ಬಿಜೆಪಿ ಶಾಸಕನಿಗೆ ಮಹಿಳೆಯಿಂದ ಬ್ಲ್ಯಾಕ್‍ಮೇಲ್ – ತಮಿಳುನಾಡಿನಲ್ಲಿ ನಾಲ್ವರು ವಶ

Public TV
1 Min Read

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಪದೇ ಪದೇ ಸಿಡಿ ಕೇಸ್ ಸೇರಿದಂತೆ ಹಲವು ಬ್ಲ್ಯಾಕ್‍ಮೇಲ್ ಕೇಸ್ ಸದ್ದು ಮಾಡುತ್ತಿದೆ. ಈ ನಡುವೆ ಇದೀಗ ಮತ್ತೊಂದು ಬ್ಲ್ಯಾಕ್‍ಮೇಲ್ ಕೇಸ್ ವರದಿಯಾಗಿದೆ.

ಕರ್ನಾಟಕ ಬಿಜೆಪಿ ಶಾಸಕರೊಬ್ಬರಿಗೆ ಮಹಿಳೆ ಬ್ಲ್ಯಾಕ್‍ಮೇಲ್ ಮಾಡಿದ ಆರೋಪ ಕೇಳಿಬಂದಿದೆ. ಉತ್ತರ ಕರ್ನಾಟಕ ಮೂಲದ ಶಾಸಕರಿಗೆ ಮಹಿಳೆಯೊಬ್ಬರು ಬ್ಲ್ಯಾಕ್‍ಮೇಲ್ ಮಾಡಿದ್ದು ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: ಕುತೂಹಲ ಮೂಡಿಸಿದ ರಾಜ್ಯ ಸಚಿವ ಸಂಪುಟ ಸರ್ಕಸ್ – ಸೋಮವಾರ ಬೊಮ್ಮಾಯಿ ನಡಿಗೆ ವರಿಷ್ಠರೆಡೆಗೆ

ಶಾಸಕರ ದೂರಿನ ಮೇರೆಗೆ ಇದೀಗ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರು ಪೊಲೀಸರು ತಮಿಳುನಾಡಿನಲ್ಲಿ ಆರೋಪಿಗಳನ್ನ ವಶಕ್ಕೆ ಪಡೆದು ಬೆಂಗಳೂರಿಗೆ ಕರೆತರುತ್ತಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಇದನ್ನೂ ಓದಿ: ಪಂಚಭೂತಗಳಲ್ಲಿ ಸಂಗೀತ ಸಾಮ್ರಾಜ್ಞೆ ಲತಾ ಮಂಗೇಶ್ಕರ್ ಲೀನ

Share This Article
Leave a Comment

Leave a Reply

Your email address will not be published. Required fields are marked *