Bengaluru | ಸರಣಿ ಅಪಘಾತದಲ್ಲಿ ಮಹಿಳೆ ಸಾವು

Public TV
1 Min Read

ಬೆಂಗಳೂರು: ಸರಣಿ ಅಪಘಾತದಲ್ಲಿ ಮಹಿಳೆ (Woman) ಸಾವನ್ನಪ್ಪಿರುವ ಘಟನೆ ಬೆಂಗಳೂರಿನ (Bengaluru) ಮೆಯೋಹಾಲ್ ಜಂಕ್ಷನ್‌ನಲ್ಲಿ ನಡೆದಿದೆ.

ಅಂಜಲಿ (36) ಮೃತ ಮಹಿಳೆ. ಜಂಕ್ಷನ್‌ನಲ್ಲಿ ನಿಂತಿದ್ದ ಕಾರಿಗೆ ಗೂಡ್ಸ್ ವಾಹನ ಬಂದು ಡಿಕ್ಕಿ ಹೊಡೆದ ಪರಿಣಾಮ ಕಾರು ಮುಂದೆ ಇದ್ದೆ ಬೈಕಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್‌ನಲ್ಲಿದ್ದ ವಿಜಯ್ ಕುಮಾರ್ ಹಾಗೂ ಅಂಜಲಿ ರಸ್ತೆಗೆ ಬಿದ್ದಿದ್ದು, ತಲೆಗೆ ಗಂಭೀರ ಗಾಯವಾಗಿ ಅಂಜಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಕಬ್ಬಿನ ಬಿಲ್ ಪಾವತಿಗೆ ಆಗ್ರಹಿಸಿ ಜಮಖಂಡಿ ಶುಗರ್ಸ್ ಫ್ಯಾಕ್ಟರಿ ಮುಂದೆ ರೈತರ ಅಹೋರಾತ್ರಿ ಧರಣಿ

ಘಟನೆಯಲ್ಲಿ ಗಾಯಗೊಂಡಿರುವ ವಿಜಯ್ ಕುಮಾರ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತಕ್ಕೆ ಕಾರಣನಾಗಿರುವ ಗೂಡ್ಸ್ ವಾಹನದ ಚಾಲಕ ಘಟನೆ ಬಳಿಕ ತಲೆಮರಿಸಿಕೊಂಡಿದ್ದಾನೆ. ಘಟನೆ ಸಂಬಂಧ ಅಶೋಕ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಲೆಮರಿಸಿಕೊಂಡಿರುವ ಗೂಡ್ಸ್ ವಾಹನದ ಚಾಲಕನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಇದನ್ನೂ ಓದಿ: ಕೈ ನಾಯಕ ಮಂಜುನಾಥ ಗೌಡಗೆ ಇಡಿ ಶಾಕ್‌ – 13.91 ಕೋಟಿ ಆಸ್ತಿ ಮುಟ್ಟುಗೋಲು

Share This Article