿತಿ ರಚನೆ

ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಡಿ.ವೈ ಚಂದ್ರಚೂಡ್, ನೀವೂ ಕೊನೆ ಕ್ಷಣದಲ್ಲಿ ಬಂದು ಮನವಿ ಮಾಡಿದರೆ ಹೇಗೆ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರ ನೀಡಿದ ವಕೀಲರು ಕಳೆದ 10 ದಿನಗಳಲ್ಲಿ ಎರಡು ಬಾರಿ ಈ ಬಗ್ಗೆ ಪ್ರಸ್ತಾಪಿಸಿದೆ. ಅದಾಗ್ಯೂ ನ್ಯಾಯಾಲಯ ಪೀಠವನ್ನು ರಚನೆ ಮಾಡಿಲ್ಲ ಎಂದರು. ಬಳಿಕ ಸಿಜೆಐ ಶೀಘ್ರದಲ್ಲಿ ತ್ರಿ ಸದಸ್ಯ ಪೀಠ ರಚಿಸಿ ವಿಚಾರಣೆ ನಡೆಸುವುದಾಗಿ ಹೇಳಿದರು. ಇದನ್ನೂ ಓದಿ: ಭಾರತ ಮಾತ್ರವಲ್ಲದೇ ವಿದೇಶದಲ್ಲೂ ಅಂಬಾನಿ, ಕುಟುಂಬಕ್ಕೆ z+ ಭದ್ರತೆ ನೀಡಿ: ಸುಪ್ರೀಂ

SUPREME COURT

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸುಪ್ರೀಂ ಕೋರ್ಟ್‌ನ (Supreme Court) ವಿಭಾಗೀಯ ಪೀಠವು, ಹಿಜಬ್ ಧರಿಸುವುದನ್ನ ನಿಷೇಧಿಸಲು ರಾಜ್ಯದ ಸರ್ಕಾರಿ ಕಾಲೇಜುಗಳಿಗೆ ಪರಿಣಾಮಕಾರಿಯಾಗಿ ಅಧಿಕಾರ ನೀಡಿ ಸರ್ಕಾರ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ವಿಭಜಿತ ತೀರ್ಪು ನೀಡಿತ್ತು. ಇದಕ್ಕೂ ಮುನ್ನ ರಾಜ್ಯ ಹೈಕೋರ್ಟ್ (Karnataka Highcourt), ಸರ್ಕಾರದ ನಿರ್ಧಾರ ಪರ ತೀರ್ಪು ನೀಡಿತ್ತು.

Share This Article
Leave a Comment

Leave a Reply

Your email address will not be published. Required fields are marked *