ಮದ್ಯ ಸೇವಿಸಿ ಅಡ್ಡಾದಿಡ್ಡಿ ಕಾರ್ ಚಲಾಯಿಸಿದವನಿಗೆ ಮಹಿಳೆಯಿಂದ ಚಪ್ಪಲಿ ಸೇವೆ

Public TV
1 Min Read

ವಿಜಯಪುರ: ಮದ್ಯಪಾನ ಮಾಡಿ ರಸ್ತೆಯಲ್ಲಿ ಅಡ್ಡಾದಿಡ್ಡಿ ಕಾರ್ (Car) ಚಲಾಯಿಸಿ ಅಪಘಾತ ಮಾಡಿದ ವ್ಯಕ್ತಿಗೆ ಮಹಿಳೆಯೊಬ್ಬಳು (Woman) ಚಪ್ಪಲಿ ಸೇವೆ ಮಾಡಿರುವ ಘಟನೆ ವಿಜಯಪುರದಲ್ಲಿ (Vijaypura) ನಡೆದಿದೆ.

ನಗರದ ಸ್ಟೇಷನ್ ರಸ್ತೆಯಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದೆ. ಮದ್ಯ ಸೇವಿಸಿ ಅಡ್ಡಾದಿಡ್ಡಿ ಕಾರ್ ಚಾಲನೆ ಮಾಡಿ 2 ಆಟೋ ಹಾಗೂ 1 ಬೈಕ್‌ಗೆ ಚಾಲಕ ಡಿಕ್ಕಿ ಹೊಡೆದಿದ್ದಾನೆ. ಇದರಿಂದ 1 ಆಟೋ ಪಲ್ಟಿಯಾಗಿದೆ. ಪಲ್ಟಿಯಾದ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಕಾರ್ ಚಾಲಕನಿಗೆ (Driver) ಚಪ್ಪಲಿಯಿಂದ (Slipper) ಥಳಿಸಿದ್ದಾಳೆ.

ಬೇಜವಾಬ್ದಾರಿಯಾಗಿ ಹಾಗೂ ಮದ್ಯ ಸೇವಿಸಿ ಕಾರ್ ಚಾಲನೆ ಮಾಡಿ ಅಪಘಾತ ಮಾಡಿರುವುದಕ್ಕೆ ಆಕ್ರೋಶಗೊಂಡ ಮಹಿಳೆ ಚಪ್ಪಲಿ ಏಟು ನೀಡಿದ್ದಾಳೆ. ಆಟೋಗಳಲ್ಲಿ ಹಾಗೂ ಬೈಕ್‌ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಹಿಳೆ ಕಾರ್ ಚಾಲಕನಿಗೆ ಚಪ್ಪಲಿ ಏಟು ನೀಡುತ್ತಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಮಸ್ಕತ್‌ನಿಂದ ಭಾರತಕ್ಕೆ ಅಕ್ರಮ ಚಿನ್ನ ಸಾಗಾಟ – 2.28 ಕೋಟಿ ರೂ. ಮೌಲ್ಯದ ಚಿನ್ನದ ಧೂಳು ವಶ

ಘಟನೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಕಾರ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಗ್ಯಾಸ್ ಏಜೆನ್ಸಿ ಸಮೀಪದ ಸ್ಕ್ರಾಪ್ ಗೋಡೌನಲ್ಲಿ ಅಗ್ನಿ ಅವಘಡ

Share This Article