ಕಾರಿನಡಿಯಲ್ಲಿ ಸಿಲುಕಿದ್ದ ಮಹಿಳೆಯನ್ನ ರಕ್ಷಿಸಿದ ಯುವಕರು

Public TV
1 Min Read

ದಾವಣಗೆರೆ: ಕಾರಿನಡಿ ಸಿಕ್ಕಿಹಾಕಿಕೊಂಡಿದ್ದ ಮಹಿಳೆಯನ್ನು ರಕ್ಷಿಸಿ ಯುವಕರು ಮಾನವೀಯತೆ ಮೆರೆದಿರುವ ಘಟನೆ ಜಿಲ್ಲೆಯ ಸಮೀಪದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.

ಕೆ.ಬಿ ಕಾಲೋನಿಯಿಂದ ದಾವಣಗೆರೆಗೆ ಮಂಜುನಾಥ್ ಹಾಗೂ ದಂಪತಿ ಕಾರಿನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಟೈರ್ ಬ್ಲಾಸ್ಟ್ ಆಗಿ ಪಲ್ಟಿಯಾಗಿದೆ. ಕಾರು ಪಲ್ಟಿಯಾದ ಪರಿಣಾಮ ಕಾರಿನಡಿ ಮಹಿಳೆಯೊಬ್ಬರು ಸಿಲುಕಿಕೊಂಡಿದ್ದಾರೆ.

ಈ ವೇಳೆ ಅಲ್ಲೇ ರಸ್ತೆ ಪಕ್ಕದಲ್ಲಿದ್ದ ಹಳೇ ಕುಂದುವಾಡ ಗ್ರಾಮದಲ್ಲಿ ಕ್ರಿಕೆಟ್ ಆಡುತ್ತಿದ್ದ ಯುವಕರ ತಂಡ ಗಮನಿಸಿದ್ದು, ತಕ್ಷಣ ಬಂದು ಸಮಯ ಪ್ರಜ್ಞೆಯಿಂದ ಸಿಲುಕಿದ್ದ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ನಂತರ ಗಂಭೀರವಾಗಿ ಗಾಯಗೊಂಡಿದ್ದ ದಂಪತಿಯನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ.

ಈ ಘಟನೆ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share This Article
Leave a Comment

Leave a Reply

Your email address will not be published. Required fields are marked *