ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣ ವೇಳೆ ಮಣ್ಣಿನೊಳಗೆ ಸಿಲುಕಿದ ಕಾರ್ಮಿಕರು – ಓರ್ವ ಸಾವು

Public TV
1 Min Read

ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ (National Highway) ರಸ್ತೆ ಅಗಲೀಕರಣ (Road Widening) ವೇಳೆ ಭಾರೀ ಅವಘಡವೊಂದು ಸಂಭವಿಸಿದ್ದು, ಮಣ್ಣು ಕುಸಿದ ಪರಿಣಾಮ ಓರ್ವ ಕಾರ್ಮಿಕ (Labour) ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಶೃಂಗೇರಿ (Sringeri) ತಾಲೂಕಿನ ನೆಮ್ಮಾರು ಬಳಿ ನಡೆದಿದೆ.

ಮುಜೀಂ (30) ಮೃತ ದುರ್ದೈವಿ. ಜೆಸಿಬಿಯಿಂದ ಮಣ್ಣು ತೆಗೆಯುವ ವೇಳೆ ಮಣ್ಣು ಕುಸಿದಿದ್ದು, ಇಬ್ಬರು ಕಾರ್ಮಿಕರು ಮಣ್ಣಿನೊಳಗೆ ಸಿಲುಕಿಕೊಂಡಿದ್ದಾರೆ. ಘಟನೆಯ ಪರಿಣಾಮ ಮುಜೀಂ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಪತ್ನಿಯ ಕಣ್ಣು, ಕೆನ್ನೆಯನ್ನ ಕಚ್ಚಿ ಮಾಂಸ ಹೊರ ತೆಗೆದ ಕಟುಕ ಪತಿ!

ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಶೃಂಗೇರಿ ಪೊಲೀಸರು ಭೇಟಿ ನೀಡಿದ್ದು, ಅಗ್ನಿಶಾಮಕ ದಳದಿಂದ ಮಣ್ಣಿನಡಿ ಸಿಲುಕಿದ್ದ ಕಾರ್ಮಿಕರ ರಕ್ಷಣಾ ಕಾರ್ಯ ಮುಂದುವರಿದಿದೆ. ನೆಮ್ಮಾರು ಸಮೀಪದ ತನಿಕೋಡು ಚೆಕ್ ಪೋಸ್ಟ್ ಬಳಿ ಅವಘಡ ಸಂಭವಿಸಿದೆ. ಇದನ್ನೂ ಓದಿ: 10ರ ಬಾಲಕಿ ಮೇಲೆ ಇಬ್ಬರು ಅಪ್ರಾಪ್ತರಿಂದಲೇ ಗ್ಯಾಂಗ್‌ರೇಪ್ – ಪರಸ್ಪರ ವೀಡಿಯೋ ಮಾಡಿಕೊಂಡ ಬಾಲಕರು!

Share This Article