ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ

Public TV
1 Min Read

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಸೋಮವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ (Women’s Reservation Bill) ಅನುಮೋದನೆ ದೊರೆತಿದೆ ಎಂದು ಮೂಲಗಳು ತಿಳಿಸಿವೆ.

ನಾಳೆ (ಮಂಗಳವಾರ) ಹೊಸ ಸಂಸತ್ತಿನಲ್ಲಿ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ. ಭಾನುವಾರ (ಸೆ.17) ನಡೆದ ಸರ್ವಪಕ್ಷ ಸಭೆಯಲ್ಲಿ ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು ಮಸೂದೆಯನ್ನು ಅಂಗೀಕರಿಸುವಂತೆ ಒತ್ತಾಯಿಸಿದ್ದವು. ವಿಶೇಷ ಅಧಿವೇಶನದಲ್ಲಿ ಹೊಸ ಸಂಸತ್ತಿನ ಕಟ್ಟಡದಲ್ಲಿ ಮಸೂದೆಯನ್ನು ಅಂಗೀಕರಿಸಬೇಕು ಎಂದು ಒತ್ತಾಯಿಸಲಾಗಿತ್ತು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ. ಇದನ್ನೂ ಓದಿ: ಹಳೆ ಸಂಸತ್‌ ಭವನಕ್ಕೆ ಬೀಳ್ಕೊಡುಗೆ – ನೆಹರೂ ಸ್ಮರಿಸಿದ ಪ್ರಧಾನಿ ಮೋದಿ

ಸಭೆಯ ನಂತರ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, “ಈ ಬಾರಿಯ ಸಂಸತ್ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಎಲ್ಲಾ ವಿರೋಧ ಪಕ್ಷಗಳು ಒತ್ತಾಯಿಸಿವೆ ಎಂದು ತಿಳಿಸಿದ್ದರು.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ಮಸೂದೆ ಮಂಡನೆಯಾಗಿ ಹಲವು ವರ್ಷಗಳೇ ಕಳೆದಿವೆ. ಇದಕ್ಕೆ ಸಂಸತ್‌ನ ಉಭಯ ಸದನಗಳಲ್ಲಿ ಒಪ್ಪಿಗೆ ಸಿಕ್ಕಿಲ್ಲ. ಇದನ್ನೂ ಓದಿ: ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರ್ನಾಟಕದ ಹೊಯ್ಸಳ ದೇವಾಲಯಗಳು ಸೇರ್ಪಡೆ

ಮಹಿಳಾ ಸಂಸದರು ಲೋಕಸಭೆಯ 15% ಗಿಂತ ಕಡಿಮೆ ಪಾಲನ್ನು ಹೊಂದಿದ್ದಾರೆ. ಮಹಿಳೆಯರ ಪ್ರಾತಿನಿಧ್ಯವು ಅನೇಕ ರಾಜ್ಯಗಳ ವಿಧಾನಸಭೆಗಳಲ್ಲಿ 10% ಗಿಂತ ಕಡಿಮೆಯಾಗಿದೆ. ಈ ಮಸೂದೆಯನ್ನು ಆರಂಭದಲ್ಲಿ ಸೆಪ್ಟೆಂಬರ್ 12, 1996 ರಂದು ಸಂಸತ್ತಿನಲ್ಲಿ ಪರಿಚಯಿಸಲಾಗಿತ್ತು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್