ಮನೆಯ ಬಾಗಿಲಲ್ಲೇ ಕುಳಿತ ಮೈಕ್ರೋಫೈನಾನ್ಸ್ ಸಿಬ್ಬಂದಿ – ಬೇಸತ್ತು ಮಹಿಳೆ ಆತ್ಮಹತ್ಯೆ

By
1 Min Read

ಹಾಸನ: ಮನೆಯ ಬಾಗಿಲಿಗೆ ಬಂದ ಮೈಕ್ರೋಫೈನಾನ್ಸ್ ಸಿಬ್ಬಂದಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ ನೇಣಿಗೆ ಶರಣಾಗಿರುವ ಘಟನೆ ಹಾಸನದ (Hassan) ಆಲೂರು (Alur) ತಾಲೂಕಿನ, ಹಳ್ಳಿಯೂರು ಗ್ರಾಮದಲ್ಲಿ ನಡೆದಿದೆ.

ಕೆಂಚಮ್ಮ(50) ನೇಣಿಗೆ ಶರಣಾದ ಮಹಿಳೆ. ಬಿಎಸ್‌ಎಸ್, ಇಐಎಫ್ ಹೆಸರಿನ ಫೈನಾನ್ಸ್ ಕಂಪನಿಯಿಂದ ಕೆಂಚಮ್ಮ 2 ಲಕ್ಷ ರೂ. ಸಾಲ ಪಡೆದಿದ್ದರು. ಪ್ರತಿ ತಿಂಗಳು ಸರಿಯಾಗಿ ಕಂತಿನ ಹಣ ಕಟ್ಟುತ್ತಿದ್ದರು. ಈ ತಿಂಗಳು ಹಣ ಇಲ್ಲದ ಕಾರಣ ಕಟ್ಟಿರಲಿಲ್ಲ. ಇದನ್ನೂ ಓದಿ: ಕಲರ್‌ಫುಲ್ ಹೋಳಿ ಸಾಂಗ್‌ನಲ್ಲಿ ಸಲ್ಮಾನ್ ಖಾನ್ ಜೊತೆ ರಶ್ಮಿಕಾ ಡ್ಯಾನ್ಸ್

ಇಂದೇ ಹಣ ಕಟ್ಟಬೇಕೆಂದು ಬಿಎಸ್‌ಎಸ್ ಮೈಕ್ರೋಫೈನಾನ್ಸ್ ಸಿಬ್ಬಂದಿ ಮನೆಯ ಬಳಿಯೇ ಬಂದು ಕುಳಿತಿದ್ದರು. ಇದರಿಂದ ಮನನೊಂದು ಮನೆಯಲ್ಲಿಯೇ ಕೆಂಚಮ್ಮ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಂಚಮ್ಮ ಸಾವಿನ ಸುದ್ದಿ ತಿಳಿದು ಮೈಕ್ರೋಫೈನಾನ್ಸ್ ಸಿಬ್ಬಂದಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಇದನ್ನೂ ಓದಿ: ತಂದೆ-ತಾಯಿ ಹಾಗೂ ಹಿರಿಯರ ಆರೈಕೆ ಮಾಡದಿದ್ರೆ ಅವ್ರ ಆಸ್ತಿಯಲ್ಲಿ ಪಾಲಿಲ್ಲ: ಕೃಷ್ಣ ಬೈರೇಗೌಡ

ಸ್ಥಳಕ್ಕೆ ಆಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.

Share This Article