ನವದೆಹಲಿ: ಕೇರಳದ (Kerala) ಆರು ರಸ್ತೆ ಯೋಜನೆಗೆ ಸಂಬಂಧಿಸಿದಂತೆ ವಯನಾಡ್ (Wayanad) ಸಂಸದೆ ಪ್ರಿಯಾಂಕಾ ವಾದ್ರಾ (Priyanka Gandhi Vadra) ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಈ ವೇಳೆ ಕೆಲವು ಯೋಜನೆಗಳು ಕೇರಳ ಸರ್ಕಾರದ ಅಡಿಯಲ್ಲಿ ಬರುತ್ತವೆ. ಅವುಗಳನ್ನು ನಿರ್ವಹಿಸಲು ಸಾಧ್ಯವಿಲ್ಲ. ಕೇಂದ್ರದ ಅಡಿಯಲ್ಲಿ ಬರುವ ಯೋಜನೆಗಳನ್ನು ಪರಿಶೀಲಿಸುವುದಾಗಿ ಅವರು ಭರವಸೆ ನೀಡಿದರು.
ಮಾತುಕತೆಯ ವೇಳೆ ಗಡ್ಕರಿ ಇತ್ತೀಚಿಗೆ ನಿಮ್ಮ ಸಹೋದರ ರಾಹುಲ್ ಗಾಂಧಿ (Rahul Gandhi) ಅವರು ತಮ್ಮ ಕ್ಷೇತ್ರ ರಾಯ್‌ಬರೇಲಿಯ ರಸ್ತೆಯ ಬಗ್ಗೆ ಭೇಟಿಯಾದ ವಿಚಾರವನ್ನು ಪ್ರಸ್ತಾಪಿಸಿ, ನಿಮ್ಮ ಸಹೋದರನ ಕೆಲಸಗಳನ್ನು ಮಾಡಿ ನಿಮ್ಮ ಕ್ಷೇತ್ರದ ಕೆಲಸಗಳನ್ನ ಮಾಡಿಲ್ಲ ಎಂದರೆ ಮಾಡಿಕೊಟಿಲ್ಲ ಎಂದು ದೂರುತ್ತೀರಿ ಅಲ್ವಾ ಎಂದು ಹೇಳಿ ಕಾಲೆಳೆದರು. ಗಡ್ಕರಿ ಅವರ ಈ ಮಾತಿಗೆ ಅಲ್ಲಿದ್ದ ಎಲ್ಲರೂ ನಗೆಗಡಲಲ್ಲಿ ತೇಲಿದರು. ಇದನ್ನೂ ಓದಿ: 2026ರ ಅಂತ್ಯಕ್ಕೆ ದೇಶಾದ್ಯಂತ ಉಪಗ್ರಹ ಆಧಾರಿತ ಟೋಲ್: ಗಡ್ಕರಿ ಘೋಷಣೆ
VIDEO | Congress MP Priyanka Gandhi Vadra (@priyankagandhi) met Union Minister Nitin Gadkari (@nitin_gadkari) in Parliament Complex earlier today.
(Source: Third Party)
(Full video available on PTI Videos – https://t.co/n147TvrpG7) pic.twitter.com/4DOHwWY3EI
— Press Trust of India (@PTI_News) December 18, 2025
ಗಡ್ಕರಿ ಮಾತಿಗೆ ಪ್ರಿಯಾಂಕಾ ವಾದ್ರಾ, ಎಡ ಸರ್ಕಾರದ ವ್ಯಾಪ್ತಿಯಲ್ಲಿರುವ ಕೇರಳಕ್ಕೆ ಸಂಬಂಧಿಸಿದ ತಮ್ಮ ಪ್ರಸ್ತಾವನೆಗಳನ್ನು ರಾಜ್ಯದಲ್ಲಿ ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: 56,000 ಪಾಕಿಸ್ತಾನಿ ಭಿಕ್ಷುಕರನ್ನು ದೇಶದಿಂದ ಹೊರಹಾಕಿದ ಸೌದಿ ಅರೇಬಿಯಾ

