ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರು ನದಿಗೆ ಉರುಳಿದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಮಂಡಗದ್ದೆ (Mandagadde) ಬಳಿ ನಡೆದಿದೆ.
ಮೃತ ಮಹಿಳೆಯನ್ನು ಕುಂದಾಪುರದ (Kundapura) ತೆಕ್ಕಟ್ಟೆಯ ನಿವಾಸಿ ಸವಿತಾ ದೇವಾಡಿಗ (57) ಎಂದು ಗುರುತಿಸಲಾಗಿದೆ. ತೆಕ್ಕಟ್ಟೆಯ ಶಂಕರ ದೇವಾಡಿಗ ಅವರು ತಮ್ಮ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಕುಟುಂಬದ ಆರು ಮಂದಿ ಸದಸ್ಯರೊಂದಿಗೆ ಶಿವಮೊಗ್ಗದಲ್ಲಿರುವ (Shivamogga) ಮಗಳ ಮನೆಗೆ ತೆರಳುತ್ತಿದ್ದರು. ಬೆಳಿಗ್ಗೆ 11 ಗಂಟೆ ಸುಮಾರಿಗೆ ಮಂಡಗದ್ದೆ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ರಸ್ತೆ ಪಕ್ಕದಲ್ಲಿದ್ದ ನದಿಗೆ ಉರುಳಿದೆ. ಇದನ್ನೂ ಓದಿ: ಲಾರಿ ಓವರ್ ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ – ನಾಲ್ವರು ದುರ್ಮರಣ
ಕಾರು ನೀರಿನಲ್ಲಿ ಮುಳುಗುತ್ತಿದ್ದಂತೆಯೇ ಸ್ಥಳೀಯರು ರಕ್ಣಣೆಗೆ ಮುಂದಾಗಿದ್ದಾರೆ. ಆದರೆ, ಶಂಕರ ದೇವಾಡಿಗ ಅವರ ಪತ್ನಿ ಸವಿತಾ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಅಪಘಾತದಲ್ಲಿ ಪೆಟ್ಟಾಗಿ ಅವರ ಸಾವು ಸಂಭವಿಸಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ.
ಶಂಕರ ದೇವಾಡಿಗ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರ ಪುತ್ರರಾದ ಅರುಣ್ ದೇವಾಡಿಗ ಮತ್ತು ಅಶ್ವತ್ಥ ದೇವಾಡಿಗ, ಪುತ್ರಿ ಅಮೃತಾ, ಅಳಿಯ ಸುರೇಶ್ ದೇವಾಡಿಗ ಹಾಗೂ ಎರಡೂವರೆ ವರ್ಷದ ಮೊಮ್ಮಗ ಅಭಿಶ್ರೇಯ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತದಿಂದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕ್ರೇನ್ ಸಹಾಯದಿಂದ ನದಿಯಿಂದ ಹೊರತೆಗೆಯಲಾಯಿತು. ಈ ಸಂಬಂಧ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಟ್ರೈನಿ ನರ್ಸ್ ಪ್ರಿಯತಮೆಯನ್ನು ಕತ್ತು ಸೀಳಿ ಕೊಂದ ಪ್ರಿಯಕರ – ಬಳಿಕ ತಾನೂ ಆತ್ಮಹತ್ಯೆಗೆ ಯತ್ನ