ವರ್ಷದಲ್ಲಿ 7 ಮಂದಿ ವಿರುದ್ಧ ರೇಪ್ ಕೇಸ್ ಹಾಕಿದ ಮಹಿಳೆ- ಆದ್ರೆ ಅದರಲ್ಲಿ 2 ಸುಳ್ಳು ಕೇಸ್!

Public TV
1 Min Read

ಚಂಡೀಗಢ: ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಮಹಿಳೆಯೊಬ್ಬರು ಕಳೆದ ಒಂದು ವರ್ಷದಲ್ಲಿ 7 ಮಂದಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ. ಆದರೆ ಅವುಗಳಲ್ಲಿ ಎರಡು ಸುಳ್ಳು ಪ್ರಕರಣಗಳು ಎಂದು ಸಾಬೀತಾಗಿರುವುದು ಅಚ್ಚರಿ ಮೂಡಿಸಿದೆ.

RAPE

ಮಹಿಳೆಯೊಬ್ಬರು ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಗುರುಗ್ರಾಮಧ ವಿವಿಧ ಠಾಣೆಗಳಲ್ಲಿ ದೂರು ದಾಖಲಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸುವಂತೆ ಸಾಮಾಜಿಕ ಕಾರ್ಯಕರ್ತೆ ದೀಪಿಕಾ ನಾರಾಯಣ ಭಾರದ್ವಾಜ್ ಅವರು ಹರಿಯಾಣ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ದೂರನ್ನು ಆಧರಿಸಿ ತನಿಖೆ ನಡೆಸುವಂತೆ ಡಿಸಿಪಿ ಹಾಗೂ ಎಸ್‍ಐಟಿ ತನಿಖೆಗೆ ವಹಿಸುವಂತೆ ಸಿಎಂಗೆ ಆಯೋಗ ಪತ್ರ ಬರೆದಿತ್ತು. ಇದನ್ನೂ ಓದಿ: ಆರ್ಯನ್ ಖಾನ್ ಬಂಧನ ಕೇಸ್‍ಗೆ ತಿರುವು – ಸಮೀರ್ ಆಪ್ತ ಕಿರಣ್ ಗೋಸಾವಿ ಬಂಧನ

ಕುತೂಹಲಕಾರಿ ಅಂಶವೆಂದರೆ ಅದೇ ಮಹಿಳೆ ಇತ್ತೀಚೆಗೆ ಡಿಎಲ್‍ಎಫ್ ಹಂತ 3 ಪೊಲೀಸ್ ಠಾಣೆಯಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.

POLICE JEEP

ಇದೇ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಮತ್ತು ಸಾಕ್ಷ್ಯಚಿತ್ರ ತಯಾರಕ ನಾರಾಯಣ ಭಾರದ್ವಾಜ್ ಅವರು, ಹನಿಟ್ರ್ಯಾಪ್ ಮತ್ತು ನಕಲಿ ಅತ್ಯಾಚಾರ ಪ್ರಕರಣಗಳನ್ನು ದಾಖಲಿಸುವ ಮೂಲಕ ಪುರುಷರನ್ನು ಲೂಟಿ ಮಾಡುತ್ತಿದ್ದಾರೆಂದು ಆರೋಪಿಸಿ ಮಹಿಳೆ ವಿರುದ್ಧ ದೂರು ನೀಡಿದ್ದರು.

ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾರೆಂದು ಆರೋಪಿಸಿ ಏಳು ಮಂದಿ ವಿರುದ್ಧ ಮಹಿಳೆ ದೂರು ನೀಡಿದ್ದರು. ಅದರಲ್ಲಿ ಎರಡು ಸುಳ್ಳು ಪ್ರಕರಣಗಳಾಗಿವೆ ಎಂಬುದನ್ನು ಪೊಲೀಸರು ಸಾಬೀತುಪಡಿಸಿದ್ದಾರೆ. ಇದನ್ನೂ ಓದಿ: ಮಹಿಳೆಗೆ ಕಲ್ಲಿನಿಂದ ಹೊಡೆದು, ಉಸಿರುಗಟ್ಟಿಸಿ ಅತ್ಯಾಚಾರಕ್ಕೆ ಯತ್ನಿಸಿದ 15ರ ಬಾಲಕ!

ಹರಿಯಾಣದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರೀತಿ ಭಾರದ್ವಾಜ್ ದಲಾಲ್ ಅವರು ಈ ಪ್ರಕರಣದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮಹಿಳೆಯರಿಗಾಗಿ ರಚಿಸಿರುವ ಕಾನೂನುಗಳನ್ನು ದುರುಪಯೋಗಪಡಿಸಿಕೊಳ್ಳದಂತೆ ಈ ವಿಷಯದಲ್ಲಿ ಕೂಲಂಕುಷ ತನಿಖೆಯಾಗಬೇಕು ಎಂದು ಕೋರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *