ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ ಬಸ್ ಹರಿದು ಮಹಿಳೆ ಸಾವು

1 Min Read

ರಾಯಚೂರು: ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ (KKRTC) ಬಸ್ ಹರಿದು ಮಹಿಳೆ ಸಾವನ್ನಪ್ಪಿರುವ ಘಟನೆ ರಾಯಚೂರಿನ (Raichur) ಸಿಂಧನೂರು (Sindhanur) ಬಸ್ ನಿಲ್ದಾಣದ ಮುಖ್ಯದ್ವಾರದಲ್ಲಿ ನಡೆದಿದೆ.

- Advertisement -

ಕೊಪ್ಪಳದ ಬೆವಿನಹಾಳ ಗ್ರಾಮದ ದೊಡ್ಡ ಈರಮ್ಮ (38) ಮೃತ ದುರ್ದೈವಿ. ಬಸ್ ಚಾಲಕನ ಅಜಾಗರೂಕತೆಯಿಂದ ಮಹಿಳೆ ಸಾವನ್ನಪ್ಪಿದ್ದು, ಅಪಘಾತದ ದೃಶ್ಯ ಪ್ರಯಾಣಿಕರನ್ನ ಬೆಚ್ಚಿಬೀಳಿಸಿದೆ. ಇದನ್ನೂ ಓದಿ: ಅಫ್ಘಾನ್‌ ಇತಿಹಾಸದಲ್ಲೇ ಅತ್ಯಂತ ಭೀಕರ: ಕಾಬೂಲ್‌ ಆಸ್ಪತ್ರೆ ಮೇಲೆ ಪಾಕಿಸ್ತಾನ ದಾಳಿ – 400 ಜನರು ಸಾವು

- Advertisement -

ಸಿಂಧನೂರು ಬಸ್ ನಿಲ್ದಾಣದಲ್ಲಿ ಸೋಮವಾರ ಅಪಘಾತ ನಡೆದಿದೆ. ಘಟನೆ ಸಂಬಂಧ ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 18ನೇ ದಿನಕ್ಕೆ ಕಾಲಿಟ್ಟ ಯುದ್ಧ – ಇರಾನ್‌ನ 200ಕ್ಕೂ ಹೆಚ್ಚು ಸೇನಾ ನೆಲೆಗಳು ಉಡೀಸ್

- Advertisement -

- Advertisement -

Share This Article