ಮೈರೋಲ್ ಹಣ್ಣೆಂದು ವಿಷಕಾರಿ ಹಣ್ಣಿನ ಜ್ಯೂಸ್ ಕುಡಿದು ಮಹಿಳೆ ದುರ್ಮರಣ

By
1 Min Read

ಮಂಗಳೂರು: ಮೈರೋಲ್ ಹಣ್ಣು ಎಂದು ಭಾವಿಸಿ ವಿಷಕಾರಿ ಹಣ್ಣಿನ ಜ್ಯೂಸ್ (Fruit Juice) ಮಾಡಿ ಕುಡಿದ ಮಹಿಳೆ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಶೇಣಿ ಎಂಬಲ್ಲಿ ನಡೆದಿದೆ.

ಶೇಣಿ ಸಮೀಪದ ಕುಳ್ಳಾಜೆ ನಿವಾಸಿ ಲೀಲಾವತಿ (35) ಮೃತ ಮಹಿಳೆ. ಒಂದು ವಾರದ ಹಿಂದೆ ಲೀಲಾವತಿಯ ತಂದೆ ಮೈರೋಲ್ ಹಣ್ಣಿನ ಜ್ಯೂಸ್ ಮಾಡಿ ಕುಡಿದಿದ್ದರು.

ಲೀಲಾವತಿ ಅವರು ಕೂಡ ಮೈರೋಲ್ ಹಣ್ಣಿನ ಜ್ಯೂಸ್ ಸೇವನೆ ಮಾಡಿದ್ದರು. ಪರಿಣಾಮ ಲೀಲಾವತಿ ಅವರಿಗೆ ವಾಂತಿ, ಭೇದಿಯಾಗಿ ಸುಳ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ದಾಖಲಿಸುವ ಸಂದರ್ಭ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಹೆತ್ತಪ್ಪನಿಂದಲೇ ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ನಿರಂತರ ಅತ್ಯಾಚಾರ

ಲೀಲಾವತಿಯವರ ತಂದೆ ಅಪಾಯದಿಂದ ಪಾರಾಗಿದ್ದಾರೆ. ಮೈರೋಲ್ ಹಣ್ಣು ಹೆಚ್ಚಾಗಿ ಕಾಡಿನಲ್ಲಿ ಸಿಗುತ್ತದೆ. ಲೀಲಾವತಿ ಅವರು ಮೈರೋಲ್ ಹಣ್ಣಿನ ಬದಲು ಬೇರೆ ವಿಷಕಾರಿ ಅಂಶವಿರುವ ಹಣ್ಣಿನ ಜ್ಯೂಸ್ ಕುಡಿದಿದ್ದರಿಂದ ಈ ಅನಾಹುತ ಸಂಭವಿಸಿದೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್