ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ – ವೈದ್ಯರಿಲ್ಲದೆ ಮಹಿಳೆಯರಿಂದಲೇ ಹೆರಿಗೆ

1 Min Read

ಮಂಗಳೂರು: ರೈಲಿನಲ್ಲೇ ಮಹಿಳೆಯೊಬ್ಬರು ಮಗುವಿಗೆ ಜನ್ಮ (Delivery) ನೀಡಿದ ಘಟನೆ ಮಂಗಳೂರು-ಬೆಂಗಳೂರು ರೈಲಿನಲ್ಲಿ (Mangaluru-Bengaluru Train) ನಡೆದಿದೆ.

- Advertisement -

ಮಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ತುಂಬು ಗರ್ಭಿಣಿಗೆ (Pregnant) ರೈಲಿನಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದೆ. ವೈದ್ಯರಿಲ್ಲದೇ 30 ನಿಮಿಷದವರೆಗೂ ಕಾದ ಜನ ಬಳಿಕ ಹೆರಿಗೆಗಾಗಿ ಪರದೆ ಕಟ್ಟಿ ರೈಲಿನಲ್ಲಿದ್ದ ಮಹಿಳೆಯರೇ ಹೆರಿಗೆ ಮಾಡಿಸಿದ್ದಾರೆ. ವೈದ್ಯಕೀಯ ಸೌಲಭ್ಯವಿಲ್ಲದೆ ತೀವ್ರ ರಕ್ತ ಸಾವ್ರದಿಂದ ಬಳಲುತ್ತಿದ್ದ ಮಹಿಳೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಲಾಗಿದೆ. ಇದನ್ನೂ ಓದಿ: ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್ ರೆಡಿ: ಅಮೆರಿಕ ಮುಂದೆ ಹೊಸ ‘ಶಾಂತಿ’ ಸಂಧಾನ

- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್‌ನಲ್ಲಿ (BC Road) ರೈಲು ನಿಲ್ಲಿಸಿ ಮಹಿಳೆಯರೇ ಹೆರಿಗೆ ಮಾಡಿಸಿದ್ದಾರೆ. ಸದ್ಯ ತಾಯಿ ಮಗು ಸುರಕ್ಷಿತವಾಗಿದ್ದು, ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನೆಟ್‌ವರ್ಕ್ ಸಮಸ್ಯೆ – ಆನ್‌ಲೈನ್ ಪೇಮೆಂಟ್, ಬುಕ್ಕಿಂಗ್‌ಗೆ ಭಾರೀ ಪ್ರಾಬ್ಲಂ

- Advertisement -

- Advertisement -

Share This Article