ಆರೋಪಿ ಚೇಸಿಂಗ್, ಗುಂಡೇಟಿಗೆ ಮಹಿಳೆ ಸಾವು – ಐವರು ಪೊಲೀಸರಿಗೆ ಗಾಯ

Public TV
1 Min Read

ಡೆಹ್ರಾಡೂನ್: ಮಹಿಳೆಯೊಬ್ಬರು ಗುಂಡೇಟಿಗೆ ಬಲಿಯಾಗಿದ್ದರಿಂದ ಪೊಲೀಸರು ವಿರುದ್ಧ ಜನರು ಪ್ರತಿಭಟನೆ ನಡೆಸಿರುವ ಘಟನೆ ಉತ್ತರಖಂಡದ (Uttarakhand) ಮೊರಾದಾಬಾದ್‍ನಲ್ಲಿ (Moradabad) ನಡೆದಿದೆ. ಅಲ್ಲದೇ ಘಟನೆಯಲ್ಲಿ ಐವರು ಪೊಲೀಸರು ಗಾಯಗೊಂಡಿದ್ದಾರೆ.

ಆರೋಪಿಯನ್ನು ಬಂಧಿಸಲು ಮೊರಾದಾಬಾದ್ ಪೊಲೀಸರು ಉಧಮ್ ಸಿಂಗ್ ನಗರಕ್ಕೆ ತೆರಳಿದ್ದರು. ಈ ವೇಳೆ ಆರೋಪಿ ಭರತ್‍ಪುರ ಗ್ರಾಮದಿಂದ ಪರಾರಿಯಾಗಿದ್ದಾನೆ ಮತ್ತು ಸ್ಥಳಕ್ಕೆ ಹೋದ ಪೊಲೀಸರನ್ನು ಒತ್ತೆಯಾಳಾಗಿ ಇರಿಸಿಕೊಂಡು ಅವರ ಬಳಿ ಇದ್ದ ಗನ್‍ಗಳನ್ನು ಕಸಿದುಕೊಂಡಿದ್ದಾನೆ ಎಂದು ಮೊರಾದಾಬಾದ್ ಉಪ ಪೊಲೀಸ್ ಮಹಾನಿರೀಕ್ಷಕ (ಡಿಐಜಿ) ಶಲಭ್ ಮಾಥುರ್ ಹೇಳಿದ್ದಾರೆ. ಇದನ್ನೂ ಓದಿ: ವಿಶ್ವದಲ್ಲೇ ಫಸ್ಟ್‌ – ಹಸುಗಳ ತೇಗು, ಹೂಸಿಗೂ ತೆರಿಗೆ ವಿಧಿಸಿದ ನ್ಯೂಜಿಲೆಂಡ್‌!

ಈ ವೇಳೆ ನಮ್ಮ ಐವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಇದೀಗ ಎಲ್ಲರೂ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಈ ವಿಚಾರದಲ್ಲಿ ನ್ಯಾಯಯುತವಾಗಿ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಪಟಾಕಿ ಮಾರಾಟಕ್ಕೆ ಅನುಮತಿ ನೀಡಿ – ಕೇಜ್ರಿವಾಲ್‍ಗೆ ಸ್ಟಾಲಿನ್ ಪತ್ರ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *