ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ- ಕೊಲೆ ಶಂಕೆ

By
1 Min Read

ರಾಯಚೂರು: ಇಲ್ಲಿನ ಲಿಂಗಸುಗೂರು (Lingasaguu Taluku) ತಾಲೂಕಿನ ಹಟ್ಟಿ ಚಿನ್ನದಗಣಿಯಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ.

ಹಟ್ಟಿ ಚಿನ್ನದಗಣಿ ಕ್ಯಾಂಪಿನ ಗುಂಡುರಾವ್ ಕಾಲೋನಿಯಲ್ಲಿ ಘಟನೆ ನಡೆದಿದೆ. ಮೃತ ಮಹಿಳೆಯನ್ನ ಮಂಜುಳಾ (45) ಅಂತ ಗುರುತಿಸಲಾಗಿದೆ. ಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಲ್ಯಾಬ್ ಟೆಕ್ನೀಷಿಯನ್ ಆಗಿದ್ದ ಮಂಜುಳಾ ಸಾವನ್ನಪ್ಪಿದ್ದಾರೆ.

ಕೊಲೆ ಮಾಡಿ ಬೆಂಕಿ ಹಚ್ಚಿರಬಹುದು ಅಂತ ಶಂಕಿಸಲಾಗಿದೆ. ಮಂಜುಳಾ ಮನೆಯಿಂದ ಸ್ವಲ್ಪ ದೂರದಲ್ಲಿ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಬೆಳಗ್ಗಿನ ಜಾವ ಘಟನೆ ನಡೆದಿದ್ದು, ಪೊಲೀಸರು ಭೇಟಿ ನೀಡಿದಾಗ ಇನ್ನೂ ಬೆಂಕಿ ಹೊತ್ತಿ ಉರಿಯುತ್ತಿತ್ತು.  ಇದನ್ನೂ ಓದಿ: ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರ ಬಂಧನ

ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸ್ ತನಿಖೆ ಬಳಿಕ ಸಾವಿನ ಬಗ್ಗೆ ನಿಖರ ಮಾಹಿತಿ ತಿಳಿದುಬರಲಿದೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್