ಹಾಸನ | ಅಪ್ರಾಪ್ತನಿಂದ ಮಹಿಳೆಯ ಬರ್ಬರ ಹತ್ಯೆ

Public TV
1 Min Read

ಹಾಸನ: ಅಪ್ರಾಪ್ತನೊಬ್ಬ ಮಹಿಳೆಯ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆಗೈದ ಪ್ರಕರಣ ಅರಸೀಕೆರೆಯ (Arsikere) ಬಂದೂರು ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ಮಹಿಳೆಯನ್ನು ಮೀನಾಕ್ಷಮ್ಮ (43) ಎಂದು ಗುರುತಿಸಲಾಗಿದೆ. ಹತ್ಯೆಗೈದ ಬಾಲಕ ಚಿಕ್ಕಂದಿನಲ್ಲಿದ್ದಾಗಲೇ ತಂದೆ-ತಾಯಿಯನ್ನು ಕಳೆದುಕೊಂಡು, ಮೀನಾಕ್ಷಮ್ಮರ ಮನೆಯಲ್ಲಿ ಮನೆಗೆಲಸ ಮಾಡಿಕೊಂಡಿದ್ದ. ಇತ್ತೀಚೆಗೆ ಅವರೊಂದಿಗೆ ಜಗಳ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಇದನ್ನೂ ಓದಿ: ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ಗೋಲ್ಡಿ ಬ್ರಾರ್ ಗ್ಯಾಂಗ್‌ನ ಇಬ್ಬರು ಎನ್‌ಕೌಂಟರ್‌ನಲ್ಲಿ ಹತ್ಯೆ

ಬಂದೂರು ಗ್ರಾಮದಲ್ಲಿ ಹೊಸ ಮನೆ ನಿರ್ಮಿಸುತ್ತಿದ್ದ ಮಹಿಳೆಯ ಜೊತೆ ಸೆ.15ರಂದು ಬಾಲಕ ಪುನಃ ಜಗಳವಾಡಿದ್ದ. ಜಗಳ ವಿಕೋಪಕ್ಕೆ ತಿರುಗಿ ಮೀನಾಕ್ಷಮ್ಮ ತಲೆಗೆ ಕಲ್ಲಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದ. ಸೆ.16 ರಂದು ತಮ್ಮ ತಾಯಿಯದ್ದು ಅನುಮಾನಸ್ಪದ ಸಾವು ಎಂದು ಅವರ ಪುತ್ರ ದಿನೇಶ್ ಪೊಲೀಸರಿಗೆ ದೂರು ನೀಡಿದ್ದರು.

ಅಪ್ರಾಪ್ತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಜಾವಗಲ್ (Javagal) ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ | ಗಡ್ಚಿರೋಲಿ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲರು ಬಲಿ

Share This Article