ಪ್ರೀತಿಸಿ ರಿಜಿಸ್ಟರ್‌ ಮ್ಯಾರೇಜ್‌ ಆಗಿದ್ದವಳು ಅನುಮಾನಾಸ್ಪದ ಸಾವು – ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ

Public TV
1 Min Read

ನೆಲಮಂಗಲ: ಮಹಿಳೆಯೊಬ್ಬಳು ಅನುಮಾನಾಸ್ಪವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ (Anchepalya) ಗ್ರಾಮದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಸ್ಪಂದನಾ (24) ಎಂದು ಗುರುತಿಸಲಾಗಿದೆ. ಗುರುವಾರ ಭೀಮನ ಅಮಾವಾಸ್ಯೆ ಹಿನ್ನೆಲೆ ಪತಿ ಅಭಿಷೇಕ್, ಹೆಂಡತಿ ಕೈಯಲ್ಲಿ ಪೂಜೆ ಮಾಡಿಸಿಕೊಂಡಿದ್ದ ಎನ್ನಲಾಗಿದೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಕೇಸ್; ಬೆಳ್ತಂಗಡಿಯಲ್ಲಿ ಕಚೇರಿ ತೆರೆಯಲಿರುವ ಎಸ್‌ಐಟಿ

ಸ್ಪಂದನಾ ಕಾಲೇಜಿಗೆ ಹೋಗುತ್ತಿದ್ದ ಸಮಯದಲ್ಲಿ ಅಭಿಷೇಕ್ ಎಂಬಾತನನ್ನು ಪ್ರೀತಿಸಿ ರಿಜಿಸ್ಟರ್‌ ಮ್ಯಾರೇಜ್ ಆಗಿದ್ದಳು. ಸ್ಪಂದನಾ ಪೋಷಕರ ವಿರೋಧದ ನಡುವೆಯೇ ಇಬ್ಬರು ಮದುವೆಯಾಗಿದ್ದರು. ಮದುವೆಯಾದ ಬಳಿಕ ಪತಿ ಕುಟುಂಬಸ್ಥರು ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದ ಬಗ್ಗೆ ಸ್ಪಂದನಾ ತಂದೆ ಬಳಿ ಹೇಳಿಕೊಂಡಿದ್ದಳು. ಬಳಿಕ 5 ಲಕ್ಷ ರೂ. ಹಣವನ್ನ ಕೊಟ್ಟು ರಾಜಿ ಸಂಧಾನ ಮಾಡಿಸಿದ್ದರು. ಇದನ್ನೂ ಓದಿ: ಶಾಲಾ ಕಟ್ಟಡ ಕುಸಿದು 4 ಮಕ್ಕಳ ದಾರುಣ ಸಾವು – ಅವಶೇಷಗಳ ಅಡಿ ಸಿಲುಕಿದ 60 ಮಕ್ಕಳು

ಅತ್ತೆ ಮಾತನ್ನ ಕೇಳಿ ನನ್ನ ಗಂಡ ಕಿರುಕುಳ ಕೊಡ್ತಿದ್ದಾನೆ ಎಂದು ಬುಧವಾರ ತಂದೆಗೆ ಕರೆ ಮಾಡಿ ಸ್ಪಂದನಾ ಕಣ್ಣೀರಿಟ್ಟಿದ್ದಳು. ಸ್ವಲ್ಪ ಹೊತ್ತು ಬಿಟ್ಟು ಮತ್ತೆ ಕರೆ ಮಾಡಿ ನಿಮ್ಮ ಮಗಳು ಸಾವನ್ನಪ್ಪಿದ್ದಾಳೆ ಎಂದು ಪತಿ ಕುಟುಂಬಸ್ಥರು ತಿಳಿಸಿದ್ದರು. ಆಸ್ಪತ್ರೆಗೆ ಹೋಗಿ ನೋಡಿದಾಗ ಮಗಳು ಸಾವನ್ನಪ್ಪಿರೋದು ಪತ್ತೆಯಾಗಿದೆ. ಪತಿ ಹಾಗೂ ಅತ್ತೆ ಲಕ್ಷ್ಮಮ್ಮ ಮಗಳಿಗೆ ವರದಕ್ಷಿಣೆ ನೀಡುವಂತೆ ಕಿರುಕುಳ ನೀಡುತ್ತಿದ್ದರು ಎಂದು ಸ್ಪಂದನಾ ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ವಿಷ ಕುಡಿದು ಪತಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್; ಗಂಡನನ್ನೇ ಕೊಲೆ ಮಾಡಿಸಿದ ಗ್ರಾಪಂ ಸದಸ್ಯೆ!

ಸ್ಪಂದನಾ ಕುಟುಂಬಸ್ಥರು ಪತಿ ಅಭಿಷೇಕ್ ಮತ್ತು ಅತ್ತೆ ಲಕ್ಷ್ಮಮ್ಮ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ (Madanayakanahalli Police) ಠಾಣೆಗೆ ದೂರು ನೀಡಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

Share This Article