ಶಿವಮೊಗ್ಗ | ಪತಿಯೊಂದಿಗೆ ಜಗಳವಾಡಿ ರೈಲಿಗೆ ತಲೆಕೊಟ್ಟ ಮಹಿಳೆ

Public TV
0 Min Read

ಶಿವಮೊಗ್ಗ: ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆಯೊಬ್ಬರು (Woman) ರೈಲಿಗೆ (Train) ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ನಗರದಲ್ಲಿ (Shivamogga) ನಡೆದಿದೆ.

ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಕಮಲಾ (35) ಎಂದು ಗುರುತಿಸಲಾಗಿದೆ. ಮೃತ ಮಹಿಳೆ, ಸೋಮವಾರ ರಾತ್ರಿ ಪತಿಯೊಂದಿಗೆ ಜಗಳವಾಡಿ ಮನೆಯಿಂದ ತೆರಳಿದ್ದರು. ಬಳಿಕ ತಾಳಗುಪ್ಪ – ಬೆಂಗಳೂರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತ ಕಮಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ವಿನೋಬನಗರ ಹಾಗೂ ರೈಲ್ವೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Share This Article