ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯವಾದ ಯುವಕ ಸೇರಿ ಇಬ್ಬರಿಂದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

By
1 Min Read

– ಮತ್ತು ಬರುವ ಆಹಾರ ನೀಡಿ ಕೃತ್ಯ
– ವೀಡಿಯೋ ಮಾಡಿ ಬೆದರಿಕೆ

ನವದೆಹಲಿ: ಡೇಟಿಂಗ್ ಆ್ಯಪ್‌ನಲ್ಲಿ (Dating App) ಪರಿಚಯವಾದ ವ್ಯಕ್ತಿಯೊಬ್ಬ ಮತ್ತೊಬ್ಬ ಯುವಕನೊಂದಿಗೆ ಸೇರಿ ಯುವತಿಯನ್ನು ಹೋಟೆಲ್‌ಗೆ ಕರೆದುಕೊಂಡು ಹೋಗಿ ಮತ್ತು ಬರುವ ಆಹಾರ ನೀಡಿ ಬಳಿಕ ಅತ್ಯಾಚಾರ (Rape) ಎಸಗಿರುವ ಘಟನೆ ದೆಹಲಿಯ (Delhi) ಸೆಕ್ಟರ್ 50 (Sector 50) ಪ್ರದೇಶದಲ್ಲಿ ನಡೆದಿದೆ.

ಯುವತಿ ಪೊಲೀಸರಿಗೆ ನೀಡಿರುವ ದೂರಿನ ಪ್ರಕಾರ ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯವಾದ ವ್ಯಕ್ತಿ ಆಕೆಯನ್ನು ಜೂನ್ 29ರಂದು ಹೋಟೆಲ್‌ಗೆ ಬರುವಂತೆ ಹೇಳಿದ್ದ. ಅಲ್ಲಿ ಆಕೆಗೆ ಇಬ್ಬರು ಪುರುಷರು ತಿನ್ನಲು ಆಹಾರ ನೀಡಿದ್ದು, ಅದನ್ನು ಸೇವಿಸಿದ ಬಳಿಕ ಆಕೆ ಪ್ರಜ್ಞೆ ಕಳೆದುಕೊಂಡಿದ್ದಾಗಿ ತಿಳಿಸಿದ್ದಾಳೆ.

ತನ್ನ ಪ್ರಜ್ಞಾಹೀನ ಸ್ಥಿತಿಯ ಲಾಭ ಪಡೆದು ಅತ್ಯಾಚಾರ ಎಸಗಿದ್ದಾರೆ. ಮಾತ್ರವಲ್ಲದೆ ಕೃತ್ಯದ ವೀಡಿಯೋವನ್ನು ಕೂಡಾ ಮಾಡಿದ್ದಾರೆ. ತನಗೆ ಪ್ರಜ್ಞೆ ಬಂದ ಬಳಿಕ ನಡೆದ ಘಟನೆ ತಿಳಿದು ವಿರೋಧ ವ್ಯಕ್ತಪಡಿಸಿದ್ದಾಳೆ. ಆದರೆ ಆರೋಪಿಗಳು ತನ್ನ ವೀಡಿಯೋವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾಗಿ ಆರೋಪಿಸಿದ್ದಾಳೆ. ಇದನ್ನೂ ಓದಿ: ಕೌಟುಂಬಿಕ ಕಲಹ ಸರಿ ಮಾಡ್ತೀನಿ ಅಂತ ಬಂದ ಜ್ಯೋತಿಷಿ – ಚಿನ್ನ, ಹಣ ದೋಚಿ ಬೀರುವಿನಲ್ಲಿ ನಿಂಬೆಹಣ್ಣು ಇಟ್ಟು ಹೋದ

ಯುವತಿ ಅಲ್ಲಿಂದ ಹೇಗೋ ತಪ್ಪಿಸಿಕೊಂಡು ಬಂದು ಪೊಲೀಸರಿಗೆ ದೂರು ನೀಡಿದ್ದಾಳೆ. ಘಟನೆ ಬಗ್ಗೆ ಸೆಕ್ಟರ್ 50 ಪೊಲೀಸ್ ಠಾಣೆಯಲ್ಲಿ ಇಬ್ಬರು ಅಪರಿಚಿತ ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರದ ಆರೋಪದ ಮೇಲೆ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇದೀಗ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕದ್ದು ತಂದಿದ್ದ ಜೆಸಿಬಿ ಬಳಸಿ ATM ಕಳ್ಳತನಕ್ಕೆ ಯತ್ನ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್